Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ.30: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಕರ್ನಾಟಕದ ಐವರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಜೋಶಿಮಠದ ಹಾಥಿ ಕಣಿವೆ ಪ್ರದೇಶದ ಚೈನ್ ಗ್ರಾಮದ ಸಮೀಪ ಹೆಲಿಕಾಪ್ಟರ್ ಪತನಗೊಂಡಿದ್ದು, ಘಟನಾ ಸ್ಥಳದಲ್ಲಿ ಆರು ಮಂದಿಯ ಮೃತದೇಹಗಳು ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಟ್ರಾನ್ಸ್ ಭಾರತ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿದ್ದ VT-HCX ನೋಂದಣಿ ಸಂಖ್ಯೆಯ ಹೆಲಿಕಾಪ್ಟರ್ ಬದರಿನಾಥದಿಂದ ಡೆಹ್ರಾಡೂನ್‌ಗೆ ತೆರಳುತ್ತಿತ್ತು. ಮಧ್ಯಾಹ್ನ 1.14ರ ಸುಮಾರಿಗೆ ಜೋಶಿಮಠ ಕಣಿವೆಯ ಮೇಲೆ ಹಾರಾಟ ನಡೆಸುತ್ತಿದ್ದಾಗ ಸಂಪರ್ಕ ಕಡಿತಗೊಂಡಿರುವುದಾಗಿ ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.

ಅಪಘಾತದ ಮಾಹಿತಿ ತಿಳಿದು ಸ್ಥಳೀಯ ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆ ನಡೆಸಿದಾಗ, ಚೈನ್ ಗ್ರಾಮದ ಸಮೀಪ ಹೆಲಿಕಾಪ್ಟರ್ ಛಿದ್ರಗೊಂಡು ಬಿದ್ದಿರುವುದು ಹಾಗೂ ಆರು ಮಂದಿಯ ಮೃತದೇಹಗಳು ಪತ್ತೆಯಾಗಿವೆ. ಮೃತದೇಹಗಳನ್ನು ಸ್ಥಳದಿಂದ ರಸ್ತೆ ಮಾರ್ಗವಾಗಿ ಸಾಗಿಸಲು ರಕ್ಷಣಾ ತಂಡಗಳು ಕ್ರಮ ಕೈಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ಹೆಲಿಕಾಪ್ಟರ್ ಪೈಲಟ್ ದೆಹಲಿ ಮೂಲದ ಕ್ಯಾಪ್ಟನ್ ಹಿಮಾಂಶು ಸಬರ್ವಾಲ್ (48) ಹಾಗೂ ಕರ್ನಾಟಕದ ಪ್ರಯಾಣಿಕರಾದ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಲಂಕೆ (44), ವಿ.ಬಿ. ಶಂಕರ್‌ಗೌಡ (39), ಬಾಚಿಹಳ್ಳಿ ಗ್ರಾಮದ ಪ್ರತಾಪ್ ಗೌಡ (49), ತುಮಕೂರು ಜಿಲ್ಲೆಯ ಹುಲಿಯೂರುದುರ್ಗದ ಹೆಚ್.ಎನ್. ನಟರಾಜು (51) ಮತ್ತು ಸುಧೀರ್ ಎಂದು ಗುರುತಿಸಲಾಗಿದೆ.

ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಲಂಕೆ: ಬೆಂಗಳೂರಿನಲ್ಲಿ ವಾಸವಿದ್ದ ಅರುಣ್ ಸಾಲಂಕೆ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ವಕೀಲರಾದ ಸುಧೀರ್, ಶಂಕರ್‌ಗೌಡ ಹಾಗೂ ನಟರಾಜು ಅವರೊಂದಿಗೆ ಚಾರ್‌ಧಾಮ್ ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ.

ಹೈಕೋರ್ಟ್ ವಕೀಲ ಶಂಕರ್‌ಗೌಡ: ತುಮಕೂರು ಮೂಲದ ವಿ.ಬಿ. ಶಂಕರ್‌ಗೌಡ ಅವರು ವೃತ್ತಿಯಲ್ಲಿ ಹೈಕೋರ್ಟ್ ವಕೀಲರಾಗಿದ್ದರು. ಪತ್ನಿ ಹಾಗೂ ಮಗುವಿನೊಂದಿಗೆ ತುಮಕೂರಿನ ಸಪ್ತಗಿರಿ ಬಡಾವಣೆಯಲ್ಲಿ ವಾಸವಿದ್ದರು ಎನ್ನಲಾಗಿದೆ.

ಪ್ರತಾಪ್ ಗೌಡ: ಹಾಸನ ಜಿಲ್ಲೆಯ ಬಾಚಿಹಳ್ಳಿ ಗ್ರಾಮದ ಪ್ರತಾಪ್ ಗೌಡ ಅವರು ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದರು. ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಅವರು, ಯಸಳೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು ಎನ್ನಲಾಗಿದೆ.

ಹೆಚ್.ಎನ್. ನಟರಾಜು: ತುಮಕೂರು ಜಿಲ್ಲೆಯ ಹುಲಿಯೂರುದುರ್ಗದ ನಟರಾಜು ಅವರು ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾಗಿದ್ದರು. ಐವರು ಸ್ನೇಹಿತರೊಂದಿಗೆ ನಾಲ್ಕು ದಿನಗಳ ಹಿಂದೆ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.

ಈ ದುರಂತಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

ನ.2 ರಂದು ವಿರಾಜಪೇಟೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 30, 2026

ಚಿತ್ರಕಲಾ ಸ್ಪರ್ಧೆ : ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಅಕ್ಟೋಬರ್ 30, 2026

ನಿವೃತ್ತ ಅಂಗನವಾಡಿ ಶಿಕ್ಷಕಿಯರಿಗೆ ಆತ್ಮೀಯ ಬೀಳ್ಕೊಡುಗೆ

ಅಕ್ಟೋಬರ್ 30, 2026

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.30: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಕರ್ನಾಟಕದ ಐವರು ಸೇರಿದಂತೆ…

ಚಿತ್ರಕಲಾ ಸ್ಪರ್ಧೆ : ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಅಕ್ಟೋಬರ್ 30, 2026

ನಿವೃತ್ತ ಅಂಗನವಾಡಿ ಶಿಕ್ಷಕಿಯರಿಗೆ ಆತ್ಮೀಯ ಬೀಳ್ಕೊಡುಗೆ

ಅಕ್ಟೋಬರ್ 30, 2026

ಸ್ಥಳೀಯ ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಿ ರಫ್ತು ವಹಿವಾಟು ವಿಸ್ತರಿಸಿ : ಬಿ.ಆರ್.ಯೋಗೇಶ್

ಅಕ್ಟೋಬರ್ 30, 2026

ಯುವ ಸಂಸತ್ತು ಕಾರ್ಯಕ್ರಮ : ಯುವ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿ : ಮಂದ್ರೀರ ಮೋಹನ್ ದಾಸ್

ಅಕ್ಟೋಬರ್ 30, 2026

ರಾಜ್ಯ ಮಟ್ಟದ ಮಿಕ್ಸ್ ಕಿಕ್ ಬಾಕ್ಸಿಂಗ್‌ನಲ್ಲಿ ಮಡಿಕೇರಿಯ ಕೊಡಗು ಕಿಕ್ ಬಾಕ್ಸಿಂಗ್ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಯ ಮೊದಲ ದಿನದ ಫಲಿತಾಂಶ ಪ್ರಕಟ

ಅಕ್ಟೋಬರ್ 30, 2026

ಕಂಡಂಗಾಲ ಹಿರಿಯ ಪ್ರಾಥಮಿಕ ಶಾಲೆಗೆ ಐದು ಕಂಪ್ಯೂಟರ್‌ಗಳ ಕೊಡುಗೆ; ಜನರಲ್ ವಿಕ್ರಮ್ ತನೇಜ ಹಾಗೂ ಡಾ. ಪೊನ್ನಕಚ್ಚಿರ ವಿದ್ಯಾ ಪೂಣಚ್ಚ ದಂಪತಿಗಳಿಂದ ನೆರವು

ಅಕ್ಟೋಬರ್ 30, 2026

ಮಿಕ್ಸ್ ಬಾಕ್ಸಿಂಗ್‌ನಲ್ಲಿ ಕೃತನ್ ಹಾಗೂ ಸಂದೀಪ್‌ಗೆ ಬೆಳ್ಳಿ ಪದಕ

ಅಕ್ಟೋಬರ್ 30, 2026

ತೋಳೂರು ಶೆಟ್ಟಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಕಾರ್ಯಕ್ರಮ

ಅಕ್ಟೋಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.