Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ. 12: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ನೈಜ ಮತದಾರರ ಮತದಾನದ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಹಾಗೂ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದ ಇಂದಿರಾಗಾಂಧಿ ವೃತ್ತದ ಬಳಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಆರಂಭಿಸಿ, ಘೋಷಣೆಗಳನ್ನು ಕೂಗುತ್ತಾ ಹಳೇ ಖಾಸಗಿ ಬಸ್ ನಿಲ್ದಾಣದವರೆಗೆ ತೆರಳಿದರು. ಮತದಾರರ ಪಟ್ಟಿಯ ಪರಿಷ್ಕರಣೆಯ ಹೆಸರಿನಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಮತದಾರರ ಹಕ್ಕುಗಳನ್ನು ಕಸಿದು ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟುಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ವೇಳೆ ‘ಎಸ್‌ಐಆರ್ ಕೈಬಿಡಿ’, ‘ಜ್ಞಾನೇಶ್ ಕುಮಾರ್ ಅವರನ್ನು ಬಂಧಿಸಿ’ ಹಾಗೂ ‘ಸಂವಿಧಾನದ ಹಕ್ಕಿಗಾಗಿ ಹೋರಾಟ’ ಎಂಬ ಭಿತ್ತಿಪತ್ರಗಳನ್ನು ಪ್ರದರ್ಶಿಸಲಾಯಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ತೀತಿರ ಧರ್ಮಜ ಉತ್ತಪ್ಪ, ಎಸ್‌ಐಆರ್ ಪ್ರಕ್ರಿಯೆಯಿಂದ ನೈಜ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಆತಂಕವಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಕಳೆದ ಕೆಲವು ತಿಂಗಳುಗಳಿಂದ ಹೋರಾಟ ನಡೆಸುತ್ತಿದೆ ಎಂದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪಗಳನ್ನು ಪ್ರಶ್ನಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ ಎಂದು ಅವರು ಹೇಳಿದರು. ಯಾವುದೇ ನೈಜ ಮತದಾರನಿಗೆ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ ನ್ಯಾಯಕ್ಕಾಗಿ ಹೋರಾಟ ನಡೆಸಲಾಗುತ್ತಿದೆ. ಮೃತಪಟ್ಟ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವುದಕ್ಕೆ ಕಾಂಗ್ರೆಸ್ ವಿರೋಧಿಸುವುದಿಲ್ಲ. ಆದರೆ, ದೇಶದ ಪ್ರಜೆಗಳಾಗಿರುವ ನೈಜ ಮತದಾರರ ಮತದಾನದ ಹಕ್ಕನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ಪರವಾಗಿ ವರ್ತಿಸುತ್ತಿದ್ದಾರೆ ಎಂದೂ ಟೀಕಿಸಿದರು.

ಪ್ರತಿಭಟನೆಯ ಅಂಗವಾಗಿ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೆಲಕಾಲ ರಸ್ತೆ ತಡೆ ನಡೆಸಿದರು. ಇದರಿಂದ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್, ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಉಪಾಧ್ಯಕ್ಷರಾದ ಸುಜು ತಿಮ್ಮಯ್ಯ, ಕೆ.ಯು. ಅಬ್ದುಲ್ ರಜಾಕ್, ಪ್ರಕಾಶ್ ಆಚಾರ್ಯ, ವೆಂಕಟೇಶ್, ತೆನ್ನಿರ ಮೈನ, ಸೂರಜ್ ಹೊಸೂರು, ಟಿ.ಎಂ. ಅಯ್ಯಪ್ಪ, ಪಿ.ಎಲ್. ಸುರೇಶ್ ಸಂಪಾಜೆ, ಅಂಬೆಕಲ್ಲು ನವೀನ್, ಮಿನಾಜ್ ಪ್ರವೀಣ್, ಲೀಲಾ ಶೇಷಮ್ಮ, ಜಯಂತಿ ಶೆಟ್ಟಿ, ಅಪ್ರು ರವೀಂದ್ರ, ಪ್ರಭು ರೈ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ ಕಾವೇರಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್ಸ್ ಟ್ರೋಫಿ

ಅಕ್ಟೋಬರ್ 12, 2026

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026

ಸೋಮೇಶ್ವರ ದೇವಾಲಯದಲ್ಲಿ 21ನೇ ವರ್ಷದ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

ಅಕ್ಟೋಬರ್ 12, 2026

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 12: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ನೈಜ ಮತದಾರರ ಮತದಾನದ ಹಕ್ಕಿಗೆ…

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026

ಸೋಮೇಶ್ವರ ದೇವಾಲಯದಲ್ಲಿ 21ನೇ ವರ್ಷದ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

ಅಕ್ಟೋಬರ್ 12, 2026

ಹಿರಿಯ ಹಾಕಿ ಆಟಗಾರ್ತಿ ದೇವರಾಜಮ್ಮ ಅವರಿಗೆ ನಾಡೋಜ ಕಮಲ ಹಂಪನಾ ರಾಜ್ಯಪ್ರಶಸ್ತಿ

ಅಕ್ಟೋಬರ್ 12, 2026

ಕುಂಜಿಲ ಸರ್ಕಾರಿ ಶಾಲೆಗೆ ಹೆಮ್ಮೆಯ ದುಬೈ ಕನ್ನಡ ಸಂಘದಿಂದ ಆಟೋಪಕರಣ, ಪೀಠೋಪಕರಣಗಳ ಕೊಡುಗೆ; ಸರ್ಕಾರಿ ಶಾಲೆ ಉಳಿಸಿ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ಹಸ್ತಾಂತರ

ಅಕ್ಟೋಬರ್ 12, 2026

ಮಡಿಕೇರಿ ದಸರಾ ವಿದ್ಯುತ್ ದೀಪಾಲಂಕಾರ ಅಸಮರ್ಪಕ: ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ಆಕ್ಷೇಪ

ಅಕ್ಟೋಬರ್ 12, 2026

ಸುವರ್ಣ ಮಹೋತ್ಸವ ಸಂಭ್ರಮ: ಶ್ರೀ ಕೋಟೆ ಮಹಾಗಣಪತಿಗೆ 108 ಎಳನೀರು, ಪಂಚಾಮೃತ ಅಭಿಷೇಕ

ಅಕ್ಟೋಬರ್ 12, 2026

ಗಣೇಶೋತ್ಸವ ಸ್ವಾತಂತ್ರ್ಯ ಸಂಗ್ರಾಮದ ಪ್ರತೀಕ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 11, 2026

ಮಳೆ ಕೊರತೆ ನೀಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲಿ : ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಗೋಣಿಕೊಪ್ಪ ದಸರಾ ಜನೋತ್ಸವ ಉದ್ಘಾಟಿಸಿದ ಸಚಿವ ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.