ಗೋಣಿಕೊಪ್ಪ, NEWS DESK ಅ.29: ಕೊಡಗು ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಹಾಗೂ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಂಯುಕ್ತ ಆಶ್ರಯದಲ್ಲಿ ನಡೆದ 2026–27ನೇ ಸಾಲಿನ ವಿರಾಜಪೇಟೆ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಅರವತ್ತೊಕ್ಲುವಿನ ಸರ್ವದೈವತ ಪ್ರೌಢಶಾಲೆ ಗಮನಾರ್ಹ ಸಾಧನೆ ಮಾಡಿದೆ.
ಟೇಬಲ್ ಟೆನಿಸ್ನಲ್ಲಿ ಬಾಲಕ ಮತ್ತು ಬಾಲಕಿಯರ ತಂಡಗಳು ಹಾಗೂ ಬಾಲ್ ಬ್ಯಾಡ್ಮಿಂಟನ್ನಲ್ಲಿ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿವೆ. ಬಾಲಕರ ಥ್ರೋಬಾಲ್ನಲ್ಲಿ ದ್ವಿತೀಯ ಸ್ಥಾನ ಪಡೆದರೆ, ಬಾಲಕಿಯರ ಥ್ರೋಬಾಲ್ ಮತ್ತು ವಾಲಿಬಾಲ್ ತಂಡಗಳು ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿವೆ.
ಕ್ರೀಡಾಕೂಟದಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಸರ್ವದೈವತ ಪ್ರೌಢಶಾಲೆ ಸತತ ಮೂರನೇ ಬಾರಿಗೆ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಶಾಲೆಯ ಕ್ರೀಡಾ ತಂಡಗಳು ಹ್ಯಾಟ್ರಿಕ್ ಸಾಧನೆ ದಾಖಲಿಸಿವೆ.
ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಗೌಡ ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

















