Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುಂಟಿಕೊಪ್ಪ ಆರೋಗ್ಯ ಕೇಂದ್ರದ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಡಿಎಚ್‌ಒ ಸತೀಶ್ ಕುಮಾರ್ ಭರವಸೆ; ವೈದ್ಯರು, ಔಷಧಿಗಳ ಕೊರತೆ ನೀಗಿಸಲು ಕ್ರಮ; ಸ್ವಚ್ಛತೆ ಮತ್ತು ಕಟ್ಟಡ ದುರಸ್ತಿಗೆ ₹10 ಲಕ್ಷ ಅನುದಾನ ಬಿಡುಗಡೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಆರೋಗ್ಯ ಕೇಂದ್ರದ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಡಿಎಚ್‌ಒ ಸತೀಶ್ ಕುಮಾರ್ ಭರವಸೆ; ವೈದ್ಯರು, ಔಷಧಿಗಳ ಕೊರತೆ ನೀಗಿಸಲು ಕ್ರಮ; ಸ್ವಚ್ಛತೆ ಮತ್ತು ಕಟ್ಟಡ ದುರಸ್ತಿಗೆ ₹10 ಲಕ್ಷ ಅನುದಾನ ಬಿಡುಗಡೆ

ಅಕ್ಟೋಬರ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸುಂಟಿಕೊಪ್ಪ, NEWS DESK ಅ. 27: ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ವೈದ್ಯರು ಮತ್ತು ಔಷಧಿಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಭರವಸೆ ನೀಡಿದರು.

ಮಂಗಳವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ವೇವ್ ಸಂಘಟನೆಯ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ ಆರೋಗ್ಯ ಕೇಂದ್ರದ ಸ್ಥಿತಿಗತಿಗಳ ಕುರಿತು ಪ್ರತ್ಯಕ್ಷ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಸತೀಶ್ ಕುಮಾರ್, ಜಿಲ್ಲೆಯಲ್ಲಿ ಕೇವಲ ಏಳು ಮಂದಿ ಖಾಯಂ ನೇಮಕಾತಿ ಹೊಂದಿದ ವೈದ್ಯರಿದ್ದು, ಉಳಿದ ಕಡೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು. ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ವೈದ್ಯರು ಉನ್ನತ ಶಿಕ್ಷಣ ಹಾಗೂ ಇತರ ಕಾರಣಗಳಿಂದ ಸೇವೆಯಿಂದ ನಿರ್ಗಮಿಸುತ್ತಿರುವುದರಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸುವಲ್ಲಿ ಸಮಸ್ಯೆಯಾಗುತ್ತಿದೆ ಎಂದರು.

ನೇಮಕಗೊಂಡ ವೈದ್ಯರು ಕರ್ತವ್ಯಕ್ಕೆ ಹಾಜರಾಗದಿರುವುದು ಕೂಡ ಸಮಸ್ಯೆಗೆ ಕಾರಣವಾಗಿದೆ. ಈ ಕುರಿತು ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು, ವೈದ್ಯರ ಖಾಲಿ ಹುದ್ದೆಗಳನ್ನು ತುರ್ತು ನೇಮಕಾತಿ ಎಂದು ಪರಿಗಣಿಸಿ ಭರ್ತಿ ಮಾಡಲು ಪ್ರಯತ್ನಿಸಲಾಗುತ್ತಿದೆ. ಅನಧಿಕೃತವಾಗಿ ಕರ್ತವ್ಯಕ್ಕೆ ಗೈರುಹಾಜರಾಗುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಆರೋಗ್ಯ ಕೇಂದ್ರದಲ್ಲಿ ಇಸಿಜಿ ಮತ್ತು ರಕ್ತದೊತ್ತಡ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುತ್ತಿದ್ದು, ಈ ಸಂಬಂಧದ ಎರಡು ವೈದ್ಯಕೀಯ ಉಪಕರಣಗಳು ದುರಸ್ತಿಗೀಡಾಗಿದ್ದವು. ಅವುಗಳನ್ನು ಆದ್ಯತೆ ಮೇರೆಗೆ ಸುಸ್ಥಿತಿಗೆ ತರಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ರೋಗಿಗಳ ಪರವಾಗಿ ಮಾತನಾಡಿದ ಕಾನಿಶ್, ಆರೋಗ್ಯ ಕೇಂದ್ರದಲ್ಲಿ ಔಷಧಿಗಳ ಕೊರತೆ ಇರುವುದರಿಂದ ವೈದ್ಯರು ಚೀಟಿಯಲ್ಲಿ ಬರೆದುಕೊಡುವ ಔಷಧಿಗಳು ಲಭ್ಯವಾಗುತ್ತಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳ ಗಮನಕ್ಕೆ ತಂದರು.

ವೇವ್ ಸಂಘಟನೆಯ ಸಂಚಾಲಕ ಕೆ.ಎ. ಲತೀಫ್ ಮಾತನಾಡಿ, ಆರೋಗ್ಯ ಕೇಂದ್ರದ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಅಗತ್ಯವಿದೆ. ಶಿಥಿಲಗೊಂಡ ಕಟ್ಟಡಗಳಲ್ಲಿ ಹಾವು ಸೇರಿದಂತೆ ಇತರ ವಿಷಜಂತುಗಳು ಸೇರಿಕೊಳ್ಳುತ್ತಿದ್ದು, ಹಿಂಭಾಗದಲ್ಲಿರುವ ವಸತಿ ಮನೆಗಳು ಹಾಗೂ ಪಕ್ಕದ ಶಾಲೆಗೆ ಅಪಾಯ ಉಂಟಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸುಮಾರು ಒಂದೂವರೆ ತಿಂಗಳ ಹಿಂದೆ ಸಂಬಂಧಪಟ್ಟ ಅಭಿಯಂತರರು ಭೇಟಿ ನೀಡಿದ ಸಂದರ್ಭದಲ್ಲಿ ಈ ಸಮಸ್ಯೆಯನ್ನು ಅವರ ಗಮನಕ್ಕೆ ತರಲಾಗಿತ್ತು. ಸ್ವಚ್ಛತಾ ಕಾರ್ಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಈವರೆಗೆ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಬಿ.ಐ. ಭವಾನಿ ಅವರು ಆರೋಗ್ಯ ಕೇಂದ್ರದಲ್ಲಿನ ಸಮಸ್ಯೆಗಳನ್ನು ವಿವರಿಸಿ, ಅಗತ್ಯ ಔಷಧಿಗಳು ದೊರೆಯದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಾ. ಸತೀಶ್ ಕುಮಾರ್, ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ಶಿಥಿಲಗೊಂಡ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಕ್ಕಾಗಿ ₹10 ಲಕ್ಷ ಅನುದಾನ ಬಿಡುಗಡೆಯಾಗಿದೆ. ಸಂಬಂಧಪಟ್ಟ ಅಭಿಯಂತರರು ಮತ್ತು ಗುತ್ತಿಗೆದಾರರು ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದರು. ಅಲ್ಲದೆ, ಆರೋಗ್ಯ ಕೇಂದ್ರದಲ್ಲಿ ಲಭ್ಯವಿರುವ ಔಷಧಿಗಳನ್ನೇ ರೋಗಿಗಳಿಗೆ ವೈದ್ಯರು ಚೀಟಿಯ ಮೂಲಕ ಸೂಚಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಎಚ್.ಯು. ರಫೀಕ್ ಖಾನ್, ಸ್ವಚ್ಛತೆ ಮತ್ತು ದುರಸ್ತಿ ಕಾರ್ಯಗಳಿಗೆ ₹8 ಲಕ್ಷ ವೆಚ್ಚದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಗುತ್ತಿಗೆದಾರರನ್ನು ಕೂಡ ನಿಯೋಜಿಸಲಾಗಿದೆ ಎಂದು ತಿಳಿಸಿದರು. ಸಂಬಂಧಪಟ್ಟವರು ತ್ವರಿತವಾಗಿ ಕಾರ್ಯನಿರ್ವಹಿಸಿ ಸಮಸ್ಯೆಗಳನ್ನು ಪರಿಹರಿಸಬೇಕಿದೆ ಎಂದು ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಸ್ವಚ್ಛ ಕಾವೇರಿ ಜಾಗೃತಿ ರಥಯಾತ್ರೆಗೆ ಚಾಲನೆ : ಪ್ರಕೃತಿಯೊಂದಿಗೆ ಬದುಕಲು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕರೆ

ಅಕ್ಟೋಬರ್ 27, 2026

ಡಾ. ಲಲಿತ ಕೆ.ಪಿ. ಅವರಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಜಾನಪದದ ಮೂಲ ಬೇರುಗಳಿಲ್ಲದೆ ಆಧುನಿಕತೆ ಇಲ್ಲ: ಡಾ. ಲಲಿತ ಕೆ.ಪಿ.

ಅಕ್ಟೋಬರ್ 27, 2026

ಸುಂಟಿಕೊಪ್ಪ ಆರೋಗ್ಯ ಕೇಂದ್ರದ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಡಿಎಚ್‌ಒ ಸತೀಶ್ ಕುಮಾರ್ ಭರವಸೆ; ವೈದ್ಯರು, ಔಷಧಿಗಳ ಕೊರತೆ ನೀಗಿಸಲು ಕ್ರಮ; ಸ್ವಚ್ಛತೆ ಮತ್ತು ಕಟ್ಟಡ ದುರಸ್ತಿಗೆ ₹10 ಲಕ್ಷ ಅನುದಾನ ಬಿಡುಗಡೆ

ಅಕ್ಟೋಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಅ. 27: ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ವೈದ್ಯರು ಮತ್ತು ಔಷಧಿಗಳ ಕೊರತೆ ಸೇರಿದಂತೆ ವಿವಿಧ…

ಸ್ವಚ್ಛ ಕಾವೇರಿ ಜಾಗೃತಿ ರಥಯಾತ್ರೆಗೆ ಚಾಲನೆ : ಪ್ರಕೃತಿಯೊಂದಿಗೆ ಬದುಕಲು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕರೆ

ಅಕ್ಟೋಬರ್ 27, 2026

ಡಾ. ಲಲಿತ ಕೆ.ಪಿ. ಅವರಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಜಾನಪದದ ಮೂಲ ಬೇರುಗಳಿಲ್ಲದೆ ಆಧುನಿಕತೆ ಇಲ್ಲ: ಡಾ. ಲಲಿತ ಕೆ.ಪಿ.

ಅಕ್ಟೋಬರ್ 27, 2026

ಪತ್ತಲೋಧಿ ದಿನದಂದು ಸಿಎನ್‌ಸಿಯಿಂದ ತರ್ಪಣ ಅರ್ಪಣೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಪ್ರಕರಣ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಖಂಡನೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕವನ್ ಕೊತ್ತೋಳಿ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಖಂಡನೀಯ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಚಾಳಿಯನ್ನು ಬಿಜೆಪಿ ನಿಲ್ಲಿಸಲಿ

ಅಕ್ಟೋಬರ್ 27, 2026

ಆವಂಡಿ ಗ್ರಾಮದ ಕೋಟೆ ಅಬ್ಬಿ ಹೊಳೆಯಲ್ಲಿ ಅಕ್ರಮ ಮೀನುಗಾರಿಕೆ : ಕ್ರಮಕ್ಕೆ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ನಗರ ಠಾಣೆಗೆ ದೂರು ನೀಡಿದ ಕಾಂಗ್ರೆಸ್

ಅಕ್ಟೋಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.