ಮಡಿಕೇರಿ, NEWS DESK ಅ.29: ಕೊಡಗು ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಕರ್ನಾಟಕ ನಾಗರಿಕ ಸೇವೆಯ 2014ನೇ ಬ್ಯಾಚ್ನ ಅಧಿಕಾರಿಯಾಗಿರುವ ಜಯಲಕ್ಷ್ಮಿ ರಾಯಕೋಡ ಅವರು ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತ್ನಲ್ಲಿ ಉಪ ಕಾರ್ಯದರ್ಶಿಯಾಗಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

















