Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ. 17: ಮಡಿಕೇರಿ ದಸರಾ ಅಂಗವಾಗಿ ಮಡಿಕೇರಿ ನಗರ ದಸರಾ ಸಮಿತಿ ಹಾಗೂ ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯ ಸಹಯೋಗದಲ್ಲಿ ಕೊಡಗು ಜಾನಪದ ಪರಿಷತ್ ವತಿಯಿಂದ 6ನೇ ವರ್ಷದ ಜಾನಪದ ದಸರಾ ಅ. 18ರಂದು (ಇಂದು) ಆಯೋಜಿಸಲಾಗಿದೆ ಎಂದು ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಹಾಗೂ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ.

ಬೆಳಿಗ್ಗೆ 9.30ಕ್ಕೆ ನಗರದ ಖಾಸಗಿ ಬಸ್ ನಿಲ್ದಾಣದಿಂದ ಕಲಾ ಜಾಥಾ ಆರಂಭವಾಗಲಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಚಾಲನೆ ನೀಡಲಿದ್ದಾರೆ. ಡೊಳ್ಳು ಕುಣಿತ, ಪೂಜಾ ಕುಣಿತ, ವೀರಗಾಸೆ, ಕರಡಿ ಮಜಲು, ರಂಗ ಕುಣಿತ, ಜಾನಪದ ಜಾಗೃತಿ ನಾಟಕ ಹಾಗೂ ಆದಿವಾಸಿ ನೃತ್ಯ ಪ್ರದರ್ಶನಗಳು ಜಾಥಾದ ಪ್ರಮುಖ ಆಕರ್ಷಣೆಗಳಾಗಿವೆ.

ಬೆಳಿಗ್ಗೆ 10 ಗಂಟೆಗೆ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಜಾನಪದ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷೆ ಪಿ. ಕಲಾವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಉದ್ಯಮಿಗಳಾದ ಅವರೆಮಾದಂಡ ಶರಣ್ ಪೂಣಚ್ಚ, ನಾಪಂಡ ಮುತ್ತಪ್ಪ, ಪೊನ್ನಚ್ಚನ ಮೋಹನ್, ಕುಕ್ಕೇರ ಜಯ ಚಿಣ್ಣಪ್ಪ, ಜಯಂತಿ ಶೆಟ್ಟಿ, ಸಮಾಜ ಸೇವಕ ಎಡಿಕೇರಿ ಪ್ರಸನ್ನ, ಜಿಲ್ಲಾಡಳಿತದ ಕಾನೂನು ಸಲಹೆಗಾರ ಲೋಕೇಶ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಚಿನ್ನಸ್ವಾಮಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಜಾನಪದ ಗಾಯಕರುಗಳಾದ ಉಮೇಶ್ ಹಾಗೂ ರಿಕ್ಕಿ ಮುತ್ತಪ್ಪ, ಮಡಿಕೇರಿ ನಗರ ದಸರಾ ಸಮಿತಿ ಉಪಾಧ್ಯಕ್ಷ ಮಹೇಶ್ ಜೈನಿ, ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿ ಸಬಿತಾ ಹಾಗೂ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ಧೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಭಕ್ತರ ಹರ್ಷೋದ್ಘಾರದ ನಡುವೆ ತಲಕಾವೇರಿಯಲ್ಲಿ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ಧೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಭಕ್ತರ ಹರ್ಷೋದ್ಘಾರದ ನಡುವೆ ತಲಕಾವೇರಿಯಲ್ಲಿ ತೀರ್ಥೋದ್ಭವ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.