Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 20264 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಅ.15 NEWS DESK : ಪ್ರತಿಯೊಂದು ಭಾಷೆಯ ಸಾಹಿತ್ಯವು ಎಲ್ಲರ ಮನಸ್ಸನ್ನು ಗೆಲ್ಲುವ ಮಾನವೀಯತೆಯ ಶಕ್ತಿ ಹೊಂದಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಡಾ.ಎನ್.ಕೆ.ಲೋಲಾಕ್ಷಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಗುರುವಾರ ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯಾವುದೇ ಭಾಷೆಗೆ ಮಾನವೀಯತೆ ಕಟ್ಟಿಕೊಡುವಲ್ಲಿ ಸಾಹಿತ್ಯ, ಸಂಸ್ಕೃತಿ, ಕಲೆಗಳು ಸಹಕಾರಿಯಾಗಿದೆ. ಸಾಹಿತ್ಯ, ಸಂಗೀತ, ಸಿನಿಮಾ ಕ್ಷೇತ್ರದಲ್ಲಿ ಬಹು ಸಂಸ್ಕೃತಿ ಒಳಗೊಂಡಿದ್ದು, ಆ ನಿಟ್ಟಿನಲ್ಲಿ ನಾಡಿನ ಸಂಸ್ಕೃತಿ ಉಳಿಸುವಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕಿದೆ ಎಂದರು. ಮಾತೃಭಾಷೆಯಲ್ಲಿ ಸಾಹಿತ್ಯ ರಚನೆಯಿಂದ ತಮ್ಮ ತಮ್ಮ ಮೂಲ ಕಸುಬು, ಸಂಸ್ಕೃತಿ ತಿಳಿಸಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಬಹುಭಾಷಾ ಕವಿಗೋಷ್ಠಿ ಆಯೋಜಿಸಿರುವುದು ಎಲ್ಲರಿಗೂ ಅವಕಾಶ ಕೊಟ್ಟಂತಾಗುತ್ತದೆ ಎಂದರು. ಭಾರತವು ಭಿನ್ನ ಭಿನ್ನ ಭಾಷೆ ಸಂಸ್ಕೃತಿ ಕಲೆಗಳನ್ನು ಒಳಗೊಂಡಿದ್ದು, ಎಲ್ಲರೂ ಒಟ್ಟಾಗಿ ಏಕತೆ, ಭಾವೈಕ್ಯತೆ, ಭ್ರಾತೃತ್ವ ಸಾರಬೇಕು ಎಂದು ಲೋಲಾಕ್ಷಿ ಅವರು ನುಡಿದರು. ಭಾಷೆಯು ಭಾವನೆ ಕಟ್ಟಿಕೊಡುತ್ತವೆ. ಆ ನಿಟ್ಟಿನಲ್ಲಿ ತಮ್ಮ ಮೂಲ ಸಂಸ್ಕೃತಿಯನ್ನು ಬರವಣಿಗೆಯ ಮೂಲಕ ಕಟ್ಟಿಕೊಡಬೇಕು ಎಂದರು. ಕೊಡಗಿನ ಭಾರತೀಸುತ ಅವರ ಹುಲಿಹಾಲಿನ ಮೇವು ಸಿನಿಮಾ ಆಯಿತು. ಹೀಗೆ ಇಲ್ಲಿನ ಸಂಸ್ಕೃತಿಯನ್ನು ತಿಳಿಸಲು ಸಾಹಿತ್ಯ, ಸಂಗೀತ, ಸಿನಿಮಾದ ಮೂಲಕ ಮಾಹಿತಿ ನೀಡಬಹುದಾಗಿದೆ ಎಂದರು. ಪರಸಂಗ ಚಲನಚಿತ್ರದಲ್ಲಿ ‘ಮರಳಿ ಬಾರದೂರಿಗೆ ನಿನ್ನ ಪಯಣ’ ಹಾಡನ್ನು ಬರೆಯುವ ಮೂಲಕ ಸಂಕಷ್ಟವನ್ನು ಹೇಳಿಕೊಳ್ಳಲಾಗಿದೆ ಎಂದು ಇದೇ ಸಂದರ್ಭದಲ್ಲಿ ಲೋಲಾಕ್ಷಿ ಅವರು ತಿಳಿಸಿದರು. ಕೊಡಗು ವಿದ್ಯಾ ಇಲಾಖೆ ನೌಕರರ ಪತ್ತಿನ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾದ ಎಚ್.ಎಸ್.ಚೇತನ್ ಅವರು ಮಾತನಾಡಿ ಕೊಡಗು ಬಹುಭಾಷೆ, ಬಹುಸಂಸ್ಕøತಿ ಹೊಂದಿರುವ ವಿಶಿಷ್ಟ ಹಾಗೂ ವಿಶೇಷ ಜಿಲ್ಲೆಯಾಗಿದೆ ಎಂದರು. ಸಾಹಿತ್ಯದ ವಿವಿಧ ಪ್ರಕಾರಗಳು ಹಾಗೂ ಕಾಲ ಘಟ್ಟಗಳನ್ನು ಗಮನಿಸಿದಾಗ ಇಂದಿನ ಡಿಜಿಟಲ್ ಹಾಗೂ ಎಐ ಕಾಲಘಟ್ಟದಲ್ಲಿ ಯುವ ಪೀಳಿಗೆ ಮತ್ತು ಹಿರಿಯರು ಒಂದೆಡೆ ಸೇರಿ ಸಾಹಿತ್ಯ ಕೃಷಿಯಲ್ಲಿ ತೊಡಗಿರುವುದು ಶ್ಲಾಘನೀಯ ಎಂದರು. ಮಡಿಕೇರಿ ನಗರ ದಸರಾ ಸಮಿತಿ ಮಾಜಿ ಕಾರ್ಯಾಧ್ಯಕ್ಷರಾದ ಕೆ.ಎಂ.ಬಿ.ಗಣೇಶ್ ಅವರು ಮಾತನಾಡಿ ಮಡಿಕೇರಿ ದಸರಾಗೆ ಐತಿಹಾಸಿಕ ಹಿನ್ನೆಲೆ ಇದ್ದು, ಮಡಿಕೇರಿ ದಸರಾವನ್ನು ಬಜೆಟ್‍ನಲ್ಲಿ ಸೇರ್ಪಡೆ ಮಾಡಿ ಅನುದಾನ ಬಿಡುಗಡೆ ಮಾಡುವಂತಾಗಬೇಕು ಎಂದು ಕೋರಿದರು. ದಶಕಗಳ ಹಿಂದೆ ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ, ಕಾವೇರಿ ಕಲಾಕ್ಷೇತ್ರದಲ್ಲಿ ದಸರಾ ಆಚರಿಸಿಕೊಂಡು ಬರಲಾಗುತ್ತಿತ್ತು. ಈಗ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ದಸರಾ ವಿಶೇಷತೆಯನ್ನು ಒಳಗೊಂಡಿರುವುದು ಶ್ಲಾಘನೀಯ ಎಂದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ ರವಿ ಕಾಣದನ್ನು ಕವಿ ಕಂಡ ಎಂಬಂತೆ ಕವಿತೆ, ಕವನಗಳು, ವಿಮರ್ಶೆಗಳು, ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಸಾಹಿತ್ಯ, ಸಂಸ್ಕøತಿ ಉಳಿಯಬೇಕು. ಈ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿ ಎಂದರು.
ರೈತ ಹೋರಾಟ ಸಮಿತಿ ಅಧ್ಯಕ್ಷರಾದ ಚಕ್ರವರ್ತಿ ಸುರೇಶ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ದಶಕದಲ್ಲಿ ಪ್ರಾಕೃತಿಕ ವಿಕೋಪ, ಕೋವಿಡ್, ಸಿ ಮತ್ತು ಡಿ ಭೂಮಿ, ಕಸ್ತೂರಿ ರಂಗನ್ ವರದಿ, ಈಗ ಬರಗಾಲ ಹೀಗೆ ಹಲವು ಸಮಸ್ಯೆ ಹಾಗೂ ಸವಾಲುಗಳನ್ನು ಎದುರಿಸಿಕೊಂಡು ಬರಲಾಗುತ್ತಿದೆ ಎಂದರು. ಬಡ ರೈತರಿಗೆ ಯಾರೂ ಸಹ ತೊಂದರೆ ನೀಡಬಾರದು. ಕೃಷಿಕರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಚಕ್ರವರ್ತಿ ಸುರೇಶ್ ಅವರು ಕೋರಿದರು. ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಬಿ.ಕೆ.ರವೀಂದ್ರ ರೈ ಅವರು ಮಾತನಾಡಿ ಮಡಿಕೇರಿ ದಸರಾವು ಕೊಡಗಿನ ಸಂಸ್ಕøತಿ, ಜಾನಪದ ಕಲೆ ಒಳಗೊಂಡು ಭಕ್ತಿಭಾವದಿಂದ ಕೂಡಿದೆ. ಇಲ್ಲಿನ ಮಂಟಪಗಳ ಮೆರವಣಿಗೆ ವಿಶೇಷ ಸಂಸ್ಕøತಿಯನ್ನು ಹೊಂದಿದೆ ಎಂದು ಅವರು ತಿಳಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿವೃತ್ತ ಮುಖ್ಯ ಆಡಳಿತಾಧಿಕಾರಿ ಬಿದ್ದಾಟಂಡ ಮೇರಿ ನಾಣಯ್ಯ ಅವರು ಮಾತನಾಡಿ ಕಥೆ, ಕವಿತೆ, ಕವನಗಳಲ್ಲಿ ಭಾವನೆ ಕಾಣಬಹುದು. ಆ ನಿಟ್ಟಿನಲ್ಲಿ ಬಹುಭಾಷಾ ಕವಿಗೋಷ್ಠಿಯು ಪ್ರತಿಯೊಬ್ಬರ ಮನಸ್ಸಿನ ಭಾವನೆಯನ್ನು ಬರವಣಿಗೆ ಮೂಲಕ ಹೊರತರಲು ಅನುಕೂಲವಾಗಿದೆ ಎಂದರು. ಮೈಸೂರಿನ ಸರ್ಕಾರಿ ಪ್ರೌಢಶಾಲೆಯ ಕನ್ನಡ ಶಿಕ್ಷಕರಾದ ಕೆ.ಎಲ್.ರೋಹಿಣಿ ಅವರು ಮಾತನಾಡಿ ಕಥೆ, ಕವನ, ಕವಿತೆ, ಸಾಹಿತ್ಯದಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯಯುತ ಬದುಕಿಗೆ ಸಹಕಾರಿ ಎಂದರು. ಬಹುಭಾಷಾ ಕವಿಗೋಷ್ಠಿ ಸಮಿತಿಯ ಅಧ್ಯಕ್ಷರಾದ ಉಜ್ವಲ್ ರಂಜಿತ್ ಅವರು ಮಾತನಾಡಿ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಹಲವು ದಶಕಗಳಿಂದ ನಡೆಸಿಕೊಂಡು ಬರಲಾಗುತ್ತಿದೆ ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಡಾ.ಶ್ರೀಧರ್ ಹೆಗಡೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾರೋಪ ಸಮಾರಂಭದಲ್ಲಿ ಅನಿಲ್ ಎಚ್.ಟಿ. ಅವರು ಪಾಲ್ಗೊಂಡು ಮಾತನಾಡಿ ಕಳೆದ 32 ವರ್ಷಗಳಿಂದ ಬಹುಭಾಷಾ ದಸರಾ ಕವಿಗೋಷ್ಠಿ ನಡೆಯುತ್ತಿದ್ದು, ಆಯ್ದು ಉತ್ತಮ ಕವನಗಳನ್ನು ಆಯ್ಕೆ ಮಾಡಿ ಸಂವಾದ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಚಿಂತನೆ ಇದೆ ಎಂದು ತಿಳಿಸಿದರು. ಇದುವರೆಗೆ ವಾಚಿಸಲಾಗಿರುವ ಉತ್ತಮ ಕವನ, ಕವಿತೆಗಳನ್ನು ಒಳಗೊಂಡ ಪುಸ್ತಕ ಹೊರತರುವ ನಿಟ್ಟಿನಲ್ಲಿ ಚಿಂತಿಸಬೇಕಿದೆ. ಈಲ್ಲೆಯಲ್ಲಿ ಸಾಕಷ್ಟು ಕವಿಗಳು, ಸಾಹಿತಿಗಳು, ಬರಹಗಾರರು ಇದ್ದು ಇವರಿಗೆ ಬೆನ್ನು ತಟ್ಟುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು, ಬಹುಭಾಷಾ ಕವಿಗೋಷ್ಠಿ ಹಾಗೂ ಇತರೆ ಸಂಘ ಸಂಸ್ಥೆಗಳು ಕೈಜೋಡಿಸುತ್ತಿರುವುದು ಶ್ಲಾಘನೀಯ ಎಂದು ಅನಿಲ್ ಎಚ್.ಟಿ. ಅವರು ಹೇಳಿದರು. ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಕಾರ್ಯಾಧ್ಯಕ್ಷರಾದ ಬಿ.ಕೆ.ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಮಡಿಕೇರಿನಗರ ದಸರಾ ಸಮಿತಿ ಖಜಾಂಜಿ ಸಬಿತಾ ಇತರರು ಇದ್ದರು. ಕನ್ನಡ, ಕೊಡವ, ಅರೆಭಾಷೆ, ಇಂಗ್ಲೀಷ್ ಕವನ, ಕನ್ನಡ ಚುಟುಕು, ಮಕ್ಕಳ ಕವನ, ತುಳು, ಮಲಯಾಳಂ, ಕುಂಬಾರ, ಹವ್ಯಕ, ಹಿಂದಿ, ಬ್ಯಾರಿ, ದಖನಿ ಉರ್ದು, ಕೊಂಕಣಿ, ಕುಂದಾಪುರ ಕನ್ನಡ, ತೆಲುಗು ಕವನ, ಕನ್ನಡ ಗಝಲ್, ಜೇನು ಕುರುಬ ಹಾಗೂ ಮರಾಠಿ ಕವನ ಹೀಗೆ ವಿವಿಧ ಭಾಷೆಯಲ್ಲಿ 80 ಕ್ಕೂ ಹೆಚ್ಚು ಕವಿಗಳು ಪಾಲ್ಗೊಂಡು ಕವಿತೆ, ಕವನ ವಾಚಿಸಿದ್ದು ಎಲ್ಲರ ಗಮನ ಸೆಳೆಯಿತು. ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ ವತಿಯಿಂದ ಹೊರತಂದಿರುವ ‘ಭಾವ ಬಿಂದು’ ಪುಸ್ತಕ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಬಹುಭಾಷಾ ಕವಿಗೋಷ್ಠಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಂಜಿತ್ ಕವಲಪಾರ, ಸಹ ಕಾರ್ಯದರ್ಶಿ ಪ್ರಸಾದ್ ಸಂಪಿಗೆ ಕಟ್ಟೆ, ಗೌರವ ಅಧ್ಯಕ್ಷರಾದ ಕಾಯಪಂಡ ಶಶಿ ಸೋಮಯ್ಯ, ಕುಡೆಕಲ್ ಸಂತೋಷ್, ಅನಿಲ್ ಎಚ್.ಟಿ., ಸದಸ್ಯರಾದ ವಿಜಯ ಹಾನಗಲ್, ಎಸ್.ಜಿ.ಉಮೇಶ್, ಪಿ.ಎಂ.ರವಿ. ಟಿ.ಜೆ.ಪ್ರವೀಣ್, ಅನಿಲ್ ಎಂ.ಯು, ಪಿ.ವಿ.ಪ್ರಭಾಕರ್, ನಾಸೀರ್ ಎಂ.ಎನ್., ಎಂ.ಪಿ.ಅನುಷಾ, ಅಬ್ದುಲ್ ಕೌಶಲ್, ಎಚ್.ಎನ್.ಲಕ್ಷ್ಮೀಶ್, ಶಯ್ಯದ್ ಇರ್ಪಾನ್, ಸಹ ಸದಸ್ಯರಾದ ಓಂಶ್ರೀ ದಯಾನಂದ ಕೂಡಕಂಡಿ, ಚೋಕಿರ ಅನಿತಾ ದೇವಯ್ಯ, ಅಂಜಲಿ ಅಶೋಕ್, ಅಂಕಿತಾ ಕಡ್ಲೇರ, ಶ್ರೀರಕ್ಷಾ ಇತರರು ಗಣ್ಯರನ್ನು ಪರಿಚಯಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.