ಸೋಮವಾರಪೇಟೆ NEWS DESK ಅ.26 : ಸೋಮವಾರಪೇಟೆ ತಾಲ್ಲೂಕು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವತಿಯಿಂದ ವಿಜಯದಶಮಿ ಅಂಗವಾಗಿ ಪಟ್ಟಣದಲ್ಲಿ ಪಥಸಂಚಲನ ನಡೆಯಿತು. ಪಟ್ಟಣದ ಜಿ.ಎಂ.ಪಿ. ಶಾಲಾ ಮೈದಾನದಿಂದ ಆರಂಭಗೊಂಡ ಪಥಸಂಚಲನವು ಬಸವೇಶ್ವರ ರಸ್ತೆ, ಮುಖ್ಯರಸ್ತೆ ಹಾಗೂ ಕ್ಲಬ್ ರಸ್ತೆ ಮೂಲಕ ಸಾಗಿ ಆಂಜನೇಯ ದೇವಾಲಯದಲ್ಲಿ ಸಮಾಪ್ತಿಗೊಂಡಿತು. ವಿಜಯದಶಮಿ ಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ಪಥಸಂಚಲನದಲ್ಲಿ ಆರ್ಎಸ್ಎಸ್ ಸ್ವಯಂಸೇವಕರು ಶಿಸ್ತಿನಿಂದ ಪಾಲ್ಗೊಂಡರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ಸಾಗಿತು.

















