ವಿರಾಜಪೇಟೆ, NEWS DESK ಅ.12: ಗೋಣಿಕೊಪ್ಪಲಿನ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂತ ಅನ್ನಮ್ಮ ಕಾಲೇಜು, ವಿರಾಜಪೇಟೆ ಇವರ ವತಿಯಿಂದ ಆಯೋಜಿಸಲಾಗಿದ್ದ ವಿರಾಜಪೇಟೆ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ರನ್ನರ್ಸ್ ಟ್ರೋಫಿಯನ್ನು ಪಡೆದುಕೊಂಡಿದೆ.
ಕಾಲೇಜಿನ ಬಾಲಕರ ತಂಡದ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದನೆ ಸಲ್ಲಿಸಿ, ತಂಡದ ಆಟಗಾರರ ಸಾಧನೆಯನ್ನು ಶ್ಲಾಘಿಸಿದ್ದಾರೆ.

















