Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ, NEWS DESK ಅ. 19: ಗೋಣಿಕೊಪ್ಪ ದಸರಾ ಮಹೋತ್ಸವದ ಅಂಗವಾಗಿ ಕಾವೇರಿ ದಸರಾ ಸಮಿತಿ ಹಾಗೂ ಸಾಂಸ್ಕೃತಿಕ ಸಮಿತಿಯ ವತಿಯಿಂದ ಗೋಣಿಕೊಪ್ಪ ಸರ್ಕಾರಿ ಶಾಲಾ ಮೈದಾನದ ದಸರಾ ಕಲಾ ವೇದಿಕೆಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗೀತ ಗಾಯನ ಹಾಗೂ ಮಕ್ಕಳ ನೃತ್ಯ ವೈವಿಧ್ಯ ಪ್ರೇಕ್ಷಕರ ಗಮನ ಸೆಳೆಯಿತು.

ಕೊಡಗು ಜಿಲ್ಲಾ ಲೇಖಕರು ಮತ್ತು ಕಲಾವಿದರ ಬಳಗದ ವತಿಯಿಂದ ಆಯೋಜಿಸಿದ್ದ ಗೀತ ಗಾಯನ ಕಾರ್ಯಕ್ರಮದಲ್ಲಿ ಕುಶಾಲನಗರದ ಆರ್. ರವಿ ಮತ್ತು ಕೆ.ವಿ. ಉಮೇಶ್ ನೇತೃತ್ವದ ತಂಡದ ಗಾಯಕರು ಜಾನಪದ ಗೀತೆಗಳನ್ನು ಪ್ರಸ್ತುತಪಡಿಸಿ ಪ್ರೇಕ್ಷಕರನ್ನು ರಂಜಿಸಿದರು. ಸಹ ಗಾಯಕರಾದ ಎಚ್.ಎಸ್. ಜಯಶೀಲಾ, ದಿನೇಶ್ ಮಲ್ಲ, ಆರ್. ಲಿಖಿತ್ ಹಾಗೂ ಟಿ.ಬಿ. ಮಂಜುನಾಥ್ ಗಾಯನಕ್ಕೆ ಸಾಥ್ ನೀಡಿದರು.

ಇದೇ ಸಂದರ್ಭದಲ್ಲಿ ಪೊನ್ನಂಪೇಟೆಯ ನಾದನೃತ್ಯ ನಾಟ್ಯಶಾಲೆಯ ಕಲಾವಿದರು ಪ್ರಸ್ತುತಪಡಿಸಿದ ನೃತ್ಯ ವೈಭವ ಹಾಗೂ ವಿರಾಜಪೇಟೆಯ ಜಗನ್ಮೋಹನ ನಾಟ್ಯಾಲಯದ ವತಿಯಿಂದ ಪ್ರದರ್ಶಿಸಲಾದ ನೃತ್ಯ ಕಾರ್ಯಕ್ರಮಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು.

ಮಕ್ಕಳ ನೃತ್ಯ ವೈಭವ

ವಿದೂಷಿ ಮಂಜು ಭಾರ್ಗವಿ ಅವರ ಮಾರ್ಗದರ್ಶನದಲ್ಲಿ ಕುಶಾಲನಗರದ ಕು. ಅಭಿತ ಮತ್ತು ತಂಡದವರು ಪ್ರದರ್ಶಿಸಿದ ನೃತ್ಯ ವೈವಿಧ್ಯ ವಿಶೇಷ ಗಮನ ಸೆಳೆಯಿತು. ಮಕ್ಕಳ ತಂಡವು ಭರತನಾಟ್ಯ ಹಾಗೂ ಉಮ್ಮತ್ತಾಟ್ ಜನಪದ ಕಲೆಯ ಆಧಾರಿತ ಕೋಲಾಟ ನೃತ್ಯವನ್ನು ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು.

ವಿದ್ಯಾರ್ಥಿನಿಯರಾದ ಶ್ರೇಯ, ಪ್ರಾರ್ಥನ, ಲಾವಣ್ಯ, ಇಂಚರ, ಷಷ್ಠಿ ಷಾಡ್ಗುಣ್ಯ, ಜಿಷ, ಪ್ರಕೃತಿ, ಲಿವ್ಯ, ಪರಿಣಿತ ಹಾಗೂ ಮೌಲ್ಯ ತಮ್ಮ ನೃತ್ಯ ಪ್ರದರ್ಶನದ ಮೂಲಕ ಕಲಾ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವಕಾಮತ್, ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಟಿ.ಜಿ. ಪ್ರೇಮಕುಮಾರ್, ದಸರಾ ಸಮಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಕಾರ್ಯಪ್ಪ, ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ದಿಲನ್ ಚೆಂಗಪ್ಪ, ಕಾರ್ಯದರ್ಶಿ ಚಂದನ ಮಂಜುನಾಥ್, ಸಂಚಾಲಕ ಬಿ.ಎನ್. ಪ್ರಕಾಶ್, ಸಂಯೋಜಕ ಚಂದನ್ ಕಾಮತ್, ಶೀಲಾ ಬೋಪಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಂಪೇಟೆ, NEWS DESK ಅ.19: ಪೊನ್ನಂಪೇಟೆ ತಾಲ್ಲೂಕಿನ ಟಿ. ಶೆಟ್ಟಿಗೇರಿ ಭಾಗಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ…

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026

ಸೈನಿಕ ಶಾಲೆ ಕೊಡಗಿನಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು (ಹೆಚ್) ಕ್ರೀಡಾಕೂಟ-2026ರ ಸಮಾರೋಪ ಸಮಾರಂಭ

ಅಕ್ಟೋಬರ್ 19, 2026

ನಾಪೋಕ್ಲು: ಬಲಮುರಿ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಸಂಭ್ರಮದ ಪುಣ್ಯ ತೀರ್ಥಸ್ನಾನ ಜಾತ್ರಾ ಮಹೋತ್ಸವ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.