Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಗೋಣಿಕೊಪ್ಪಲು, NEWS DESK ಅ.15: ಶ್ರೀ ಕಾವೇರಿ ದಸರಾ ಸಮಿತಿ, ಗೋಣಿಕೊಪ್ಪಲು ಹಾಗೂ ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 48ನೇ ವರ್ಷದ ಗೋಣಿಕೊಪ್ಪಲು ದಸರಾ ಜನೋತ್ಸವ 2026ರ ಅಂಗವಾಗಿ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಯನ್ನು ಅಕ್ಟೋಬರ್ 16ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಗೋಣಿಕೊಪ್ಪಲಿನ ಶ್ರೀ ಕಾವೇರಿ ಕಲಾವೇದಿಕೆಯಲ್ಲಿ ಆಯೋಜಿಸಲಾಗಿದೆ.

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಮಡಿಕೇರಿಯ ಸಾಹಿತಿ ಕೃಪಾ ದೇವರಾಜ್ ವಹಿಸಲಿದ್ದು, ಕರ್ನಾಟಕ ರಾಜ್ಯ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷೆ ಹಾಗೂ ಸಾಹಿತಿ ವಿಜಯ ವಿಷ್ಣು ಭಟ್ ಉದ್ಘಾಟಿಸಲಿದ್ದಾರೆ.

ಎರವ ಭಾಷೆಯ ಕವನ ಸಂಕಲನ ಬಿಡುಗಡೆ

ಕಾರ್ಯಕ್ರಮದಲ್ಲಿ ಕವಯಿತ್ರಿ ರಜನಿ ಎಸ್.ಎಂ. ಅವರ ಎರವ ಭಾಷೆಯ ‘ಪಾವೆ’ (ನೆರಳು) ಕವನ ಸಂಕಲನವನ್ನು ಕುಲ್ಲಚಂಡ ಪ್ರಮೋದ್ ಗಣಪತಿ ಬಿಡುಗಡೆ ಮಾಡಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

118 ಕವಿಗಳಿಂದ ಬಹುಭಾಷಾ ಕವನ ವಾಚನ

ಈ ಬಾರಿಯ ಕವಿಗೋಷ್ಠಿಯಲ್ಲಿ ವಿವಿಧ ಭಾಷೆಗಳ ಒಟ್ಟು 118 ಕವಿಗಳು ಕವನ ವಾಚನ ಮಾಡಲಿದ್ದಾರೆ. ಕನ್ನಡದ 40 ಕವಿಗಳೊಂದಿಗೆ ಹಿಂದಿ, ಕುಂದ ಕನ್ನಡ, ಅರೆಭಾಷೆ, ಇಂಗ್ಲಿಷ್, ಬ್ಯಾರಿ, ಕೊಡವ, ತುಳು, ಜೇನು ಕುರುಬ, ಮಲಯಾಳಂ ಹಾಗೂ ಎರವ ಭಾಷೆಗಳ ಕವಿಗಳು ಭಾಗವಹಿಸಲಿದ್ದಾರೆ. ಚುಟುಕು ಮತ್ತು ಹನಿಗವನಗಳ ವಾಚನಕ್ಕೂ ಅವಕಾಶ ಕಲ್ಪಿಸಲಾಗಿದೆ.

ಜೆನ್ ಜಿ ಕವಿಗೋಷ್ಠಿ ವಿಶೇಷ

ಈ ಬಾರಿಯ ದಸರಾ ಕವಿಗೋಷ್ಠಿಯ ವಿಶೇಷ ಆಕರ್ಷಣೆಯಾಗಿ ಬಹುಭಾಷಾ ಜೆನ್ ಜಿ ಕವಿಗೋಷ್ಠಿ ನಡೆಯಲಿದೆ. ಒಟ್ಟು 23 ಯುವ ಕವಿಗಳು ತಮ್ಮ ಕವನಗಳನ್ನು ವಾಚಿಸಲಿದ್ದಾರೆ. ಕನ್ನಡದಲ್ಲಿ 19 ಮಂದಿ ಹಾಗೂ ತೆಲುಗು, ಕೊಡವ, ಇಂಗ್ಲಿಷ್ ಮತ್ತು ಕುಡುಬಿ ಕೊಂಕಣಿ ಭಾಷೆಗಳಲ್ಲಿ ಐವರು ಕವನ ವಾಚಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮಕ್ಕಳ ಕವಿಗೋಷ್ಠಿಯೂ ಆಯೋಜನೆ

ಪುಟಾಣಿ ಕವಿಗಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಮಕ್ಕಳ ಕವಿಗೋಷ್ಠಿಯನ್ನೂ ಆಯೋಜಿಸಲಾಗಿದೆ. ಕನ್ನಡದ ಎಂಟು ಮಂದಿ ಸೇರಿದಂತೆ ಹಿಂದಿ, ಇಂಗ್ಲಿಷ್ ಹಾಗೂ ಅರೆಭಾಷೆಗಳಲ್ಲಿ ಒಟ್ಟು 10 ಬಾಲಕವಿಗಳು ಕವನ ವಾಚಿಸಲಿದ್ದಾರೆ. ವಿವಿಧ ವಯೋಮಾನದ ಕವಿಗಳು ಮತ್ತು ವಿಭಿನ್ನ ಭಾಷೆಗಳ ಕವನಗಳು ಒಂದೇ ವೇದಿಕೆಯಲ್ಲಿ ಅನಾವರಣಗೊಳ್ಳುತ್ತಿರುವುದು ಈ ಕಾರ್ಯಕ್ರಮದ ವಿಶೇಷತೆಯಾಗಿದೆ.

ಕವಿಗೋಷ್ಠಿಯ ಸಂಚಾಲಕಿ ಕವಯಿತ್ರಿ ರಜನಿ ಎಸ್.ಎಂ., ಸಂಯೋಜಕ ಎಂ.ಕೆ. ಚಂದನ್ ಕಾಮತ್, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಉಳುವಂಗಡ ಕಾವೇರಿ ಉದಯ ಹಾಗೂ ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಮನೆಯಪಂಡ ಶೀಲಾ ಬೋಪಣ್ಣ ಉಪಸ್ಥಿತರಿರಲಿದ್ದಾರೆ ಎಂದು ಗೋಣಿಕೊಪ್ಪಲು ಶ್ರೀ ಕಾವೇರಿ ದಸರಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.19: ಸ್ವಸ್ತಿಕ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಕೊಡವ ಚಲನಚಿತ್ರ…

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ಚಿಕ್ಕಪೇಟೆಯಿಂದ ಬೋಯಿಕೇರಿವರೆಗಿನ ರಸ್ತೆ ಮರು ಡಾಂಬರೀಕರಣಕ್ಕೆ ಆಗ್ರಹ

ನವೆಂಬರ್ 19, 2026

ಹೊಂಬೆಳಕು ಮಾಸಿಕ ತತ್ವ ಚಿಂತನಾಗೋಷ್ಠಿಯ 250ನೇ ವಿಶೇಷ ಕಾರ್ಯಕ್ರಮಕ್ಕೆ ಸಿದ್ಧತೆ

ನವೆಂಬರ್ 19, 2026

ಕೊಡವ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ವಿಶೇಷ, ವಿಶಿಷ್ಟ ಸ್ಥಾನ: ಮಹೇಶ್ ನಾಚಯ್ಯ; ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ದುಡಿ, ತಾಳ ಸೇರಿದಂತೆ ಹಲವು ಪರಿಕರಗಳ ವಿತರಣೆ

ನವೆಂಬರ್ 19, 2026

ರಾಷ್ಟ್ರೀಯ ಐಕ್ಯತಾ ದಿನ: ಮಡಿಕೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಕೊಡಗಿನ ಕ್ರೀಡಾಪಟುಗಳ ಅಮೋಘ ಸಾಧನೆ; ರಾಷ್ಟ್ರಮಟ್ಟದ ಚಾಂಪಿಯನ್‌ಶಿಪ್‌ಗೆ 17 ಕ್ರೀಡಾಪಟುಗಳ ಆಯ್ಕೆ

ನವೆಂಬರ್ 19, 2026

ಕಾವೇರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ನವೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.