ಮಡಿಕೇರಿ ಅ.28 NEWS DESK : “ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯ ಶ್ರೀಮಂಗಲ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಕಮ್ಯುನಿಟಿ ಹೆಲ್ತ್ ಆಫಿಸರ್ (ಸಿಎಚ್ಒ) ಹುದ್ದೆ ಮತ್ತು ವಿರಾಜಪೇಟೆ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಖಾಲಿ ಇರುವ ಮಲ್ಟಿಪರ್ಪಸ್ ವರ್ಕರ್ ಹುದ್ದೆಯನ್ನು ಭರ್ತಿ ಮಾಡುವ ಕುರಿತು ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ನವೆಂಬರ್, 07 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಮೂಲ ಅಂಕಪಟ್ಟಿ ಹಾಗೂ ಇತರೆ ಮೂಲ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಆಯುಷ್ ಅಧಿಕಾರಿ ಅವರು ತಿಳಿಸಿದ್ದಾರೆ.

















