ಮಡಿಕೇರಿ ಅ.14 NEWS DESK : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಮಡಿಕೇರಿ ಕಾರ್ಯ ಮತ್ತು ಪಾಲನೆ ವಿಭಾಗದ ವತಿಯಿಂದ ಪ್ರಧಾನಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆಯಡಿ ಮನೆಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಫಲಕಗಳನ್ನು ಅಳವಡಿಸಿಕೊಂಡು ವಿದ್ಯುತ್ ಉತ್ಪಾದನೆ ಮಾಡುವ ಕುರಿತು ಅ.16 ಮತ್ತು 17ರಂದು ವಿಶೇಷ ಅಭಿಯಾನ ಆಯೋಜಿಸಲಾಗಿದೆ. ಮಡಿಕೇರಿಯ ಶಾಂತಿನಿಕೇತನದಲ್ಲಿರುವ ಚೆಸ್ಕಾಂ ವಿಭಾಗ ಕಚೇರಿಯ ಆವರಣದಲ್ಲಿ ಈ ಅಭಿಯಾನ ನಡೆಯಲಿದೆ. ಅಭಿಯಾನದಲ್ಲಿ ಅಧಿಕೃತ ಸೌರ ವಿದ್ಯುತ್ (SRTPV) ವೆಂಡರ್ಗಳು ಹಾಗೂ ಬ್ಯಾಂಕ್ ಪ್ರತಿನಿಧಿಗಳು ಭಾಗವಹಿಸಲಿದ್ದು, ಯೋಜನೆಯ ಸೌಲಭ್ಯಗಳು, ಸರ್ಕಾರದಿಂದ ದೊರೆಯುವ ಸಬ್ಸಿಡಿ ಹಾಗೂ ಬ್ಯಾಂಕ್ ಸಾಲದ ಸೌಲಭ್ಯಗಳ ಕುರಿತು ಗ್ರಾಹಕರಿಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಿದ್ದಾರೆ. ಆದ್ದರಿಂದ, ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಚೆಸ್ಕಾಂ ಗ್ರಾಹಕರು ಹಾಗೂ ಸಾರ್ವಜನಿಕರು ಈ ವಿಶೇಷ ಅಭಿಯಾನದಲ್ಲಿ ಭಾಗವಹಿಸಿ, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಮಡಿಕೇರಿ ಕಾರ್ಯ ಮತ್ತು ಪಾಲನೆ ವಿಭಾಗದ ಅಧಿಕಾರಿಗಳು ಮನವಿ ಮಾಡಿದ್ದಾರೆ.
















