ಮೈಸೂರು, NEWS DESK ಅ. 16: ಮೈಸೂರು ದಸರಾ ಮಹೋತ್ಸವ–2026ರ ಅಂಗವಾಗಿ ಮೈಸೂರಿನ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪಿ. ಕಾಳಿಂಗರಾವ್ ಸಭಾಂಗಣದಲ್ಲಿ ಅ. 16ರಂದು ನಡೆದ ರಾಜ್ಯಮಟ್ಟದ ದಸರಾ ಯೋಗಾಸನ ಸ್ಪರ್ಧೆಯಲ್ಲಿ ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿ ಸುಮೇಶ್ ಕೆ.ಪಿ. ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಚೆಶೈರ್ ಹೋಮ್ ವಿಶೇಷ ಶಾಲೆಯ ಮುಖ್ಯ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಯೋಗ ಶಿಕ್ಷಕರಾದ ಶಿವರಾಜ್ ಎಸ್.ಸಿ. ಅವರ ತರಬೇತಿಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಸುಮೇಶ್, ವಿಶೇಷ ಚೇತನರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ, ನಗದು ಬಹುಮಾನ ಹಾಗೂ ಪ್ರಮಾಣಪತ್ರವನ್ನು ಸ್ವೀಕರಿಸಿದ್ದಾರೆ.
ಸುಮೇಶ್ ಅವರು ಸಿದ್ದಾಪುರದ ಗುಯ್ಯ ಗ್ರಾಮದ ನಿವಾಸಿಗಳಾದ ಪ್ರೇಮಾ ನಂದ ಕೆ.ಸಿ. ಮತ್ತು ಮೀನಾಕ್ಷಿ ಅವರ ಪುತ್ರರಾಗಿದ್ದಾರೆ.
ಸುಮೇಶ್ ಅವರ ಸಾಧನೆಗೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.





































