ಕುಶಾಲನಗರ, NEWS DESK ಅ.23: ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ನೂತನ ಕುಲಸಚಿವರಾಗಿ ಪ್ರೊ. ಭಾರತಿ ಹಿರೇಮಠ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಎಂ. ಸುರೇಶ್ ಅವರನ್ನು ಅವರ ಮಾತೃಸಂಸ್ಥೆಯಾದ ಮೈಸೂರಿನ ಯುವರಾಜ ಕಾಲೇಜಿನ ಅರ್ಥಶಾಸ್ತ್ರ ವಿಭಾಗಕ್ಕೆ ಮರಳಿ ನಿಯೋಜಿಸಲಾಗಿದೆ.
ಪ್ರೊ. ಭಾರತಿ ಹಿರೇಮಠ ಅವರು ಈ ಹಿಂದೆ ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನ ಅಂತರರಾಷ್ಟ್ರೀಯ ಸಂಬಂಧಗಳ ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

















