Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ: ನಾಲ್ಕು ಶಕ್ತಿ ದೇವತೆಗಳ ಕರಗಗಳ ನಗರ ಪ್ರದಕ್ಷಿಣೆ ಆರಂಭ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ: ನಾಲ್ಕು ಶಕ್ತಿ ದೇವತೆಗಳ ಕರಗಗಳ ನಗರ ಪ್ರದಕ್ಷಿಣೆ ಆರಂಭ

ಅಕ್ಟೋಬರ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ.11: ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವದ ಮೂಲಕ ಭಾನುವಾರ ಚಾಲನೆ ನೀಡಲಾಯಿತು. ನಗರದ ಪಂಪಿನ ಕೆರೆಯ ಬನ್ನಿಮಂಟಪದಲ್ಲಿ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳೊಂದಿಗೆ ಕರಗೋತ್ಸವ ಆರಂಭಗೊಂಡಿದ್ದು, ನವರಾತ್ರಿ ಸಂಭ್ರಮಕ್ಕೆ ಅಧಿಕೃತವಾಗಿ ಚಾಲನೆ ದೊರೆಯಿತು.

ನಗರದ ರಾಜಾಸೀಟು ಸಮೀಪದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಕರಗವನ್ನು ಪಿ.ಪಿ. ಚಾಮಿ, ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಕರಗವನ್ನು ಜಿ.ಆರ್. ಗಿರೀಶ್, ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಕರಗವನ್ನು ಜಿ.ಜೆ. ಜಿಜೇಶ್ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಕರಗವನ್ನು ಎಂ.ಎಸ್. ಪ್ರಜ್ವಲ್ ಹೊತ್ತು ಮೆರವಣಿಗೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರ ಸ್ವಾಮಿ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಮಡಿಕೇರಿ ದಸರಾ ಸಮಿತಿ ಅಧ್ಯಕ್ಷೆ ಹಾಗೂ ನಗರಸಭಾ ಅಧ್ಯಕ್ಷೆ ಪಿ. ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿ ಸಬಿತಾ, ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಸೇರಿದಂತೆ ಹಲವು ಗಣ್ಯರು ಮತ್ತು ಭಕ್ತರು ಪಾಲ್ಗೊಂಡು ಶಕ್ತಿ ದೇವತೆಗಳಿಗೆ ಪೂಜೆ ಸಲ್ಲಿಸಿದರು.

ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಕರಗ ಸಿದ್ಧತೆ

ನವರಾತ್ರಿಯ ಮೊದಲ ದಿನವಾದ ಭಾನುವಾರ ಮಧ್ಯಾಹ್ನದ ಬಳಿಕ ನಾಲ್ಕು ಶಕ್ತಿ ದೇವತೆಗಳ ಕರಗಗಳನ್ನು ಹೊರುವ ವ್ರತಧಾರಿಗಳು ತಮ್ಮ ತಮ್ಮ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಾಂಪ್ರದಾಯಿಕ ವಾದ್ಯಗಳೊಂದಿಗೆ ಶಕ್ತಿ ದೇವತೆಗಳ ಬೆಳ್ಳಿಯ ಮುಖವಾಡಗಳು, ಮಲ್ಲಿಗೆ, ಸೇವಂತಿಗೆ, ಕನಕಾಂಬರ ಹೂವುಗಳು, ದೇವಿಯ ಪವಿತ್ರ ಆಯುಧಗಳು ಹಾಗೂ ಇತರ ಪೂಜಾ ಪರಿಕರಗಳನ್ನು ಹೊತ್ತು ಮೆರವಣಿಗೆಯ ಮೂಲಕ ಪಂಪಿನ ಕೆರೆಗೆ ಆಗಮಿಸಿದರು.

ಅಲ್ಲಿ ಶ್ರದ್ಧಾಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿ ಕರಗ ಕಟ್ಟುವ ಕಾರ್ಯ ಆರಂಭಿಸಲಾಯಿತು. ಕರಗಗಳ ಶೃಂಗಾರ ಪೂರ್ಣಗೊಂಡ ಬಳಿಕ ನಾಲ್ಕು ಶಕ್ತಿ ದೇವತೆಗಳನ್ನು ಆಹ್ವಾನಿಸಿ ವಿಶೇಷ ಪೂಜೆ ನೆರವೇರಿಸಲಾಯಿತು.

ನಂತರ ಕರಗಗಳನ್ನು ಶಿರದ ಮೇಲೆ ಹೊತ್ತ ವ್ರತಧಾರಿಗಳು ಶ್ರೀ ಚೌಡೇಶ್ವರಿ ದೇವಾಲಯ ಹಾಗೂ ಶ್ರೀ ಪೇಟೆ ರಾಮಮಂದಿರಕ್ಕೆ ತೆರಳಿ ಪೂಜೆ ಸ್ವೀಕರಿಸಿದರು. ಬಳಿಕ ಕರಗಗಳು ತಮ್ಮ ತಮ್ಮ ದೇವಾಲಯಗಳ ನೆಲೆಗಳಿಗೆ ಮರಳಿದವು.

225 ವರ್ಷಗಳ ಇತಿಹಾಸ ಹೊಂದಿರುವ ಕರಗೋತ್ಸವ

ಮಡಿಕೇರಿ ದಸರಾ ಮಹೋತ್ಸವವು ನಾಲ್ಕು ಶಕ್ತಿ ದೇವತೆಗಳ ಕರಗಗಳನ್ನು ಹೊರಡಿಸುವ ಮೂಲಕ ಆರಂಭಗೊಳ್ಳುವುದು ವಿಶೇಷವಾಗಿದೆ. ಈ ಆಚರಣೆಗೆ ಸುಮಾರು 225 ವರ್ಷಗಳ ಇತಿಹಾಸವಿದೆ ಎಂದು ಹೇಳಲಾಗುತ್ತದೆ.

ಕೊಡಗಿನ ಅರಸರ ಆಳ್ವಿಕೆಯ ಕಾಲದಲ್ಲಿ ಮಡಿಕೇರಿ ನಾಡಿನಲ್ಲಿ ಮಾರಕ ಸಾಂಕ್ರಾಮಿಕ ಕಾಯಿಲೆಗಳು ಕಾಣಿಸಿಕೊಂಡು, ಅಪಾರ ಸಾವು-ನೋವು ಸಂಭವಿಸಿತ್ತು. ಜನರು ನಾಡು ತೊರೆದು ಗುಳೆ ಹೋಗುವ ಪರಿಸ್ಥಿತಿಯೂ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಚಿಂತಿತರಾದ ಅರಸರು ನಾಡಿನಲ್ಲಿ ನೆಲೆಸಿದ್ದ ನಾಲ್ಕು ಶಕ್ತಿ ದೇವತೆಗಳ ಮೊರೆ ಹೋಗಿ ಜನರನ್ನು ರಕ್ಷಿಸುವಂತೆ ಪ್ರಾರ್ಥಿಸಿದರು.

ಅಲ್ಲದೆ, ನಾಲ್ಕು ಶಕ್ತಿ ದೇವತೆಗಳ ಕರಗಗಳನ್ನು ಮಡಿಕೇರಿ ದೊಡ್ಡಪೇಟೆಗೆ ಕರೆತಂದು ನಗರ ಪ್ರದಕ್ಷಿಣೆ ನಡೆಸುವ ಸಂಪ್ರದಾಯವನ್ನು ಆರಂಭಿಸಿದರು ಎಂಬ ಐತಿಹ್ಯವಿದೆ. ಅಂದು ಅರಸರ ಕಾಲದಲ್ಲಿ ಆರಂಭವಾದ ಈ ಆಚರಣೆ ಇಂದು ನಾಲ್ಕು ದೇವಾಲಯಗಳ ಸಮಿತಿಗಳ ನೇತೃತ್ವದಲ್ಲಿ ಉತ್ಸವದ ರೂಪದಲ್ಲಿ ಮುಂದುವರಿದಿದೆ.

ಭಕ್ತಿ, ಸಂಪ್ರದಾಯ ಮತ್ತು ಐತಿಹಾಸಿಕ ಪರಂಪರೆಯ ಸಂಗಮವಾಗಿರುವ ಕರಗೋತ್ಸವದೊಂದಿಗೆ ಮಡಿಕೇರಿಯಲ್ಲಿ ನವರಾತ್ರಿ ಹಾಗೂ ದಸರಾ ಸಂಭ್ರಮ ಕಳೆಗಟ್ಟಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.19: ಸ್ವಸ್ತಿಕ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಕೊಡವ ಚಲನಚಿತ್ರ…

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ಚಿಕ್ಕಪೇಟೆಯಿಂದ ಬೋಯಿಕೇರಿವರೆಗಿನ ರಸ್ತೆ ಮರು ಡಾಂಬರೀಕರಣಕ್ಕೆ ಆಗ್ರಹ

ನವೆಂಬರ್ 19, 2026

ಹೊಂಬೆಳಕು ಮಾಸಿಕ ತತ್ವ ಚಿಂತನಾಗೋಷ್ಠಿಯ 250ನೇ ವಿಶೇಷ ಕಾರ್ಯಕ್ರಮಕ್ಕೆ ಸಿದ್ಧತೆ

ನವೆಂಬರ್ 19, 2026

ಕೊಡವ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ವಿಶೇಷ, ವಿಶಿಷ್ಟ ಸ್ಥಾನ: ಮಹೇಶ್ ನಾಚಯ್ಯ; ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ದುಡಿ, ತಾಳ ಸೇರಿದಂತೆ ಹಲವು ಪರಿಕರಗಳ ವಿತರಣೆ

ನವೆಂಬರ್ 19, 2026

ರಾಷ್ಟ್ರೀಯ ಐಕ್ಯತಾ ದಿನ: ಮಡಿಕೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಕೊಡಗಿನ ಕ್ರೀಡಾಪಟುಗಳ ಅಮೋಘ ಸಾಧನೆ; ರಾಷ್ಟ್ರಮಟ್ಟದ ಚಾಂಪಿಯನ್‌ಶಿಪ್‌ಗೆ 17 ಕ್ರೀಡಾಪಟುಗಳ ಆಯ್ಕೆ

ನವೆಂಬರ್ 19, 2026

ಕಾವೇರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ನವೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.