ಮಡಿಕೇರಿ ಅ.24 NEWS DESK : ವಿಜಯದಶಮಿ ಹಬ್ಬದ ಪ್ರಯುಕ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವತಿಯಿಂದ ಅ.24ರಂದು ಮಡಿಕೇರಿ ನಗರದಲ್ಲಿ ಪಥಸಂಚಲನ ಆಯೋಜಿಸಲಾಗಿದೆ. ಸಂಜೆ 5 ಗಂಟೆಗೆ ನಗರದ ಮುತ್ತಪ್ಪ ದೇವಾಲಯದಿಂದ ಪಥಸಂಚಲನ ಆರಂಭವಾಗಲಿದ್ದು, ಚಿಕ್ಕಪೇಟೆ ಮೂಲಕ ಸಾಗಿ ಗಾಂಧಿ ಮೈದಾನದಲ್ಲಿ ಮುಕ್ತಾಯಗೊಳ್ಳಲಿದೆ. ಪಥಸಂಚಲನದಲ್ಲಿ ಸಂಘದ ಗಣವೇಷಧಾರಿ ಸ್ವಯಂಸೇವಕರು ಶಿಸ್ತುಬದ್ಧವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

















