ಭಾಗಮಂಡಲ, NEWS DESK ಅ. 28: ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಂಡರ್-14 ವಿಭಾಗದಲ್ಲಿ ದಿಗಂತ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರೆ, ಆಶಿತಾ 80 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದರು.
ಅಂಡರ್-17 ವಿಭಾಗದಲ್ಲಿ ಕೀರ್ತನ 400 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರು. ಲಿವೀನ್ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದರೆ, ದೀಕ್ಷಿತ್ 400 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಲೋಕೇಶ್, ನಿಲಯ ಪಾಲಕರಾದ ದೀಪಕ್ ಕೆ.ಕೆ. ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಪವನ್ ಸಾಗರ್ ಕೆ.ಪಿ. ಹರ್ಷ ವ್ಯಕ್ತಪಡಿಸಿದ್ದಾರೆ.

















