ಕುಶಾಲನಗರ ಅ.24 NEWS DESK : ಮಳೆಯಿಂದಾಗಿ ಕುಶಾಲನಗರ ವ್ಯಾಪ್ತಿಯಲ್ಲಿ ವಿವಿಧ ಮನೆಗಳಿಗೆ ಹಾನಿಯಾಗಿದೆ. ತಾಲೂಕಿನ ಚಿಕ್ಕ ಅಳುವಾರ ಗ್ರಾಮದ ನಿವಾಸಿ ಟಿ.ವೈ.ವಿಜಯಕುಮಾರ್ ಅವರ ವಾಸದ ಮನೆಯ ಗೋಡೆಯ ಭಾಗ ಹಾನಿಗೊಳಗಾಗಿದೆ. ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಕೂಡುಮಂಗೂರು ಗ್ರಾಮದ ಜಯಲಕ್ಷ್ಮಿ ಎಂಬವರ ಮನೆಯ ಮೇಲ್ಛಾವಣಿ ಹಾನಿಯಾಗಿದೆ. ನಂಜರಾಯಪಟ್ಟಣ ಗ್ರಾ.ಪಂ ವ್ಯಾಪ್ತಿಯ ರಂಗಸಮುದ್ರ ಗ್ರಾಮದ ನವೀನ್ ಅವರ ಕೊಟ್ಟಿಗೆಗೂ ಹಾನಿಯಾಗಿದೆ. ಮಳೆಯಿಂದ ಉಂಟಾದ ಹಾನಿಯ ಕುರಿತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.


















