Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ನ. 2 ಮತ್ತು 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 24 ತಂಡಗಳು ಭಾಗಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ನ. 2 ಮತ್ತು 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 24 ತಂಡಗಳು ಭಾಗಿ

ಅಕ್ಟೋಬರ್ 31, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ. 31: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನವೆಂಬರ್ 2 ಮತ್ತು 3ರಂದು ಮಡಿಕೇರಿಯಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಹಾಗೂ ಪೊಲೀಸ್ ಕವಾಯತು ಮೈದಾನಗಳಲ್ಲಿ ಏಕಕಾಲದಲ್ಲಿ ಲೀಗ್ ಮಾದರಿಯಲ್ಲಿ ಪಂದ್ಯಾಟ ನಡೆಯಲಿದೆ. ಕೊಡಗಿನ ಎರಡು ತಂಡಗಳು ಸೇರಿದಂತೆ ರಾಜ್ಯದ ಒಟ್ಟು 24 ತಂಡಗಳು ಭಾಗವಹಿಸಲಿವೆ ಎಂದು ತಿಳಿಸಿದರು.

ನವೆಂಬರ್ 2ರಂದು ಬೆಳಿಗ್ಗೆ 11 ಗಂಟೆಗೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಪಂದ್ಯಾವಳಿಗೆ ಚಾಲನೆ ನೀಡಲಿದ್ದು, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ, ಸಂಸದ ಯದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಅಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರ ನಾಯಕತ್ವದ ರಾಜಕಾರಣಿಗಳ ತಂಡ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ ನಾಯಕತ್ವದ ಪತ್ರಕರ್ತರ ತಂಡದ ನಡುವೆ ಪ್ರದರ್ಶನ ಪಂದ್ಯ ಏರ್ಪಡಿಸಲಾಗಿದೆ.

ನವೆಂಬರ್ 3ರಂದು ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಡಾ. ಮಂತರ್ ಗೌಡ, ಎ.ಎಸ್. ಪೊನ್ನಣ್ಣ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮೂರು ಮೈದಾನಗಳ ಐದು ಪಿಚ್‌ಗಳಲ್ಲಿ ಪಂದ್ಯಾಟ

ರಾಜ್ಯ ಸಮಿತಿ ಸದಸ್ಯೆ ಹಾಗೂ ಶಿಸ್ತು ಸಮಿತಿ ಸಂಚಾಲಕಿ ಬಿ.ಆರ್. ಸವಿತಾ ರೈ ಮಾತನಾಡಿ, ಪಂದ್ಯಾವಳಿಯನ್ನು ವ್ಯವಸ್ಥಿತವಾಗಿ ಆಯೋಜಿಸಲು ವಿವಿಧ ಉಪಸಮಿತಿಗಳು ಕಾರ್ಯನಿರ್ವಹಿಸುತ್ತಿವೆ. ಒಟ್ಟು ಮೂರು ಮೈದಾನಗಳ ಐದು ಪಿಚ್‌ಗಳಲ್ಲಿ ಪಂದ್ಯಗಳು ನಡೆಯಲಿವೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಸದಸ್ಯತ್ವ ಕಾರ್ಡ್ ಹೊಂದಿರುವವರಿಗೆ ಮಾತ್ರ ಆಟವಾಡಲು ಅವಕಾಶವಿದೆ. ಸದಸ್ಯತ್ವ ಹೊಂದಿರದ ಆಟಗಾರರನ್ನು ತಂಡದಲ್ಲಿ ಸೇರಿಸಿಕೊಂಡರೆ ಅಂತಹ ತಂಡವನ್ನೇ ಅನರ್ಹಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಶಿವಮೊಗ್ಗ, ಬಾಗಲಕೋಟೆ, ಹಾವೇರಿ, ಮಂಡ್ಯ, ಚಾಮರಾಜನಗರ, ತುಮಕೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಕೋಲಾರ, ಚಿತ್ರದುರ್ಗ, ಹಾಸನ, ರಾಮನಗರ, ಉಡುಪಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಮೈಸೂರು, ಕೊಪ್ಪಳ, ಬೀದರ್, ದಾವಣಗೆರೆ, ಗದಗ, ಬಳ್ಳಾರಿ ಹಾಗೂ ಕೊಡಗಿನ ಅರೇಬಿಕಾ ಮತ್ತು ರೋಬಸ್ಟಾ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.

ವಿಜೇತ ತಂಡಕ್ಕೆ 1 ಲಕ್ಷ ರೂ. ನಗದು ಬಹುಮಾನ

ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ಮಾತನಾಡಿ, ಪಂದ್ಯಾವಳಿಯ ವಿಜೇತ ತಂಡಕ್ಕೆ 1 ಲಕ್ಷ ರೂ., ರನ್ನರ್ ಅಪ್ ತಂಡಕ್ಕೆ 50 ಸಾವಿರ ರೂ., ಮೂರನೇ ಸ್ಥಾನ ಪಡೆಯುವ ತಂಡಕ್ಕೆ 25 ಸಾವಿರ ರೂ. ಹಾಗೂ ನಾಲ್ಕನೇ ಸ್ಥಾನ ಪಡೆಯುವ ತಂಡಕ್ಕೆ 15 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಇದರೊಂದಿಗೆ ಆಕರ್ಷಕ ಟ್ರೋಫಿಗಳನ್ನು ವಿತರಿಸಲಾಗುವುದು. ಪಂದ್ಯಾವಳಿಗೆ ಆಗಮಿಸುವ ಎಲ್ಲಾ ಪತ್ರಕರ್ತರಿಗೆ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಮೈದಾನ ಸಮಿತಿ ಸಂಚಾಲಕ ಮಂಜು ಸುವರ್ಣ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ನವೆಂಬರ್ 1ರಂದು ಕೊಡವ ಪ್ರೀಮಿಯರ್ ಲೀಗ್ ಸೀಸನ್-5 ಆಟಗಾರರ ಹರಾಜು

ಅಕ್ಟೋಬರ್ 31, 2026

ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಸೀಸನ್-2ಕ್ಕೆ ಅದ್ದೂರಿ ಚಾಲನೆ; ಕ್ರೀಡೆ ಸಮಾಜವನ್ನು ಒಗ್ಗೂಡಿಸುವ ಸುಂದರ ವೇದಿಕೆಯಾಗಿದೆ: ಸಿ.ಎಸ್. ಅರುಣ್ ಮಾಚಯ್ಯ

ಅಕ್ಟೋಬರ್ 31, 2026

ಮಡಿಕೇರಿಯಲ್ಲಿ ಕಾಂಗ್ರೆಸ್ ನಿಂದ ಇಂದಿರಾ ಗಾಂಧಿ 42ನೇ ಪುಣ್ಯಸ್ಮರಣೆ

ಅಕ್ಟೋಬರ್ 31, 2026

ಮಡಿಕೇರಿಯಲ್ಲಿ ನವೆಂಬರ್ 1ರಂದು ಕೊಡವ ಪ್ರೀಮಿಯರ್ ಲೀಗ್ ಸೀಸನ್-5 ಆಟಗಾರರ ಹರಾಜು

ಅಕ್ಟೋಬರ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.31: ಕೊಡವ ಪ್ರೀಮಿಯರ್ ಲೀಗ್ (ಕೆಪಿಎಲ್) ಸೀಸನ್-5 ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಿಸಿದಂತೆ ಆಟಗಾರರ ಹರಾಜು ಪ್ರಕ್ರಿಯೆಯು…

ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಸೀಸನ್-2ಕ್ಕೆ ಅದ್ದೂರಿ ಚಾಲನೆ; ಕ್ರೀಡೆ ಸಮಾಜವನ್ನು ಒಗ್ಗೂಡಿಸುವ ಸುಂದರ ವೇದಿಕೆಯಾಗಿದೆ: ಸಿ.ಎಸ್. ಅರುಣ್ ಮಾಚಯ್ಯ

ಅಕ್ಟೋಬರ್ 31, 2026

ಮಡಿಕೇರಿಯಲ್ಲಿ ಕಾಂಗ್ರೆಸ್ ನಿಂದ ಇಂದಿರಾ ಗಾಂಧಿ 42ನೇ ಪುಣ್ಯಸ್ಮರಣೆ

ಅಕ್ಟೋಬರ್ 31, 2026

ರೈತರ ಪರಿಹಾರಕ್ಕೆ 17 ಷರತ್ತು ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಕೊಡಗು ಬಿಜೆಪಿ ಆಕ್ರೋಶ

ಅಕ್ಟೋಬರ್ 31, 2026

ನ.2 ರಂದು ವಿರಾಜಪೇಟೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 30, 2026

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026

ಚಿತ್ರಕಲಾ ಸ್ಪರ್ಧೆ : ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಅಕ್ಟೋಬರ್ 30, 2026

ನಿವೃತ್ತ ಅಂಗನವಾಡಿ ಶಿಕ್ಷಕಿಯರಿಗೆ ಆತ್ಮೀಯ ಬೀಳ್ಕೊಡುಗೆ

ಅಕ್ಟೋಬರ್ 30, 2026

ಸ್ಥಳೀಯ ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಿ ರಫ್ತು ವಹಿವಾಟು ವಿಸ್ತರಿಸಿ : ಬಿ.ಆರ್.ಯೋಗೇಶ್

ಅಕ್ಟೋಬರ್ 30, 2026

ಯುವ ಸಂಸತ್ತು ಕಾರ್ಯಕ್ರಮ : ಯುವ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿ : ಮಂದ್ರೀರ ಮೋಹನ್ ದಾಸ್

ಅಕ್ಟೋಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.