Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಮಾನ ಮಹತ್ವ ನೀಡಿ: ನ್ಯಾಯಾಧೀಶ ಎ. ವಿಶ್ವನಾಥ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಮಾನ ಮಹತ್ವ ನೀಡಿ: ನ್ಯಾಯಾಧೀಶ ಎ. ವಿಶ್ವನಾಥ್

ಅಕ್ಟೋಬರ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ, NEWS DESK ಅ.13: ದೈಹಿಕ ಆರೋಗ್ಯಕ್ಕೆ ಎಷ್ಟು ಮಹತ್ವ ನೀಡುತ್ತೇವೆಯೋ, ಮಾನಸಿಕ ಆರೋಗ್ಯಕ್ಕೂ ಅಷ್ಟೇ ಮಹತ್ವ ನೀಡಿದಾಗ ಮಾತ್ರ ಪರಿಪೂರ್ಣ ಆರೋಗ್ಯಯುತ ಜೀವನ ನಡೆಸಲು ಸಾಧ್ಯ ಎಂದು ವಿರಾಜಪೇಟೆಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಎ. ವಿಶ್ವನಾಥ್ ಅಭಿಪ್ರಾಯಪಟ್ಟರು.

ವಿರಾಜಪೇಟೆಯ ಕಾವೇರಿ ಕಾಲೇಜು, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ–2026 ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಹೆಚ್ಚಿನವರು ಆಹಾರ ಕ್ರಮ ಮತ್ತು ವ್ಯಾಯಾಮದ ಮೂಲಕ ದೈಹಿಕ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಆದರೆ ಮಾನಸಿಕ ಆರೋಗ್ಯದ ಕಾಳಜಿಯೂ ಅಷ್ಟೇ ಮುಖ್ಯವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಒತ್ತಡಕ್ಕೆ ಒಳಗಾಗುವುದು ಸಾಮಾನ್ಯವಾಗಿದೆ. ಒತ್ತಡಕ್ಕೆ ಒಳಗಾಗಿ ಮಾನಸಿಕವಾಗಿ ಕುಗ್ಗುವ ಬದಲು, ಅದನ್ನು ಸಮರ್ಥವಾಗಿ ನಿಭಾಯಿಸಿ ಅದರಿಂದ ಹೊರಬರುವುದನ್ನು ಕಲಿಯಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡೂ ಉತ್ತಮವಾಗಿದ್ದಾಗ ಮಾತ್ರ ಆರೋಗ್ಯಯುತ ಜೀವನ ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮನೋವೈದ್ಯ ಡಾ. ಡೆವಿನ್ ಮಾತನಾಡಿ, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ನಮ್ಮ ಸುತ್ತಮುತ್ತಲಿನಲ್ಲೇ ಇರುತ್ತಾರೆ. ಅವರ ವರ್ತನೆ, ಮಾತನಾಡುವ ಶೈಲಿ ಹಾಗೂ ಭಾವನೆಗಳನ್ನು ವ್ಯಕ್ತಪಡಿಸುವ ರೀತಿಯಲ್ಲಿನ ಬದಲಾವಣೆಗಳನ್ನು ಗಮನಿಸುವ ಮೂಲಕ ಸಮಸ್ಯೆಯನ್ನು ಗುರುತಿಸಿ ಸೂಕ್ತ ಚಿಕಿತ್ಸೆ ಕೊಡಿಸಲು ಮುಂದಾಗಬೇಕು ಎಂದರು.

ಮಾನಸಿಕ ಒತ್ತಡಕ್ಕೆ ಒಳಗಾದವರಲ್ಲಿ ತಲೆನೋವು, ಹೊಟ್ಟೆನೋವು ಹಾಗೂ ದೇಹದ ವಿವಿಧ ಭಾಗಗಳಲ್ಲಿ ನೋವು ಕಾಣಿಸಿಕೊಳ್ಳಬಹುದು. ಅತಿಯಾಗಿ ಅಳುವುದು, ನಗುವುದು, ಕಿರುಚುವುದು ಸೇರಿದಂತೆ ಭಾವನೆಗಳು ಮತ್ತು ವರ್ತನೆಗಳಲ್ಲಿ ಬದಲಾವಣೆಗಳೂ ಕಂಡುಬರಬಹುದು. ಯುವಜನರಲ್ಲಿ ವಿವಿಧ ಕಾರಣಗಳು ಹಾಗೂ ಸನ್ನಿವೇಶಗಳಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತಿದ್ದು, ಸೂಕ್ತ ಮಾರ್ಗದರ್ಶನ ದೊರೆಯದಿದ್ದರೆ ಕೆಲವರು ವ್ಯಸನಗಳತ್ತ ಮುಖ ಮಾಡುವ ಸಾಧ್ಯತೆಯಿದೆ ಎಂದು ಹೇಳಿದರು.

ಸಮಯಕ್ಕೆ ಸರಿಯಾಗಿ ಆಪ್ತ ಸಮಾಲೋಚನೆ ಮತ್ತು ಸೂಕ್ತ ಚಿಕಿತ್ಸೆ ದೊರೆಯದಿದ್ದರೆ ಕೆಲವರಲ್ಲಿ ಖಿನ್ನತೆ, ಅಸಹಾಯಕತೆಯ ಭಾವನೆ ಹಾಗೂ ಜೀವನದ ಬಗ್ಗೆ ನಿರಾಶೆ ಉಂಟಾಗಬಹುದು. ಗಂಭೀರ ಸಂದರ್ಭಗಳಲ್ಲಿ ಆತ್ಮಹತ್ಯೆಯ ಆಲೋಚನೆಗಳೂ ಮೂಡಬಹುದು. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ, ದೈಹಿಕ ಕಾಯಿಲೆಗಳಿಗೆ ವೈದ್ಯಕೀಯ ಚಿಕಿತ್ಸೆ ಪಡೆಯುವಂತೆಯೇ ಮಾನಸಿಕ ಸಮಸ್ಯೆಗಳಿಗೂ ತಜ್ಞರ ನೆರವು ಮತ್ತು ಸೂಕ್ತ ಚಿಕಿತ್ಸೆ ಕೊಡಿಸಬೇಕು. ಈ ಮೂಲಕ ಅಮೂಲ್ಯ ಜೀವಗಳನ್ನು ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾವೇರಿ ಕಾಲೇಜಿನ ಪ್ರಾಂಶುಪಾಲೆ ಡಾ. ಕೆ.ಜಿ. ವೀಣಾ ಮಾತನಾಡಿದರು. ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಸಿ.ಕೆ. ಪೂವಣ್ಣ ಹಾಗೂ ವಕೀಲರು ಮತ್ತು ನೋಟರಿ ರಮೇಶ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಬಡ ಕುಟುಂಬಗಳಿಗೆ ವಸತಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ; ನಿವೇಶನ ರಹಿತ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಎಚ್.ಆರ್. ಪರಶುರಾಮ್ ಒತ್ತಾಯ

ಅಕ್ಟೋಬರ್ 13, 2026

ಅ.15ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ; ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಹೋರಾಟ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಟಿ.ಪಿ.ರಮೇಶ್ ಅವರ 75ನೇ ಜನ್ಮ ದಿನೋತ್ಸವ: ಕ್ರಿಯಾಶೀಲತೆ, ಶ್ರದ್ಧೆ, ಪ್ರಾಮಾಣಿಕತೆಯಿಂದ ಗುರಿ ಸಾಧನೆ ಸಾಧ್ಯ: ಶಾಸಕ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 13, 2026

ಅ.15ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ; ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಹೋರಾಟ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.13: ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯ ಮೂಲಕ ನೈಜ ಮತದಾರರ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳುವ…

ಟಿ.ಪಿ.ರಮೇಶ್ ಅವರ 75ನೇ ಜನ್ಮ ದಿನೋತ್ಸವ: ಕ್ರಿಯಾಶೀಲತೆ, ಶ್ರದ್ಧೆ, ಪ್ರಾಮಾಣಿಕತೆಯಿಂದ ಗುರಿ ಸಾಧನೆ ಸಾಧ್ಯ: ಶಾಸಕ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 13, 2026

ಕೊಡಗು ಸೈನಿಕ ಶಾಲೆಯಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ‘ಗ್ರೂಪ್ ಹೆಚ್’ ರಾಷ್ಟ್ರೀಯ ಕ್ರೀಡಾಕೂಟ-2026ಕ್ಕೆ ಚಾಲನೆ

ಅಕ್ಟೋಬರ್ 13, 2026

ಸೋಮೇಶ್ವರ ದೇವಾಲಯದಲ್ಲಿ ತರಕಾರಿ ಅಲಂಕಾರದಲ್ಲಿ ಕಂಗೊಳಿಸಿದ ಶಕ್ತಿಪಾರ್ವತಿ ದೇವಿ

ಅಕ್ಟೋಬರ್ 13, 2026

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಮಾನ ಮಹತ್ವ ನೀಡಿ: ನ್ಯಾಯಾಧೀಶ ಎ. ವಿಶ್ವನಾಥ್

ಅಕ್ಟೋಬರ್ 13, 2026

ರಾಷ್ಟ್ರೀಯ ಹಿರಿಯ ಕ್ರೀಡಾಪಟುಗಳ ಚಾಂಪಿಯನ್‌ಶಿಪ್‌ನಲ್ಲಿ ಕೊಡಗಿನ ಕ್ರೀಡಾಪಟುಗಳ ಸಾಧನೆ

ಅಕ್ಟೋಬರ್ 13, 2026

ಪೂಜಾರಿರ ಮೊಣ್ಣಪ್ಪ ಅರೆಭಾಷಿಕ ಯುವ ಜನಾಂಗಕ್ಕೆ ಮಾದರಿ : ಡಾ.ಕಾವೇರಿಮನೆ ಬೋಜಪ್ಪ

ಅಕ್ಟೋಬರ್ 12, 2026

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ

ಅಕ್ಟೋಬರ್ 12, 2026

ಮಡಿಕೇರಿಯಲ್ಲಿ ಅ.19 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 12, 2026

ಬೇಂಗ್ ನಾಡ್ ಕೊಡವ ಸಮಾಜದಲ್ಲಿ ಕೈಲ್ ಪೋದ್ ಒತ್ತೋರ್ಮೆ ಕೂಟ; ಕೊಡವ ಸಂಸ್ಕೃತಿ, ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು: ಚಿರಿಯಪಂಡ ಸುರೇಶ್ ನಂಜಪ್ಪ

ಅಕ್ಟೋಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.