ಸುಂಟಿಕೊಪ್ಪ, NEWS DESK ಅ.12: ಸುಂಟಿಕೊಪ್ಪ ವಾಹನ ಚಾಲಕರ ಸಂಘದ ವತಿಯಿಂದ 56ನೇ ವರ್ಷದ ಆಯುಧಪೂಜಾ ಸಮಾರಂಭವು ಅಕ್ಟೋಬರ್ 20ರಂದು ವಾಹನ ಚಾಲಕರ ಸಂಘದ ಭವ್ಯ ವೇದಿಕೆಯಲ್ಲಿ ನಡೆಯಲಿದೆ.
ಸಮಾರಂಭವನ್ನು ಕೊಡಗು ಜಿಲ್ಲಾಡಳಿತದ ಕಾನೂನು ಸಲಹೆಗಾರ ಎ. ಲೋಕೇಶ್‌ಕುಮಾರ್ ಉದ್ಘಾಟಿಸಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ವಿಟ್ಲದ ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ, ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಪಿ.ಎಂ. ಲತೀಫ್ ಮತ್ತು ಬಿ.ಬಿ. ಭಾರತೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್. ಸುನಿಲ್‌ಕುಮಾರ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪ್ಪಳ್ಳಿ ರವೀಂದ್ರ, ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ದಿನೇಶ್ ಕುಮಾರ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಎಚ್.ಇ. ರಾಕೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್, ಆಟೋ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎ.ಎಂ. ಶರೀಫ್ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.
ರಾಜ್ಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕಿ ರೋಶನಿ ರಾಮಪುರಂ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ಕೆ.ವಿ. ಕಿಟ್ಟಣ್ಣ ರೈ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಡ್ಯಾನ್ಸ್ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದ್ದು, ಇದನ್ನು ಕೆದಕಲ್ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಂಜು ಪೊನ್ನಪ್ಪ ಪಟ್ಟೆಮನೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಉದಯಕುಮಾರ್ ಹಾಗೂ ಗುತ್ತಿಗೆದಾರ ಮಂಜುನಾಥ್ ಉದ್ಘಾಟಿಸಲಿದ್ದಾರೆ.
ಆಯುಧಪೂಜೆಯ ಅಂಗವಾಗಿ ಸುಂಟಿಕೊಪ್ಪ ಪಟ್ಟಣವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲು ಯುವ ಕಾಂಗ್ರೆಸ್ ಮುಖಂಡ ಪಿ.ಎಲ್. ಹರ್ಷದ್ ಪ್ರಾಯೋಜಕತ್ವ ವಹಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
















