Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಟಿ.ಪಿ.ರಮೇಶ್ ಅವರ 75ನೇ ಜನ್ಮ ದಿನೋತ್ಸವ: ಕ್ರಿಯಾಶೀಲತೆ, ಶ್ರದ್ಧೆ, ಪ್ರಾಮಾಣಿಕತೆಯಿಂದ ಗುರಿ ಸಾಧನೆ ಸಾಧ್ಯ: ಶಾಸಕ ಎ.ಎಸ್.ಪೊನ್ನಣ್ಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಟಿ.ಪಿ.ರಮೇಶ್ ಅವರ 75ನೇ ಜನ್ಮ ದಿನೋತ್ಸವ: ಕ್ರಿಯಾಶೀಲತೆ, ಶ್ರದ್ಧೆ, ಪ್ರಾಮಾಣಿಕತೆಯಿಂದ ಗುರಿ ಸಾಧನೆ ಸಾಧ್ಯ: ಶಾಸಕ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 13, 20264 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ.13: ಕ್ರಿಯಾಶೀಲತೆ, ಶ್ರದ್ಧೆ ಮತ್ತು ಪ್ರಾಮಾಣಿಕತೆಯನ್ನು ಸಾರ್ವಜನಿಕ ಜೀವನದಲ್ಲಿ ಅಳವಡಿಸಿಕೊಂಡಾಗ ನಿಗದಿತ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟರು.

ನಗರದ ರೆಡ್ ಬ್ರಿಕ್ಸ್ ಸಭಾಂಗಣದಲ್ಲಿ ಸಮಾಜಮುಖಿ ಸೇವೆ ಹಾಗೂ ವಿವಿಧ ಸಂಘಟನೆಗಳ ಮೂಲಕ ಸಾರ್ವಜನಿಕ ಜೀವನದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಅಹಿಂದ ನಾಯಕ ಟಿ.ಪಿ.ರಮೇಶ್ ಅವರ 75ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

1994ರ ವಿಧಾನಸಭಾ ಚುನಾವಣೆಯಲ್ಲಿ ಟಿ.ಪಿ.ರಮೇಶ್ ಅವರು ಜನತಾದಳದ ಅಭ್ಯರ್ಥಿಯಾಗಿ ಮಡಿಕೇರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಂದರ್ಭದಲ್ಲಿ ತಮ್ಮ ತಂದೆ ಎ.ಕೆ.ಸುಬ್ಬಯ್ಯ ಅವರು ಬಿಎಸ್‌ಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದರು. ಆ ಸಂದರ್ಭದಲ್ಲೇ ರಮೇಶ್ ಅವರ ಪರಿಚಯವಾಯಿತು. ಯಾವುದೇ ಹಣಬಲ ಅಥವಾ ಜಾತಿಬಲವಿಲ್ಲದೆ ತಮ್ಮ ಪರಿಶ್ರಮದಿಂದ ಬೆಳೆದು ಬಂದಿರುವ ರಮೇಶ್ ಅವರು ಕೊಡಗು ಜಿಲ್ಲೆಯಲ್ಲಿ ಹತ್ತಾರು ಸಂಘಟನೆಗಳನ್ನು ಕಟ್ಟಿ ಬೆಳೆಸಿ, ಜನರಿಗೆ ನ್ಯಾಯ ದೊರಕಿಸಲು ನಿರಂತರ ಹೋರಾಟ ನಡೆಸಿದ್ದಾರೆ ಎಂದು ಶ್ಲಾಘಿಸಿದರು.

ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಟಿ.ಪಿ.ರಮೇಶ್ ಅವರನ್ನು ಸನ್ಮಾನಿಸಿ ಮಾತನಾಡಿ, ಸಾರ್ವಜನಿಕ ಮತ್ತು ರಾಜಕೀಯ ಜೀವನದಲ್ಲಿ ಹಿರಿಯರ ಮಾರ್ಗದರ್ಶನ ಅತ್ಯಂತ ಅಗತ್ಯವಾಗಿದೆ. ರಮೇಶ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಜನಪ್ರತಿನಿಧಿಗಳಿಗೆ ಕಾಲಕಾಲಕ್ಕೆ ನೀಡುವ ಸಲಹೆಗಳು ಜನಪರ ಕಾರ್ಯಗಳಿಗೆ ಪ್ರೋತ್ಸಾಹ ನೀಡುತ್ತವೆ. ಅವರ ಪ್ರಾಮಾಣಿಕ ವ್ಯಕ್ತಿತ್ವ ಮತ್ತು ಅನುಭವ ಜಿಲ್ಲೆಗೆ ಇನ್ನಷ್ಟು ಕಾಲ ಮಾರ್ಗದರ್ಶನ ನೀಡಲಿ ಎಂದು ಹಾರೈಸಿದರು.

ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರನ್ನು ಟಿ.ಪಿ.ರಮೇಶ್ ದಂಪತಿ ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾಣಯ್ಯ ಅವರು, 1974ರಲ್ಲಿ ರಮೇಶ್ ಅವರ ಪರಿಚಯವಾಯಿತು. 1978ರಲ್ಲಿ ತಾವು ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದಾಗ ರಮೇಶ್ ಅವರು ಧ್ವನಿವರ್ಧಕದ ಮೂಲಕ ಪ್ರಚಾರ ನಡೆಸಿ ಗೆಲುವಿಗೆ ಸಹಕರಿಸಿದ್ದರು ಎಂದು ಸ್ಮರಿಸಿದರು. ತಾವು ಜೆ.ಎಚ್.ಪಟೇಲ್ ಸರ್ಕಾರದಲ್ಲಿ ಸಚಿವರಾಗಿದ್ದ ಸಂದರ್ಭದಲ್ಲಿ ರಮೇಶ್ ಜನತಾದಳದ ಜಿಲ್ಲಾಧ್ಯಕ್ಷರಾಗಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಅವರನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಶಿಫಾರಸು ಮಾಡಿದ್ದಾಗಿ ತಿಳಿಸಿದರು. ಪತ್ರಿಕಾಭವನ ನಿರ್ಮಾಣ ಹಾಗೂ ಅಂಗನವಾಡಿ ಸಂಘಟನೆಗಳ ಬಲವರ್ಧನೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ರಮೇಶ್ ಯಶಸ್ಸು ಸಾಧಿಸಿದ್ದಾರೆ ಎಂದರು.

ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ ಅವರು ರಮೇಶ್ ಅವರನ್ನು ಸನ್ಮಾನಿಸಿ ಶುಭ ಹಾರೈಸಿದರು.

ಗೋಕಾಕ್ ಚಳವಳಿಯಿಂದ ಸಾಹಿತ್ಯ ಸಮ್ಮೇಳನದವರೆಗೆ ಮಹತ್ವದ ಕೊಡುಗೆ

ಟಿ.ಪಿ.ರಮೇಶ್ ಅವರ ಬಾಲ್ಯಸ್ನೇಹಿತ, ಸಾಹಿತಿ ಹಾಗೂ ಕವಿ ಬಿ.ಎ.ಶಂಷುದ್ದೀನ್ ಪ್ರಾಸ್ತಾವಿಕವಾಗಿ ಮಾತನಾಡಿ, 1981ರಲ್ಲಿ ಗೋಕಾಕ್ ಚಳವಳಿ ಆರಂಭವಾದಾಗ ರಮೇಶ್ ಜಿಲ್ಲಾ ಕನ್ನಡ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿ ನೇತೃತ್ವ ವಹಿಸಿದ್ದರು. ಜಿಲ್ಲೆಯಾದ್ಯಂತ ಬಂದ್, ಪಂಜಿನ ಮೆರವಣಿಗೆ ಹಾಗೂ ಪ್ರತಿಭಟನೆಗಳು ನಡೆದಿದ್ದವು. ಅಂದಿನ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರ ವಿರುದ್ಧ ಕಪ್ಪುಬಾವುಟ ಪ್ರದರ್ಶಿಸುವ ಹೋರಾಟದಲ್ಲೂ ರಮೇಶ್ ಪ್ರಮುಖ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದರು.

ತಾಲ್ಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ರಮೇಶ್ ಅನೇಕ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಡಿಕೇರಿಗೆ ತಂದು ಯಶಸ್ವಿಯಾಗಿ ನಡೆಸುವಲ್ಲಿ ಅವರ ನಾಯಕತ್ವ ಪ್ರಮುಖವಾಗಿತ್ತು. ಸುಮಾರು ಒಂದು ವರ್ಷ ಸಿದ್ಧತೆ ನಡೆಸಿ, ವಿವಿಧ ಉಪಸಮಿತಿಗಳನ್ನು ರಚಿಸಿ, ಎಲ್ಲರ ಸಹಕಾರದೊಂದಿಗೆ ಸಮ್ಮೇಳನವನ್ನು ರಾಜ್ಯಕ್ಕೆ ಮಾದರಿಯಾಗುವಂತೆ ಆಯೋಜಿಸಿದ್ದರು ಎಂದು ಹೇಳಿದರು.

‘ಶಕ್ತಿ’ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್ ಮಾತನಾಡಿ, ಕೈಗೆತ್ತಿಕೊಂಡ ಕೆಲಸವನ್ನು ಛಲದಿಂದ ಪೂರ್ಣಗೊಳಿಸುವ ಹಾಗೂ ಎಲ್ಲರ ಸಹಕಾರ ಪಡೆದು ಕಾರ್ಯಕ್ರಮಗಳನ್ನು ಶಿಸ್ತಿನಿಂದ ನಡೆಸುವ ನಾಯಕತ್ವ ರಮೇಶ್ ಅವರಲ್ಲಿದೆ ಎಂದರು.

ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಎಂ.ಪಿ.ಮುತ್ತಪ್ಪ ಮಾತನಾಡಿ, ಯಾವುದೇ ಸಂಘಟನೆಯನ್ನು ಕಟ್ಟುವುದಷ್ಟೇ ಅಲ್ಲದೆ ಅದನ್ನು ನಿರಂತರವಾಗಿ ಮುನ್ನಡೆಸುವ ಗುರಿ ಮತ್ತು ಬದ್ಧತೆ ರಮೇಶ್ ಅವರಲ್ಲಿದೆ ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ಜಿಲ್ಲೆಯ ಪತ್ರಕರ್ತರ ಅನುಕೂಲಕ್ಕಾಗಿ ಪತ್ರಿಕಾಭವನ ನಿರ್ಮಾಣ, ಕೊಡಗು ಪ್ರೆಸ್ ಕ್ಲಬ್ ಸ್ಥಾಪನೆ ಹಾಗೂ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆಯಲ್ಲಿ ರಮೇಶ್ ಅವರ ಕೊಡುಗೆ ಮಹತ್ವದ್ದಾಗಿದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಮತ್ತು ಜಿಲ್ಲಾ ಅಧ್ಯಕ್ಷರಾಗಿ ಅನೇಕ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿ ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೆ ಶ್ರಮಿಸಿದ್ದಾರೆ. ಮಹಿಳಾ ಲೇಖಕಿಯರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಮಹಿಳೆಯರಿಗೆ ಸೀಮಿತಗೊಳಿಸಿದ ಅವರ ಕಾರ್ಯದಿಂದ ಜಿಲ್ಲೆಯ ಅನೇಕ ಲೇಖಕಿಯರಿಗೆ ಅವಕಾಶ ದೊರೆತಿದೆ ಎಂದು ಹೇಳಿದರು.

ಹಿರಿಯ ಸಹಕಾರಿ ಬಿ.ಎ.ಗಣಪತಿ ಮಾತನಾಡಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ರಮೇಶ್ ಅವರು ಸಂಪಾಜೆಯ ಕೊಯನಾಡಿನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಿ ‘ಹಳ್ಳಿಯ ಕಡೆ ಸಾಹಿತ್ಯದ ನಡಿಗೆ’ ಪರಿಕಲ್ಪನೆಗೆ ಉತ್ತೇಜನ ನೀಡಿದ್ದರು. ಸಹಕಾರ, ಯುವಜನ ಸಂಘಟನೆ, ಯುವಕ ಸಂಘಗಳು ಹಾಗೂ ಯುವತಿ ಮಂಡಳಿಗಳ ಬಲವರ್ಧನೆಗೂ ಶ್ರಮಿಸಿದ್ದರು. ಅಂಗನವಾಡಿ ಮತ್ತು ಅಹಿಂದ ಸಂಘಟನೆಗಳನ್ನು ಕಟ್ಟಿ ಬೆಳೆಸಿ ಕಾರ್ಯಕರ್ತೆಯರು ಹಾಗೂ ದುರ್ಬಲ ವರ್ಗಗಳ ಹಕ್ಕುಗಳಿಗಾಗಿ ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ಹೋರಾಡಿದ್ದಾರೆ ಎಂದು ಶ್ಲಾಘಿಸಿದರು.

ಐದು ದಶಕಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸಿದ ಟಿ.ಪಿ.ರಮೇಶ್

ಸನ್ಮಾನ ಸ್ವೀಕರಿಸಿ ಮಾತನಾಡಿದ ಟಿ.ಪಿ.ರಮೇಶ್ ಅವರು, ತಮ್ಮ 75ನೇ ಜನ್ಮ ದಿನೋತ್ಸವದ ಅಂಗವಾಗಿ ಕಾರ್ಯಕ್ರಮ ಆಯೋಜಿಸಿದ ಪತ್ನಿ ನಿರ್ಮಲ, ಪುತ್ರಿಯರಾದ ಸಂಧ್ಯಾ ಮತ್ತು ಸ್ವಾತಿ, ಅಳಿಯ ನವೀನ್ ಸೇರಿದಂತೆ ಕುಟುಂಬದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ಮನೆಮನೆಗೆ ಪತ್ರಿಕೆ ಹಂಚುವ ಕೆಲಸದಿಂದ ಆರಂಭವಾದ ತಮ್ಮ ಪಯಣ, ‘ಗಡಿನಾಡ ಸಂಚಾರಿ’ ಪತ್ರಿಕೆಯ ಸಂಪಾದಕತ್ವ, ‘ಪರಾಕ್ರಮ’ ಸಂಜೆ ಪತ್ರಿಕೆಯ ಸಹಸಂಪಾದಕತ್ವ ಹಾಗೂ ಪತ್ರಕರ್ತರ ಸಂಘಟನೆಗಳಲ್ಲಿನ ಜವಾಬ್ದಾರಿಗಳವರೆಗೆ ವಿಸ್ತರಿಸಿದೆ ಎಂದು ಹೇಳಿದರು. ವರ್ಕ್‌ಶಾಪ್‌ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಆರಂಭಿಸಿದ ತಾವು ನಂತರ ರಾಜಕೀಯ ಕ್ಷೇತ್ರದಲ್ಲಿ ಬೆಳೆದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ನಿಗಮ ಹಾಗೂ ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾಗಿ ಸ್ಮರಿಸಿದರು.

ಜೀವನದಲ್ಲಿ ಉತ್ತಮ ಗುರಿಯನ್ನು ಇಟ್ಟುಕೊಂಡು ಪ್ರಾಮಾಣಿಕತೆಯಿಂದ ದುಡಿದಿದ್ದೇನೆ. ಮುಂದಿನ ದಿನಗಳಲ್ಲಿಯೂ ಸಾರ್ವಜನಿಕ ಬದುಕಿನಲ್ಲಿ ಯಾವುದೇ ಕಪ್ಪುಚುಕ್ಕೆ ಬಾರದಂತೆ ಜವಾಬ್ದಾರಿಯಿಂದ ನಡೆದುಕೊಳ್ಳುತ್ತೇನೆ. ಸಂಘಟನೆ, ಹೋರಾಟ, ಉತ್ತಮ ಆಡಳಿತ, ಭ್ರಷ್ಟಾಚಾರಮುಕ್ತ ಜೀವನಶೈಲಿ ಮತ್ತು ಸಮಾಜಕ್ಕೆ ಹಾನಿ ಉಂಟುಮಾಡುವ ಸನ್ನಿವೇಶಗಳ ವಿರುದ್ಧ ಹೋರಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಐದು ದಶಕಗಳ ಸಾರ್ವಜನಿಕ ಜೀವನದಲ್ಲಿ ಕಾರ್ಮಿಕ, ಯುವಜನ, ರಾಜಕೀಯ, ಸಹಕಾರ, ವಾಣಿಜ್ಯ, ದಸರಾ ಉತ್ಸವ, ಪತ್ರಿಕೋದ್ಯಮ, ಶಿಕ್ಷಣ, ಅಂಗನವಾಡಿ ಹಾಗೂ ಅಹಿಂದ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದೊರೆತ ಅವಕಾಶಗಳನ್ನು ಬಳಸಿಕೊಂಡು ಸಂಘಟನೆಗಳ ಸದಸ್ಯರ ಹಿತಕ್ಕಾಗಿ ಹೋರಾಡಿ ನ್ಯಾಯ ದೊರಕಿಸಲು ಪ್ರಯತ್ನಿಸಿದ್ದೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ನೇಹ ಸಮ್ಮಿಲನ ಸಮಿತಿ ವತಿಯಿಂದ ಟಿ.ಪಿ.ರಮೇಶ್ ಹಾಗೂ ನಿರ್ಮಲ ದಂಪತಿಯನ್ನು ಗೌರವಿಸಲಾಯಿತು. ವಿವಿಧ ಸಂಘ-ಸಂಸ್ಥೆಗಳು, ರಾಜಕೀಯ ಮುಖಂಡರು, ಸ್ನೇಹಿತರು ಹಾಗೂ ಹಿತೈಷಿಗಳು ದಂಪತಿಯನ್ನು ಸನ್ಮಾನಿಸಿದರು.

ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ತುಳಸಿ ಮೋಹನ್ ಅವರು ಟಿ.ಪಿ.ರಮೇಶ್ ಅವರ ಪರಿಚಯ ಮಾಡಿಕೊಟ್ಟರು. ಶ್ವೇತಾ ರವೀಂದ್ರ ಸ್ವಾಗತಿಸಿದರು. ಸಂಧ್ಯಾ ನವೀನ್ ಪ್ರಾರ್ಥಿಸಿ ವಂದಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026

2028ರ ವಿಧಾನಸಭಾ ಚುನಾವಣೆಯಲ್ಲಿ ಹೊಸ ಚಿಂತನೆಯ ವ್ಯಕ್ತಿಗಳು ಆಯ್ಕೆಯಾಗಲಿ : ಉದಯ ಕುಮಾರ್ ಜೆ.

ಅಕ್ಟೋಬರ್ 13, 2026

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

2028ರ ವಿಧಾನಸಭಾ ಚುನಾವಣೆಯಲ್ಲಿ ಹೊಸ ಚಿಂತನೆಯ ವ್ಯಕ್ತಿಗಳು ಆಯ್ಕೆಯಾಗಲಿ : ಉದಯ ಕುಮಾರ್ ಜೆ.

ಅಕ್ಟೋಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK, ಅ.13: ಮುಂಬರುವ 2028ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಹಳೆಯ ಪಕ್ಷಗಳು ಹಾಗೂ ಅಭ್ಯರ್ಥಿಗಳನ್ನು ಬದಿಗೊತ್ತಿ,…

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಅ.15ರಂದು ಮೂನಾಡ್‌ನಲ್ಲಿ ಸಿಎನ್‌ಸಿಯ 6ನೇ ಶಾಂತಿಯುತ ಮಾನವ ಸರಪಳಿ; ಕೊಡವ ಜನಾಂಗದ ಅಸ್ತಿತ್ವ, ಭೂಮಿ, ಭಾಷೆ ಮತ್ತು ಸಂಸ್ಕೃತಿ ರಕ್ಷಣೆಗೆ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 13, 2026

ಕುಶಾಲನಗರ ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಹಾನಿ : ದುಷ್ಕೃತ್ಯಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಂಡನೆ

ಅಕ್ಟೋಬರ್ 13, 2026

ಬಡ ಕುಟುಂಬಗಳಿಗೆ ವಸತಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ; ನಿವೇಶನ ರಹಿತ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಎಚ್.ಆರ್. ಪರಶುರಾಮ್ ಒತ್ತಾಯ

ಅಕ್ಟೋಬರ್ 13, 2026

ಅ.15ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ; ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಹೋರಾಟ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಟಿ.ಪಿ.ರಮೇಶ್ ಅವರ 75ನೇ ಜನ್ಮ ದಿನೋತ್ಸವ: ಕ್ರಿಯಾಶೀಲತೆ, ಶ್ರದ್ಧೆ, ಪ್ರಾಮಾಣಿಕತೆಯಿಂದ ಗುರಿ ಸಾಧನೆ ಸಾಧ್ಯ: ಶಾಸಕ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 13, 2026

ಕೊಡಗು ಸೈನಿಕ ಶಾಲೆಯಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ‘ಗ್ರೂಪ್ ಹೆಚ್’ ರಾಷ್ಟ್ರೀಯ ಕ್ರೀಡಾಕೂಟ-2026ಕ್ಕೆ ಚಾಲನೆ

ಅಕ್ಟೋಬರ್ 13, 2026

ಸೋಮೇಶ್ವರ ದೇವಾಲಯದಲ್ಲಿ ತರಕಾರಿ ಅಲಂಕಾರದಲ್ಲಿ ಕಂಗೊಳಿಸಿದ ಶಕ್ತಿಪಾರ್ವತಿ ದೇವಿ

ಅಕ್ಟೋಬರ್ 13, 2026

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಮಾನ ಮಹತ್ವ ನೀಡಿ: ನ್ಯಾಯಾಧೀಶ ಎ. ವಿಶ್ವನಾಥ್

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.