ಮಡಿಕೇರಿ, NEWS DESK ಅ. 18: ವಿರಾಜಪೇಟೆ ತಾಲೂಕಿನ ಕರಡಿಗೋಡು ಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಹಾನಿಗೊಳಗಾದ ಮನೆಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮನೆಯ ಮಾಲೀಕ ಷಣ್ಮುಗಂ ಅವರನ್ನು ಭೇಟಿಯಾದ ಶಾಸಕರು, ಘಟನೆಯ ಕುರಿತು ಮಾಹಿತಿ ಪಡೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು.
ಬಳಿಕ ಸಂತ್ರಸ್ತ ಷಣ್ಮುಗಂ ಅವರ ಕುಟುಂಬಕ್ಕೆ ಮನೆಗೆ ಅಗತ್ಯವಿರುವ ಸಾಮಗ್ರಿಗಳ ಕಿಟ್ಗಳನ್ನು ವಿತರಿಸಿದರು. ಅಲ್ಲದೆ, ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಿದ್ದಾಪುರ ವಲಯ ಅಧ್ಯಕ್ಷ ಪ್ರತಿಷ್, ಮುಖಂಡ ಸೂರಜ್ ಹೊಸೂರು, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಮಾಜಿ ಪಂಚಾಯಿತಿ ಸದಸ್ಯ ಕರುಪಯ್ಯ, ಮಿಲನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.





































