ಮಡಿಕೇರಿ NEWS DESK ಅ.19 : ಐತಿಹಾಸಿಕ ದಸರಾ ಹಬ್ಬದ ಪ್ರಯುಕ್ತ ಮಡಿಕೇರಿ ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಭಾನುವಾರ ಸಂಜೆ ದುರ್ಗಾಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಅರ್ಚಕರಾದ ವೆಂಕಟರಮಣ ಭಟ್ ಅವರ ನೇತೃತ್ವದಲ್ಲಿ ದುರ್ಗಾಪೂಜೆ, ಶ್ರೀ ಕನ್ನಿಕಾ ಪರಮೇಶ್ವರಿ ದೇವಿಗೆ ಅಲಂಕಾರ ಪೂಜೆ, ಮಹಾ ಪೂಜೆ ಹಾಗೂ ಮಹಾ ಮಂಗಳಾರತಿ ನಡೆಯಿತು. ನೆರೆದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು. ನವರಾತ್ರಿ ಪ್ರಯುಕ್ತ ಅ.21 ರವರೆಗೆ ಶ್ರೀ ಕನ್ನಿಕಾ ಪರಮೇಶ್ವರಿ ದೇವಿಗೆ ವಿಶೇಷ ಪೂಜೆ, ಧಾರ್ಮಿಕ ವಿಧಿ ವಿಧಾನಗಳು ಜರುಗಲಿವೆ.


















