Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸೋಮಶೇಖರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸೋಮಶೇಖರ್

ಅಕ್ಟೋಬರ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, ಅ.28 NEWS DESK : ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳು ಹಾಗೂ ಪೌರ ಕಾರ್ಮಿಕರ ಆರೋಗ್ಯ ತಪಾಸಣೆ, ಗುಣಮಟ್ಟದ ಸುರಕ್ಷತಾ ಸೌಲಭ್ಯ ಹಾಗೂ ಸರ್ಕಾರದ ಸೌಲಭ್ಯಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಫಾಯಿ ಕರ್ಮಚಾರಿಗಳ ಹಾಗೂ ಮ್ಯಾನುವಲ್ ಸ್ಕ್ಯಾವೆಂಜರ್ಸ್ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ವ್ಯಕ್ತಿಗಳನ್ನು ನೇರವಾಗಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‍ಗಳಿಗೆ ಇಳಿಸಬಾರದು. ಪೌರಕಾರ್ಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ಪ್ರತಿದಿನದ ಕೆಲಸದ ವೇಳೆ ಧರಿಸಲು ಗುಣಮಟ್ಟದ ರಕ್ಷಣಾ ಪರಿಕರಗಳು, ಗ್ಲೌಸ್, ಬೂಟ್‍ಗಳು ಮತ್ತು ಮಾಸ್ಕ್‍ಗಳನ್ನು ಕಡ್ಡಾಯವಾಗಿ ವಿತರಿಸಬೇಕು. ಇದರೊಂದಿಗೆ ಎಲ್ಲಾ ಕರ್ಮಚಾರಿಗಳಿಗೆ ಪ್ರತಿ ಆರು ತಿಂಗಳಿಗೊಮ್ಮೆ ತಪ್ಪದೆ ಉಚಿತ ಹಾಗೂ ಸಂಪೂರ್ಣ ವೈದ್ಯಕೀಯ ಆರೋಗ್ಯ ತಪಾಸಣೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗುತ್ತಿಗೆ ಆಧಾರದ ಮೇಲೆ ಹಾಗೂ ನೇರವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬ ಪೌರಕಾರ್ಮಿಕರಿಗೂ ಸರ್ಕಾರದ ನಿಯಮಾನುಸಾರ ಇ.ಎಸ್.ಐ. ಮತ್ತು ಭವಿಷ್ಯ ನಿಧಿ (ಪಿ.ಎಫ್.) ಸೌಲಭ್ಯಗಳು ದೊರೆಯುವಂತಾಗಬೇಕು ಎಂದರು. ನಿಗಮದ ವತಿಯಿಂದ ಲಭ್ಯವಿರುವ ಸ್ವಯಂ ಉದ್ಯೋಗ ಸಾಲ ಸೌಲಭ್ಯಗಳು, ವಸತಿ ಮತ್ತು ನಿವೇಶನ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಇಲಾಖಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಕರ್ನಾಟಕ ರಾಜ್ಯ ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು ಅವರು ಮಾತನಾಡಿ, ಗೋಣಿಕೊಪ್ಪ ಗ್ರಾ.ಪಂ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ವಾಸ ಇರುವ ಮನೆ ಪಕ್ಕದಲ್ಲಿ ಮಾಂಸದ ಮಳಿಗೆ ಹಾಗೂ ಸೆಪ್ಟಿಕ್ ಟ್ಯಾಂಕ್‍ಗಳಿದ್ದು, ಇವುಗಳನ್ನು ತೆರವುಗೊಳಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ, ಪೌರ ಕಾರ್ಮಿಕರು ವಾಸವಿರುವ ಮನೆ ಪಕ್ಕದಲ್ಲಿ ಇರುವ ಸೆಪ್ಟಿಕ್ ಟ್ಯಾಂಕ್ ತೆರವುಗೊಳಿಸಿ ಪೌರಕಾರ್ಮಿಕರ ಸಮಸ್ಯೆ ಇತ್ಯರ್ಥಗೊಳಿಸಿ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಪತ್ರ ರವಾನಿಸಿ ಕ್ರಮ ಕೈಗೊಂಡಿರುವುದಾಗಿ ಅಲ್ಲಿನ ತಾ.ಪಂ.ಇಒ ಅವರು ಮಾಹಿತಿ ನೀಡಿದ್ದಾರೆ. ಹಾಗೆಯೇ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, ಎರಡು ಪರ್ಯಾಯ ಜಾಗ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಡಿ.ಆರ್.ರಾಜು ಅವರು ಮಾತನಾಡಿ, ಆ ಜಾಗದಲ್ಲಿ 26 ಕುಟುಂಬಗಳಿದ್ದು, ಬೇರೆಡೆ ತೆರಳಲು ಕಷ್ಟ ಸಾಧ್ಯ. ಅಲ್ಲದೇ ಅಧಿಕಾರಿಗಳು ಸೂಚಿಸಿರುವ ಜಾಗ ಸೂಕ್ತ ಇಲ್ಲದೆ ಇರುವುದರಿಂದ ಹಾಲಿ ಇರುವ ಕುಟುಂಬಗಳಿಗೆ ಹಕ್ಕು ಪತ್ರ ನೀಡುವಂತೆ ಮನವಿ ಮಾಡಿದರು.
ಜಿಲ್ಲಾಧಿಕಾರಿ ಅವರು ಮಾತನಾಡಿ, ಸೆಪ್ಟಿಕ್ ಟ್ಯಾಂಕ್ ತೆರವುಗೊಳಿಸಲು ಕ್ರಮಕೈಗೊಂಡು, ಯೋಗ್ಯವಾದ ಪರ್ಯಾಯ ಜಾಗದ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು. ಸಮಿತಿ ಸದಸ್ಯರಾದ ರಂಗಸ್ವಾಮಿ ಅವರು ಸಫಾಯಿ ಕರ್ಮಚಾರಿಗಳು ದಿನಗೂಲಿಯಲ್ಲಿ ಕೆಲಸ ಮಾಡುತ್ತಿದ್ದು, ಇವರಿಗೆ ಕಾರ್ಮಿಕ ಇಲಾಖೆಯ ನಿಯಮದಂತೆ ವೇತನ ನೀಡುವಂತಾಗಬೇಕು. ಜೊತೆಗೆ ಪಿಎಫ್, ಇಎಸ್‍ಐ ಸೌಲಭ್ಯ ಒದಗಿಸುವಂತಾಗಬೇಕು ಎಂದು ಕೋರಿದರು. ಸುಂಟಿಕೊಪ್ಪ ಗ್ರಾ.ಪಂ.ವ್ಯಾಪ್ತಿಯ ಉಲುಗುಲಿ ಗ್ರಾಮದಲ್ಲಿ ವಾಸವಿರುವ ಬಡ ಕುಟುಂಬಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕಿದೆ ಎಂದು ಕೋರಿದರು. ಅಲ್ಲದೇ ಸರ್ಕಾರ ಯೋಜನೆಯನ್ನು ಪೌರಕಾರ್ಮಿಕರಿಗೆ ಸಮರ್ಪಕವಾಗಿ ತಲುಪಿಸುವಂತೆ ತಿಳಿಸಿದರು. ಡಿ.ಆರ್.ರಾಜು ಅವರು ಮಾತನಾಡಿ, ಗೋಣಿಕೊಪ್ಪ ಗ್ರಾ.ಪಂ.ವ್ಯಾಪ್ತಿಯಲ್ಲಿ 28 ಪೌರಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಸರ್ಕಾರಿ ಆದೇಶದನ್ವಯ ಮೂರು ಜನ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಅವಕಾಶವಿದೆ. ಆದರೆ ಪೌರಕಾರ್ಮಿಕರ್ನು ಖಾಯಂಗೊಳಿಸಲು ಇಲಾಖಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ, ಅರ್ಹ ಪೌರಕಾರ್ಮಿಕರನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ, ನವೆಂಬರ್ 7 ರಂದು ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಂಬಂಧಿಸಿದವರು ಅಗತ್ಯ ಮಾಹಿತಿ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಗೋಣಿಕೊಪ್ಪ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ, ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್, ಗೋಣಿಕೊಪ್ಪ ಪೌರಕಾರ್ಮಿಕ ಕಾಲೋನಿಯ ವಿಜಯ್ ಕುಮಾರ್, ಪೊನ್ನಂಪೇಟೆಯ ಪರಮೇಶ್, ಗುಮ್ಮನಕೊಲ್ಲಿಯ ರಾಜೇಶ್ವರಿ, ಪೆÇಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಸಾಮಾಜಿಕ ಅಭಿವೃದ್ಧಿ ತಜ್ಞರು ಮತ್ತು ಸಮಿತಿಯ ಸದಸ್ಯರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.28 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 71 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನವೆಂಬರ್, 01…

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ವಿರಾಜಪೇಟೆಯಲ್ಲಿ ಅ.31 ರಂದು ಆರ್‌ಎಸ್‌ಎಸ್‌ನಿಂದ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 28, 2026

ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸೋಮಶೇಖರ್

ಅಕ್ಟೋಬರ್ 28, 2026

ಡಾ. ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಗೆ ಆಡಳಿತಾಧಿಕಾರಿ ನೇಮಕ

ಅಕ್ಟೋಬರ್ 28, 2026

ಅ.29ರಂದು ನಗರಸಭೆ ಬಿಜೆಪಿ ಆಡಳಿತದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಅಕ್ಟೋಬರ್ 28, 2026

ತಲಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಬೇಟೆಗೆ ಯತ್ನ: 8 ಆರೋಪಿಗಳ ಬಂಧನ, ಓರ್ವ ಪರಾರಿ

ಅಕ್ಟೋಬರ್ 28, 2026

ಕುಶಾಲನಗರದಲ್ಲಿ 191ನೇ ಮಹಾ ಆರತಿ ಕಾರ್ಯಕ್ರಮ; ಕಾವೇರಿ ನದಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸದಾಶಿವ ಸ್ವಾಮೀಜಿ

ಅಕ್ಟೋಬರ್ 28, 2026

ಅಹಿಂದ ಬಳಗ ಕೊಡಗು ಜಿಲ್ಲೆಗೆ ನೂತನ ಪದಾಧಿಕಾರಿಗಳ ನೇಮಕ

ಅಕ್ಟೋಬರ್ 28, 2026

ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ‘ಪತ್ತಾಲೋಧಿ’ ಆರಾಧನೋತ್ಸವ ಸಂಪನ್ನ

ಅಕ್ಟೋಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.