Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಅ.15  NEWS DESK : ನಾಡಹಬ್ಬ ಮಡಿಕೇರಿ ದಸರಾ ಜನೋತ್ಸವದ ಸಂಭ್ರಮದ ನಡುವೆ, ಚಿಣ್ಣರಿಗಾಗಿ ಆಯೋಜಿಸಲಾಗಿದ್ದ 13 ನೇ ವರ್ಷದ ‘ಮಕ್ಕಳ ದಸರಾ’ ಕಾರ್ಯಕ್ರಮವು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗಾಂಧಿ ಮೈದಾನದ ‘ಕಲಾ ಸಂಭ್ರಮ’ ವೇದಿಕೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರುಗಿತು. ಪುಟಾಣಿಗಳಲ್ಲಿ ಮೂಡಿದ್ದ ಉತ್ಸಾಹ ಹಾಗೂ ಕಲಾ ಪ್ರತಿಭೆಗಳು ಸಾರ್ವಜನಿಕರ ಗಮನ ಸೆಳೆಯಿತು. ಮಕ್ಕಳ ಸಂತೆಯಲ್ಲಿ ಮಕ್ಕಳ ವ್ಯಾಪಾರ, ವ್ಯವಹಾರ ವಹಿವಾಟು ಜೋರಾಗಿಯೇ ನಡೆಯಿತು. ಮಕ್ಕಳ ಸಂತೆ ಮತ್ತು ಅಂಗಡಿ ಸ್ಪರ್ಧೆ: ಪುಟಾಣಿಗಳಿಂದಲೇ ತೆರೆಯಲ್ಪಟ್ಟ ಮಳಿಗೆಗಳು ಹಾಗೂ ಸಂತೆ ವಹಿವಾಟು ನೆರೆದಿದ್ದವರನ್ನು ಹುಬ್ಬೇರಿಸುವಂತೆ ಮಾಡಿತು. ಪಾಲಕ್, ಮೆಂತೆ, ಸಬ್ಸಿಗೆ, ದಂಟು, ಕೀರೆ, ಗಣಿಕೆ, ನೊಗ್ಗೆ, ಬಸಳೆ, ಎಲೆಕೋಸು, ವೀಳ್ಯದೆಲೆಯಿಂದ ಹಿಡಿದು ಎಲ್ಲಾ ರೀತಿಯ ಸೊಪ್ಪುಗಳು, ತರಕಾರಿ ವಿಭಾಗದಲ್ಲಿ ಕುಂಬಳ, ಬೂದುಕುಂಬಳ, ಸೌತೆಕಾಯಿ, ಸೋರೆಕಾಯಿ ವಿವಿಧ ರೀತಿಯ ತರಕಾರಿಗಳು, ಹಣ್ಣುಗಳಲ್ಲಿ ಬಾಳೆ, ಕಿತ್ತಳೆ, ಚಕೋತಾ, ಸೇಬು, ಮತ್ತೊಂದು ಬದಿಯಲ್ಲಿ ಪಾನಿಪೂರಿ, ಮಸಾಲಪೂರಿ, ಸೇರಿದಂತೆ ವಿವಿಧ ರೀತಿಯ ತಂಪು ಪಾನೀಯ ಹೀಗೆ ಒಂದು ಬದಿಯಲ್ಲಿ ಸೊಪ್ಪು ತರಕಾರಿ ಇದ್ದರೆ, ಮತ್ತೊಂದು ಬದಿಯಲ್ಲಿ ತಿಂಡಿ ತಿನಿಸು ವ್ಯಾಪಾರ ಎಲ್ಲರನ್ನು ಆಕರ್ಷಣಿಯಗೊಳಿಸಿತು. ಜೊತೆಗೆ ತಿಂಡಿ ತಿನಿಸುಗಳು ಪ್ರತಿಯೊಬ್ಬರ ಬಾಯಲ್ಲಿ ನೀರು ಭರಿಸುವಂತೆ ಮಾಡಿತ್ತು. ವಿವಿಧ ಪೌರಾಣಿಕ, ಐತಿಹಾಸಿಕ ಹಾಗೂ ರಾಷ್ಟ್ರೀಯ ನಾಯಕರ ವೇಷಭೂಷಣಗಳಲ್ಲಿ ಕಂಗೊಳಿಸಿದ ಮಕ್ಕಳು ನೋಡುಗರ ಕಣ್ಮನ ಸೆಳೆದರು. ಮಕ್ಕಳ ಸೃಜನಶೀಲತೆಯನ್ನು ಹೊರಹಾಕಲು ಮಂಟಪ ರಚನಾ ಸ್ಪರ್ಧೆಗಳು ಬಹಳಷ್ಟು ಮೆಚ್ಚುಗೆ ಗಳಿಸಿದವು. ಮಡಿಕೇರಿ ದಸರಾ ಮಂಟಪವೇ ಕಣ್ತುಂಬಿಕೊಳ್ಳುವಂತೆ ಕಿರುಮಂಟಪ ಮಾದರಿಯಲ್ಲಿ ಐತಿಹಾಸಿಕ ಸಂದೇಶ ಸಾರಿದ್ದು ವಿಶೇಷವಾಗಿತ್ತು, ಪೌರಾಣಿಕ ಮಂಟಪ ಮೂಲಕ ಚಿತ್ರಣ ಗಮನ ಸೆಳೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ, ಮಕ್ಕಳ ವ್ಯಾಪಾರ ವಹಿವಾಟಿನ ಬಗ್ಗೆ ತಿಳಿದುಕೊಳ್ಳಲು ಮಕ್ಕಳ ಸಂತೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ ಎಂದು ಹೇಳಿದರು. ಶಿಕ್ಷಣ ಇಲಾಖೆಯಿಂದ ಜಿಲ್ಲೆಯಲ್ಲಿರುವ ಐದು ವಿಷಯಗಳನ್ನು ತೆಗೆದುಕೊಂಡು ಜಿಲ್ಲೆಯ ಸಮಸ್ಯೆ ಬಗ್ಗೆ ಚರ್ಚೆ ನಡೆಸಲು ಜಿಲ್ಲೆಯಲ್ಲಿ ಯುವ ಸಂಸತ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಬೇಕು. ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರು ಪ್ರೋತ್ಸಾಹ ನೀಡುವಂತಾಗಬೇಕು ಎಂದು ಕರೆ ನೀಡಿದರು. ಮಕ್ಕಳ ಸಂತೆ, ಅಂಗಡಿ ಸ್ಪರ್ಧೆಯನ್ನು ರೋಟರಿ ಜಿಲ್ಲೆ 3181 ನ ರಾಜ್ಯಪಾಲ ಸತೀಶ್ ಭೊಳಾರ್ ಅವರು ಉದ್ಘಾಟಿಸಿ ಮಾತನಾಡಿ, ದಸರಾ ಉತ್ಸವದ ಪ್ರಯುಕ್ತ ರೋಟರಿ ಸಂಸ್ಥೆಯಿಂದ ‘ರೋಟರಿ ನವರಂಗ’ ಎಂಬ ಕಲ್ಪನೆಯೊಂದಿಗೆ ಅನ್ನದಾನ, ಆರೋಗ್ಯ ಸೇವೆ, ಪರಿಸರ ಜಾಗೃತಿ, ಹಿರಿಯ ನಾಗರಿಕರಿಗೆ ಗೌರವ ಸೇರಿದಂತೆ ಒಂಭತ್ತು ದಿವಸದ ವಿಶಿಷ್ಟ ಕಾರ್ಯಕ್ರಮ ನಡೆಸುತ್ತಿದೆ. ಎಲ್ಲಾ ಸಂಘ-ಸಂಸ್ಥೆ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು. ಸರ್ಕಾರದ ಸಹಕಾರದೊಂದಿಗೆ ಉತ್ತಮ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ತುಂಬುವುದರ ಜೊತೆಗೆ ಅವರಲ್ಲಿ ವ್ಯವಹಾರ ಜ್ಞಾನವನ್ನು ಬೆಳೆಸಲು ಸಹಕಾರಿಯಾಗಿದೆ. ಅಲ್ಲದೆ, ಮಕ್ಕಳಲ್ಲಿ ಧಾರ್ಮಿಕ ಭಾವನೆ ದೇಶ ಭಕ್ತಿ ಮೂಡುತ್ತದೆ. ಇಂತಹ ಕಾರ್ಯಕ್ರಮ ಆಯೋಜಿಸಿರುವುದು ರೋಟರಿ ಮಿಸ್ಟಿ ಹಿಲ್ಸ್‍ನ ಕಾರ್ಯ ಶ್ಲಾಘನೀಯ ಎಂದರು.
ನಾವು ಮಾಡುವ ಯಾವುದೇ ಹಬ್ಬ, ಆಚರಣೆ ಅಥವಾ ಸಂಪ್ರದಾಯಗಳು ಕೇವಲ ಬಾಹ್ಯ ಪ್ರದರ್ಶನಕ್ಕμÉ್ಟೀ ಸೀಮಿತವಾಗದೆ, ವ್ಯಕ್ತಿಯ ಒಳಗಿನಿಂದ ಮೂಡಿಬರುವ ಸದ್ಭಾವನೆ ಮತ್ತು ನಡವಳಿಕೆಯ ಬದಲಾವಣೆಗೆ ಸಾಕ್ಷಿಯಾದಾಗ ಮಾತ್ರ ಅವುಗಳಿಗೆ ನೈಜ ಸಾರ್ಥಕತೆ ಲಭಿಸುತ್ತದೆ. ಹಿರಿಯರನ್ನು, ತಂದೆ-ತಾಯಿಯರನ್ನು ಗೌರವದಿಂದ ಕಾಣುವಂತಾಗಬೇಕು ಎಂದು ಹೇಳಿದರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್.ರಾಜೇಶ್ ಅವರು ಮಾತನಾಡಿ, ಮಕ್ಕಳ ದಸರಾ ಕಾರ್ಯಕ್ರಮ ಮಕ್ಕಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆಯಾಗಿದ್ದು, ಅವರ ಕನಸುಗಳಿಗೆ ಅವಕಾಶ ನೀಡಿದೆ. ಮಕ್ಕಳು ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಹೇಳಿದರು. ರೋಟರಿ ವಲಯ 6 ರ ಸಹಾಯಕ ಗವರ್ನರ್ ಎಚ್.ಎಸ್.ವಸಂತ್ ಕುಮಾರ್, ವಲಯ ಸೇನಾನಿ ಮಧುಸೂದನ್ ಇದ್ದರು. ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ಸ್ವಾಗತಿಸಿ, ನಿರೂಪಿಸಿದರು. ರೋಟರಿ ಮಿಸ್ಟಿ ಹಿಲ್ಸ್ ಕಾರ್ಯದರ್ಶಿ ಡಾ.ಜಿ.ಡಿ.ಚೇತನ್ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.