Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನ. 22ರಂದು ಮಡಿಕೇರಿಯಲ್ಲಿ ‘ಕನ್ನಡ ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮ; ಮಕ್ಕಳು, ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳ ಆಯೋಜನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನ. 22ರಂದು ಮಡಿಕೇರಿಯಲ್ಲಿ ‘ಕನ್ನಡ ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮ; ಮಕ್ಕಳು, ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳ ಆಯೋಜನೆ

ಅಕ್ಟೋಬರ್ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ. 29: ಸಮರ್ಥ ಕನ್ನಡಿಗರು (ನೋಂ.) ಕೊಡಗು ಜಿಲ್ಲಾ ಘಟಕದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ನವೆಂಬರ್ 22ರಂದು ಮಡಿಕೇರಿ ನಗರದ ಓಂಕಾರ್ ಸದನದಲ್ಲಿ ‘ಕನ್ನಡ ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

‘ನಿಮ್ಮ ಪ್ರತಿಭೆ – ನಮ್ಮ ವೇದಿಕೆ’ ಎಂಬ ಆಶಯದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಗಳ ವಿವರಗಳು ಇಂತಿವೆ:

1. ಛದ್ಮವೇಷ ಸ್ಪರ್ಧೆ: 1ರಿಂದ 3 ವರ್ಷದ ಹಾಗೂ 3ರಿಂದ 6 ವರ್ಷದ ಮಕ್ಕಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ಆಯೋಜಿಸಲಾಗಿದೆ.

2. ಜಾನಪದ ನೃತ್ಯ ಸ್ಪರ್ಧೆ: ಕಿರಿಯ ಪ್ರಾಥಮಿಕ (1ರಿಂದ 4ನೇ ತರಗತಿ), ಹಿರಿಯ ಪ್ರಾಥಮಿಕ (5ರಿಂದ 7ನೇ ತರಗತಿ) ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆ ನಡೆಯಲಿದೆ. ಪ್ರದರ್ಶನಕ್ಕೆ ಮೂರು ನಿಮಿಷಗಳ ಕಾಲಾವಕಾಶವಿದ್ದು, ಪ್ರತಿ ತಂಡದಲ್ಲಿ ಕನಿಷ್ಠ 6 ಹಾಗೂ ಗರಿಷ್ಠ 10 ಸ್ಪರ್ಧಿಗಳು ಭಾಗವಹಿಸಬಹುದು.

3. ಕಾಲೇಜು ವಿದ್ಯಾರ್ಥಿಗಳ ಸಮೂಹ ಗಾಯನ ಸ್ಪರ್ಧೆ: ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಸ್ಪರ್ಧೆ ಆಯೋಜಿಸಲಾಗಿದೆ. ಕನ್ನಡ ನಾಡು-ನುಡಿಗೆ ಸಂಬಂಧಿಸಿದ ಗೀತೆಗಳನ್ನು ಹಾಡಬೇಕು. ಪ್ರದರ್ಶನದ ಅವಧಿ ಮೂರು ನಿಮಿಷಗಳಾಗಿದ್ದು, ಪ್ರತಿ ತಂಡದಲ್ಲಿ ಕನಿಷ್ಠ 4 ಹಾಗೂ ಗರಿಷ್ಠ 6 ವಿದ್ಯಾರ್ಥಿಗಳು ಇರಬೇಕು. ಕರೋಕೆ ಬಳಸಲು ಅವಕಾಶವಿರುವುದಿಲ್ಲ.

4. ಮಹಿಳೆಯರ ಸಮೂಹ ಗಾಯನ ಸ್ಪರ್ಧೆ: ಮಹಿಳೆಯರಿಗೆ ಭಕ್ತಿಗೀತೆ ಅಥವಾ ಜಾನಪದ ಗೀತೆ ಹಾಡುವ ಸ್ಪರ್ಧೆ ನಡೆಯಲಿದೆ. ಪ್ರದರ್ಶನಕ್ಕೆ ಮೂರು ನಿಮಿಷಗಳ ಕಾಲಾವಕಾಶವಿದ್ದು, ಪ್ರತಿ ತಂಡದಲ್ಲಿ ಕನಿಷ್ಠ 6 ಹಾಗೂ ಗರಿಷ್ಠ 8 ಸ್ಪರ್ಧಿಗಳು ಭಾಗವಹಿಸಬಹುದು.

5. ಚಿತ್ರಕಲಾ ಸ್ಪರ್ಧೆ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವೈಯಕ್ತಿಕ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ. ಒಂದು ಗಂಟೆಯ ಕಾಲಾವಕಾಶ ನೀಡಲಾಗುವುದು. ಚಿತ್ರ ಬಿಡಿಸಲು ಅಗತ್ಯವಿರುವ ಹಾಳೆಯನ್ನು ಹೊರತುಪಡಿಸಿ ಉಳಿದ ಪರಿಕರಗಳನ್ನು ಸ್ಪರ್ಧಾರ್ಥಿಗಳೇ ತರಬೇಕು.

ಸ್ಪರ್ಧೆಗಳಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಿಕೊಳ್ಳಲು ನವೆಂಬರ್ 15 ಕೊನೆಯ ದಿನಾಂಕವಾಗಿದೆ. ಆಸಕ್ತರು ಕೆಳಕಂಡ ಸಂಪರ್ಕ ಸಂಖ್ಯೆಗಳ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ಸಮರ್ಥ ಕನ್ನಡಿಗರು ಸಂಸ್ಥೆಯ ಕೊಡಗು ಜಿಲ್ಲಾ ಸಂಚಾಲಕಿ ಜಯಲಕ್ಷ್ಮಿ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೋಂದಣಿಗಾಗಿ ಸಂಪರ್ಕಿಸಬೇಕಾದವರು:

  • ಛದ್ಮವೇಷ ಸ್ಪರ್ಧೆ: ಅನಿತಾ ಸಿ. – 9632653739, ಪುಷ್ಪಾ ಬಡಿಗೇರ್ – 7795916157
  • ಚಿತ್ರಕಲಾ ಸ್ಪರ್ಧೆ: ಶ್ರೀಲತಾ ಬಿ. – 9480524681, ಪವಿತ್ರಾ ಸಂತೋಷ್ – 9686323326
  • ಕಾಲೇಜು ವಿದ್ಯಾರ್ಥಿಗಳ ಸಮೂಹ ಗಾಯನ: ಸೌಮ್ಯಾ ಸಂತೋಷ್ – 8762574584, ಅಂಬಿಕಾ – 8050144266
  • ಮಹಿಳೆಯರ ಸಮೂಹ ಗಾಯನ: ಶಾಂತಿ ಅಚ್ಚಯ್ಯ – 9902651146, ಸರಿತಾ ಅಯ್ಯಪ್ಪ – 9481483457
  • ಜಾನಪದ ನೃತ್ಯ ಸ್ಪರ್ಧೆ: ಜಯಲಕ್ಷ್ಮಿ ಕೆ. – 9663119670, ದಿವ್ಯಾ ಸತೀಶ್ – 9538349058

Follow us Follow us
Share. WhatsApp Facebook Twitter Email Telegram Copy Link

Related Posts

ಕೊಡಗು ಜಿಲ್ಲೆಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅಧಿಕಾರ ಸ್ವೀಕಾರ

ಅಕ್ಟೋಬರ್ 29, 2026

ಭರತನಾಟ್ಯ ಹಿರಿಯರ ವಿಭಾಗದ ಪರೀಕ್ಷೆಯಲ್ಲಿ ತುಶಾಲಿಗೆ ಶೇ.90 ಅಂಕ

ಅಕ್ಟೋಬರ್ 29, 2026

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಕಾಂಗ್ರೆಸ್‌ಗೆ ಅಪನಂಬಿಕೆ: ಸಂಸದ ಬ್ರಿಜೇಶ್ ಚೌಟ ಟೀಕೆ

ಅಕ್ಟೋಬರ್ 29, 2026

ಭರತನಾಟ್ಯ ಹಿರಿಯರ ವಿಭಾಗದ ಪರೀಕ್ಷೆಯಲ್ಲಿ ತುಶಾಲಿಗೆ ಶೇ.90 ಅಂಕ

ಅಕ್ಟೋಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.29: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ವತಿಯಿಂದ…

ನ. 22ರಂದು ಮಡಿಕೇರಿಯಲ್ಲಿ ‘ಕನ್ನಡ ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮ; ಮಕ್ಕಳು, ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳ ಆಯೋಜನೆ

ಅಕ್ಟೋಬರ್ 29, 2026

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಕಾಂಗ್ರೆಸ್‌ಗೆ ಅಪನಂಬಿಕೆ: ಸಂಸದ ಬ್ರಿಜೇಶ್ ಚೌಟ ಟೀಕೆ

ಅಕ್ಟೋಬರ್ 29, 2026

ಕ್ರೀಡೆಯಲ್ಲಿ ಸರ್ವದೈವತ ಪ್ರೌಢಶಾಲೆಗೆ ಹ್ಯಾಟ್ರಿಕ್ ಸಮಗ್ರ ಪ್ರಶಸ್ತಿಯ ಗರಿ

ಅಕ್ಟೋಬರ್ 29, 2026

ಬಿಜೆಪಿ ಆಡಳಿತದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ : ಮಡಿಕೇರಿಗೆ ಅಂಟಿದ್ದ ಶಾಪ ವಿಮೋಚನೆಯಾಗಿದೆ : ಮೂಡ ಅಧ್ಯಕ್ಷ ಬಿ.ವೈ.ರಾಜೇಶ್ ಅಸಮಾಧಾನ

ಅಕ್ಟೋಬರ್ 29, 2026

ಅ.31 ರಂದು ಮಾಯಮುಡಿಯಲ್ಲಿ ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ : ನ.1 ರಂದು ಸಮಾರೋಪ

ಅಕ್ಟೋಬರ್ 29, 2026

ನ.2ರಂದು ಪೊನ್ನಂಪೇಟೆಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 29, 2026

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.