Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ 191ನೇ ಮಹಾ ಆರತಿ ಕಾರ್ಯಕ್ರಮ; ಕಾವೇರಿ ನದಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸದಾಶಿವ ಸ್ವಾಮೀಜಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ 191ನೇ ಮಹಾ ಆರತಿ ಕಾರ್ಯಕ್ರಮ; ಕಾವೇರಿ ನದಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸದಾಶಿವ ಸ್ವಾಮೀಜಿ

ಅಕ್ಟೋಬರ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ, NEWS DESK ಅ. 28: ಸ್ವಚ್ಛ ಕಾವೇರಿಗಾಗಿ ನಡೆಯುತ್ತಿರುವ ತಲಕಾವೇರಿ–ಪೂಂಪುಹಾರ್ ಕಾವೇರಿ ಜಾಗೃತಿ ರಥಯಾತ್ರೆಯ ಅಖಿಲ ಭಾರತ ಸಾಧು-ಸಂತರ ತಂಡವು ಕುಶಾಲನಗರದಲ್ಲಿ ಹುಣ್ಣಿಮೆಯ ಅಂಗವಾಗಿ ನಡೆದ 191ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತು. ಬಳಿಕ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಆಶಯದೊಂದಿಗೆ ಕುಶಾಲನಗರ–ಕೊಪ್ಪ ಗಡಿಭಾಗದ ಕಾವೇರಿ ಉದ್ಯಾನವನದಲ್ಲಿ ಆಯೋಜಿಸಿದ್ದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಬೆಳದಿಂಗಳ ಊಟ ಕಾರ್ಯಕ್ರಮದಲ್ಲಿ ಭಾಗವಹಿಸಿತು.

ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಕಾವೇರಿ ಆರತಿ ಕ್ಷೇತ್ರದಲ್ಲಿ ಮಹಾ ಆರತಿ ಕಾರ್ಯಕ್ರಮ ನಡೆಯಿತು. ಕಾವೇರಿ ಮಾತೆಗೆ ಅಭಿಷೇಕ, ಅರ್ಚನೆ, ಕುಶಾಲನಗರ ಸಮಸ್ತ ಮಹಿಳಾ ಭಜನಾ ಮಂಡಳಿಯಿಂದ ಭಜನೆ ಹಾಗೂ ಲಲಿತಾ ಸಹಸ್ರನಾಮ ಪಠಣ ಭಕ್ತಿಭಾವದಿಂದ ಜರುಗಿದವು.

ಕಾವೇರಿ ಜಾಗೃತಿ ರಥದಲ್ಲಿ ಪವಿತ್ರ ತೀರ್ಥಕಳಶಗಳೊಂದಿಗೆ ತಲಕಾವೇರಿ ಕ್ಷೇತ್ರದಿಂದ ಆಗಮಿಸಿದ ಕಾವೇರಿ ಮಾತೆಯ ಪ್ರತಿಮೆಗೆ ಅಷ್ಟಾಭಿಷೇಕ ನೆರವೇರಿಸಿದ ಬಳಿಕ ಕಾವೇರಿ ನದಿಗೆ ಮಹಾ ಆರತಿ ಬೆಳಗಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಸದಾಶಿವ ಸ್ವಾಮೀಜಿ, ಪ್ರತಿಯೊಬ್ಬರೂ ನದಿ, ಜಲಮೂಲಗಳು ಹಾಗೂ ಪ್ರಕೃತಿಯ ಆರಾಧನೆ ಮತ್ತು ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ನೀರು ಮಾನವ ಜೀವನದ ಅವಿಭಾಜ್ಯ ಅಂಗವಾಗಿದ್ದು, ನೀರಿಲ್ಲದೆ ಬದುಕು ಅಸಾಧ್ಯ. ಆದ್ದರಿಂದ ನದಿ ಮೂಲಗಳು ಬತ್ತದಂತೆ ಎಚ್ಚರ ವಹಿಸಬೇಕು ಹಾಗೂ ಯಾವುದೇ ಸಂದರ್ಭದಲ್ಲಿಯೂ ಜಲಮೂಲಗಳು ಕಲುಷಿತಗೊಳ್ಳದಂತೆ ಜಾಗೃತರಾಗಿರಬೇಕು ಎಂದು ಹೇಳಿದರು.

ಕಳೆದ 16 ವರ್ಷಗಳಿಂದ ಪ್ರತಿ ಹುಣ್ಣಿಮೆಯಂದು ಕಾವೇರಿ ನದಿಗೆ ಮಹಾ ಆರತಿ ಬೆಳಗುವ ಮೂಲಕ ಕಾವೇರಿ ಮಹಾ ಆರತಿ ಬಳಗ ಶ್ರೇಷ್ಠ ಕಾರ್ಯ ಮಾಡುತ್ತಿದೆ. ನದಿ ಮತ್ತು ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅವರು ತಿಳಿಸಿದರು.

ಪ್ರಧಾನ ಅರ್ಚಕ ಶ್ರೀ ಕೃಷ್ಣಮೂರ್ತಿ ಭಟ್ ಅವರ ನೇತೃತ್ವದಲ್ಲಿ ಅಭಿಷೇಕ ಹಾಗೂ ಅಷ್ಟೋತ್ತರ ಪೂಜೆ ನೆರವೇರಿದ ಬಳಿಕ ಆರತಿ ಕಾರ್ಯಕ್ರಮ ನಡೆಯಿತು. ಮಹಿಳಾ ಭಜನಾ ಮಂಡಳಿಯ ಸದಸ್ಯರು ನದಿ ತಟದಲ್ಲಿ ಭಜನೆ ಹಾಗೂ ಲಲಿತಾ ಸಹಸ್ರನಾಮ ಪಠಣ ಮಾಡಿದರು.

ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಅವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್, ಹರಿದ್ವಾರದ ಅಖಂಡ ಪರಂಧಾಮ ಕ್ಷೇತ್ರದ ಸ್ವಾಮಿ ಅನಂತಾನಂದ ಗಿರಿ, ಅಖಿಲ ಭಾರತ ಸನ್ಯಾಸಿಗಳ ಸಂಘದ ಕಾರ್ಯಕ್ರಮ ಸಂಯೋಜಕ ಸ್ವಾಮಿ ಬಾಲ ರಘುನಾಥನಂದ, ಶಿವರಾಮಾನಂದ ಸ್ವಾಮೀಜಿ, ಖ್ಯಾತ ಪಾರಂಪರಿಕ ವೈದ್ಯರು ಹಾಗೂ ನಮಾಮಿ ಕಾವೇರಿಯ ಗೌರವ ಸಲಹೆಗಾರರಾದ ಸುಮನಾ ಮಳಲಗದ್ದೆ, ಹಾಸನ ಜಿಲ್ಲೆಯ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್. ಕುಮಾರಸ್ವಾಮಿ, ಎಚ್.ವಿ. ಶಿವಪ್ಪ, ರಿವರ್ ಸೇವಾ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮಂಡೆಪಂಡ ಬೋಸ್ ಮೊಣ್ಣಪ್ಪ, ಚೈತನ್ಯ, ಧರಣಿ, ರಾಮನಾಥಪುರ ಆರತಿ ಬಳಗದ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಜಿಲ್ಲಾಧ್ಯಕ್ಷ ಕೊಡಗನ ಹರ್ಷ, ಬಿ.ಜೆ. ಅಣ್ಣಯ್ಯ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಹಾಗೂ ನಮಾಮಿ ಕಾವೇರಿ ಜಿಲ್ಲಾ ಸಂಚಾಲಕ ವಿಠಲ ಸಾಲಿಯಾನ್, ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಮೇಲ್ವಿಚಾರಕ ಸುಧೀರ್, ಆರತಿ ಬಳಗದ ಪ್ರಮುಖರಾದ ಮೋಹನ್ ಪ್ರಸಾದ್ ಮತ್ತು ಶೋಭಾ ಮೋಹನ್ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು, ಟ್ರಸ್ಟ್ ಸದಸ್ಯರು, ನಮಾಮಿ ಕಾವೇರಿ ಸದಸ್ಯರು, ಕುಶಾಲನಗರ ಸಮಸ್ತ ಮಹಿಳಾ ಭಜನಾ ಮಂಡಳಿಯ ಸದಸ್ಯರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಪ್ರಮುಖರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಹುಣ್ಣಿಮೆಯ ಅಂಗವಾಗಿ ಕುಶಾಲನಗರ ಗಡಿಭಾಗದ ಕೊಪ್ಪದಲ್ಲಿರುವ ಕಾವೇರಿ ಪ್ರತಿಮೆಗೆ ಭಾರವಿ ಕನ್ನಡ ಸಂಘದ ಆಶ್ರಯದಲ್ಲಿ ಅಭಿಷೇಕ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಭಕ್ತಾದಿಗಳಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು.

ಸಂಘದ ಪ್ರಮುಖರಾದ ಬಬೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್, ರವೀಂದ್ರ ಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಬೇಟೆಗೆ ಯತ್ನ: 8 ಆರೋಪಿಗಳ ಬಂಧನ, ಓರ್ವ ಪರಾರಿ

ಅಕ್ಟೋಬರ್ 28, 2026

ಅಹಿಂದ ಬಳಗ ಕೊಡಗು ಜಿಲ್ಲೆಗೆ ನೂತನ ಪದಾಧಿಕಾರಿಗಳ ನೇಮಕ

ಅಕ್ಟೋಬರ್ 28, 2026

ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ‘ಪತ್ತಾಲೋಧಿ’ ಆರಾಧನೋತ್ಸವ ಸಂಪನ್ನ

ಅಕ್ಟೋಬರ್ 28, 2026

ಕುಶಾಲನಗರದಲ್ಲಿ 191ನೇ ಮಹಾ ಆರತಿ ಕಾರ್ಯಕ್ರಮ; ಕಾವೇರಿ ನದಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸದಾಶಿವ ಸ್ವಾಮೀಜಿ

ಅಕ್ಟೋಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಅ. 28: ಸ್ವಚ್ಛ ಕಾವೇರಿಗಾಗಿ ನಡೆಯುತ್ತಿರುವ ತಲಕಾವೇರಿ–ಪೂಂಪುಹಾರ್ ಕಾವೇರಿ ಜಾಗೃತಿ ರಥಯಾತ್ರೆಯ ಅಖಿಲ ಭಾರತ ಸಾಧು-ಸಂತರ…

ಅಹಿಂದ ಬಳಗ ಕೊಡಗು ಜಿಲ್ಲೆಗೆ ನೂತನ ಪದಾಧಿಕಾರಿಗಳ ನೇಮಕ

ಅಕ್ಟೋಬರ್ 28, 2026

ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ‘ಪತ್ತಾಲೋಧಿ’ ಆರಾಧನೋತ್ಸವ ಸಂಪನ್ನ

ಅಕ್ಟೋಬರ್ 28, 2026

ಕೂರ್ಗ್ ಹೋಂಸ್ಟೇಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ; ಪ್ರವಾಸೋದ್ಯಮದ ಅಭಿವೃದ್ಧಿಗೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ: ಜಿಲ್ಲಾಧಿಕಾರಿ ಸೋಮಶೇಖರ್ ಭರವಸೆ

ಅಕ್ಟೋಬರ್ 28, 2026

ಅಥ್ಲೆಟಿಕ್ಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಅಕ್ಟೋಬರ್ 28, 2026

ನ. 8ರಂದು ಕೊಡಗು ಗೌಡ ಮಾಜಿ ಯೋಧರ ಒಕ್ಕೂಟದ 16ನೇ ವರ್ಷದ ವಾರ್ಷಿಕ ಸಂತೋಷ ಕೂಟ

ಅಕ್ಟೋಬರ್ 28, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ

ಅಕ್ಟೋಬರ್ 28, 2026

ಡ್ರಗ್ ವ್ಯಸನದ ವಿರುದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಿ : ಅನಿಲ್ ಹೆಚ್.ಟಿ.

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.