Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪೊನ್ನಂಪೇಟೆಯಲ್ಲಿ ನ್ಯಾಯಾಲಯದ ಉದ್ಘಾಟನೆ : ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎ.ಎಸ್.ಪೊನ್ನಣ್ಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಂಪೇಟೆಯಲ್ಲಿ ನ್ಯಾಯಾಲಯದ ಉದ್ಘಾಟನೆ : ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 31, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, ಅ.31 NEWS DESK : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು ಕೇಂದ್ರದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಹಿರಿಯ ಸಿವಿಲ್ ನ್ಯಾಯಾಧೀಶರ ಮತ್ತು ಜೆಎಂಎಫ್‍ಸಿ ನ್ಯಾಯಾಲಯವನ್ನು ಸುಪ್ರೀಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ಉದ್ಘಾಟಿಸಿದರು. ಹಾಗೆಯೇ ಇ-ಸೇವಾ ಕೇಂದ್ರಕ್ಕೂ ಚಾಲನೆ ನೀಡಿದರು. ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ಸಮಾಜದಲ್ಲಿ ಪ್ರತಿಯೊಬ್ಬ ಶ್ರೀಸಾಮಾನ್ಯನಿಗೂ ಕಾನೂನು ಸೌಲಭ್ಯಗಳು ತಲುಪಬೇಕು ಎಂಬ ಉದ್ದೇಶದಿಂದ ಪೊನ್ನಂಪೇಟೆ ತಾಲ್ಲೂಕು ಕೇಂದ್ರದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಹಿರಿಯ ಸಿವಿಲ್ ನ್ಯಾಯಾಲಯವನ್ನು ಉದ್ಘಾಟಿಸಲಾಗಿದೆ ಎಂದರು. ತಾಲ್ಲೂಕು ಮಟ್ಟದಲ್ಲಿಯೇ ಎಲ್ಲಾ ರೀತಿಯ ಪ್ರಕರಣಗಳನ್ನು ಇತ್ಯರ್ಥಪಡಿಸುವುದರಿಂದ ಕಕ್ಷಿದಾರರಿಗೆ ಅನುಕೂಲವಾಗಲಿದೆ. ಆ ನಿಟ್ಟಿನಲ್ಲಿ ನ್ಯಾಯಯುತ ಸೌಲಭ್ಯಗಳು ಎಲ್ಲರಿಗೂ ದೊರೆಯಬೇಕು. ನ್ಯಾಯಾಲಯದಲ್ಲಿ ಹಲವು ರೀತಿಯ ಪ್ರಕರಣಗಳನ್ನು ಇತ್ಯರ್ಥಪಡಿಸಲು ಹಿರಿಯ ಸಿವಿಲ್ ನ್ಯಾಯಾಲಯ ಅತ್ಯಗತ್ಯ ಎಂದು ಎ.ಎಸ್.ಬೋಪಣ್ಣ ಅವರು ಹೇಳಿದರು. ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ರಾಷ್ಟ್ರದ ಸಂವಿಧಾನದಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಪ್ರಮುಖವಾಗಿದ್ದು, ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ನ್ಯಾಯಾಂಗದ ಮೇಲೆ ಇಂದಿಗೂ ಸಹ ಸಾರ್ವಜನಿಕರಲ್ಲಿ ವಿಶ್ವಾಸ ಇದ್ದು, ಅದನ್ನು ಉಳಿಸಿಕೊಂಡು ಹೋಗಬೇಕು. ಕಕ್ಷಿದಾರರಿಗೆ ಕಾಲಮಿತಿಯಲ್ಲಿ ಪ್ರಕರಣ ಇತ್ಯರ್ಥಪಡಿಸಬೇಕು. ನ್ಯಾಯಾಂಗ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಸಹ ನಂಬಿಕೆ ಮತ್ತು ವಿಶ್ವಾಸ ಉಳಿಸುವ ಕೆಲಸ ಮಾಡಬೇಕು ಎಂದರು. ಪೊನ್ನಂಪೇಟೆಯಲ್ಲಿ ಬಹು ವರ್ಷಗಳ ಕನಸು ನನಸಾಗಿದೆ. ಅನೇಕ ಹಿರಿಯ ಹೋರಾಟಗಾರರ ಫಲವಾಗಿ ಪೊನ್ನಂಪೇಟೆ ತಾಲ್ಲೂಕು ಕೇಂದ್ರದಲ್ಲಿ ಹಿರಿಯ ಸಿವಿಲ್ ನ್ಯಾಯಾಲಯ ಆರಂಭವಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಕೊಡಗು ಭೂಪ್ರದೇಶ ವಿಶಾಲವಾಗಿದ್ದು, ಸಾರ್ವಜನಿಕರು ತಾಲ್ಲೂಕು ಕೇಂದ್ರಕ್ಕೆ ತೆರಳಲು ತುಂಬಾ ತೊಂದರೆ ಆಗಿದ್ದು, ಈ ಹಿನ್ನೆಲೆ ಪೊನ್ನಂಪೇಟೆ ತಾಲ್ಲೂಕು ಕೇಂದ್ರವಾಗಿ ಸಾರ್ವಜನಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳು ಹಂತ ಹಂತವಾಗಿ ದೊರೆಯುತ್ತಿವೆ ಎಂದರು. ಕಕ್ಷಿದಾರರಿಗೆ ಅನುಕೂಲವಾಗುವಲ್ಲಿ ಹಿರಿಯ ಸಿವಿಲ್ ನ್ಯಾಯಾಲಯ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ನ್ಯಾಯಾಲಯದ ಪ್ರಕರಣಗಳನ್ನು ಸಾಧ್ಯವಾದಷ್ಟು ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಶ್ರಮಿಸಬೇಕು ಎಂದು ಸಲಹೆ ಮಾಡಿದರು. ಕೊಡಗು ಜಿಲ್ಲೆಯ ಬುಡಕಟ್ಟು ಜನರು ಆರೋಗ್ಯ ಕೇಂದ್ರಕ್ಕೆ ಹೋಗುವುದು ಕಡಿಮೆ. ಆದ್ದರಿಂದ ಸಂಚಾರಿ ಆರೋಗ್ಯ ಸೇವೆ ಕಲ್ಪಿಸಲಾಗಿದೆ. ಅದೇ ರೀತಿ ನ್ಯಾಯಾಲಯ ಹತ್ತಿರ ಇದ್ದಲ್ಲಿ ಕಕ್ಷಿದಾರರು ತೆರಳಿ ನ್ಯಾಯ ಪಡೆಯುತ್ತಾರೆ ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟರು. ದೇಶದಲ್ಲಿ ಅನೇಕ ಸಮಸ್ಯೆಗಳಿದ್ದು, ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರೆಯಬೇಕು. ಹಾಗಾದಾಗ ಮಾತ್ರ ಪ್ರತಿಯೊಬ್ಬರಿಗೂ ಸಮಾಜದಲ್ಲಿ ನ್ಯಾಯ ಸಿಗಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ಪ್ರತಿಪಾದಿಸಿದರು. ಕರ್ನಾಟಕ ಹೈಕೋರ್ಟ್‍ನ ನ್ಯಾಯಾಧೀಶರಾದ ಎಂ.ಜಿ.ಶುಕುರೆ ಕಮಲ್ ಅವರು ಮಾತನಾಡಿ ಸಮಾಜದಲ್ಲಿ ಪ್ರತಿಯೊಬ್ಬರೂ ಶಾಂತಿಯುತವಾಗಿ ಜೀವನ ನಡೆಸಬೇಕು. ಯಾರಲ್ಲೂ ಸಹ ವ್ಯಾಜ್ಯಗಳು ಇರಬಾರದು. ಆ ನಿಟ್ಟಿನಲ್ಲಿ ಬದುಕು ನಡೆಸುವತ್ತ ಗಮನಹರಿಸಬೇಕು ಎಂದು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು. ಆಸ್ತಿಗಾಗಿ ಅಕ್ಕ-ತಂಗಿ, ಅಣ್ಣ-ತಮ್ಮಂದಿರ ದಯಾದಿಗಳ ಕಲಹ ಪ್ರತೀ ನಿತ್ಯ ನೋಡುತ್ತೇವೆ. ಇದರಿಂದ ಯಾರಿಗೂ ಸಹ ಒಳಿತಾಗುವುದಿಲ್ಲ. ಬದುಕನ್ನು ಸಹಬಾಳ್ವೆಯಿಂದ ನಡೆಸುವುದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಬಹುದು ಎಂದು ಶುಕುರೆ ಕಮಲ್ ಅವರು ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ವಿಷಯಗಳಿಗೆ ನ್ಯಾಯಾಲಯದ ತಡೆಯಾಜ್ಞೆ ತಂದು ಖುಷಿ ಪಡುವವರ ಸಂಖ್ಯೆ ಹೆಚ್ಚಾಗಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಪ್ರಕರಣಗಳು ಇತ್ಯರ್ಥವಾಗುವುದು ಅತೀ ಮುಖ್ಯ ಎಂದರು. ನ್ಯಾಯಾಲಯಗಳಲ್ಲಿ ಆದಷ್ಟು ತ್ವರಿತವಾಗಿ ಪ್ರಕರಣಗಳು ವಿಲೇವಾರಿ ಮಾಡಲು ಪ್ರಯತ್ನಿಸಬೇಕು. ಆ ನಿಟ್ಟಿನಲ್ಲಿ ನ್ಯಾಯಾಧೀಶರು, ನ್ಯಾಯಾವಾದಿಗಳು, ಕಕ್ಷಿದಾರರು ಮುಂದಾಗಬೇಕು ಎಂದರು. ರಾಜ್ಯ ಹೈಕೋರ್ಟ್‍ನ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲಾ ನ್ಯಾಯಾಂಗ ಆಡಳಿತಾಧಿಕಾರಿ ಎಸ್.ರಾಚಯ್ಯ ಅವರು ಮಾತನಾಡಿ ಹೊಸ ನ್ಯಾಯಾಲಯ ಆರಂಭವಾಗಿದೆ. ಪ್ರಕರಣಗಳನ್ನು ಆದಷ್ಟು ಇತ್ಯರ್ಥಪಡಿಸಲು ಪ್ರಯತ್ನಿಸಬೇಕು. ಕಕ್ಷಿದಾರರಿಗೆ ನ್ಯಾಯ ಒದಗಿಸಬೇಕು ಎಂದರು. ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಅವರು ತಿಳಿಸಿದರು. ಜಿಲ್ಲೆಯಲ್ಲಿ ಇರುವ ಜಿಲ್ಲಾ, ತಾಲ್ಲೂಕು ನ್ಯಾಯಾಲಯಗಳ ಸುಸ್ಥಿತಿ, ವಸತಿ ಗೃಹಗಳು ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ನ್ಯಾಯಾಧೀಶರಾದ ರಾಚಯ್ಯ ಅವರು ನುಡಿದರು. ಹೈಕೋರ್ಟ್‍ನ ನ್ಯಾಯಾಧೀಶರಾದ ಸಿ.ಎಂ.ಪೂಣಚ್ಚ ಅವರು ಮಾತನಾಡಿ ಪೊನ್ನಂಪೇಟೆಯಲ್ಲಿ ಎಲ್ಲಾ ರೀತಿಯ ನ್ಯಾಯಾಂಗ ವ್ಯವಸ್ಥೆ ಒದಗಿಸಿರುವುದು ಇಲ್ಲಿನ ಜನರಿಗೆ ಅನುಕೂಲವಾಗಿದೆ. ಆ ನಿಟ್ಟಿನಲ್ಲಿ ನ್ಯಾಯಾಂಗ ಸೌಲಭ್ಯಗಳು ತಲುಪಬೇಕು ಎಂದರು. ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಹಲವು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಹಕಾರಿಯಾಗಿದೆ. ಹಳೇ ಬೇರು ಹೊಸ ಚಿಗುರು ಎಂಬಂತೆ ಹಿರಿಯರಿಗೆ ಗೌರವಿಸಿ, ಕಿರಿಯರು ಮುನ್ನಡೆಯಬೇಕು ಎಂದರು. ಹೈಕೋರ್ಟ್‍ನ ನ್ಯಾಯಾಧೀಶರಾದ ಕೆ.ಜಿ.ಶಾಂತಿ ಹಾಗೂ ಕೆ.ಎಸ್.ಭರತ್ ಕುಮಾರ್ ಅವರು ನ್ಯಾಯಾಂಗ ವ್ಯವಸ್ಥೆ ಬಗ್ಗೆ ವಿವರಿಸಿದರು. ವಕೀಲರಾದ ಎಂ.ಸುರೇಶ್ ಅಯ್ಯಪ್ಪ ಅವರು ಮಾತನಾಡಿ ಪೊನ್ನಂಪೇಟೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಲಯ ಹಾಗೂ ಜೆಎಂಎಫ್‍ಸಿ ನ್ಯಾಯಾಲಯ ಉದ್ಘಾಟನೆ ಆಗಿರುವುದಕ್ಕೆ ಹಲವರ ಶ್ರಮ ಇದೆ ಎಂದು ತಿಳಿಸಿದರು. ಕೊಡಗು ಜಿಲ್ಲಾ ಪ್ರಧಾನ ಮತ್ತು ಸೆಷನ್ ನ್ಯಾಯಾಧೀಶರಾದ ಮಾರುತಿ ಎಸ್. ಬಗಡೆ, ಪೊನ್ನಂಪೇಟೆ ವಕೀಲರ ಸಂಘದ ಅಧ್ಯಕ್ಷರಾದ ಎಂ.ಜಿ.ರಾಕೇಶ್, ಕಾರ್ಯದರ್ಶಿ ಗಿರೀಶ್ ಅಣ್ಣಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ ರಾಯಕೊಡ, ತಹಶೀಲ್ದಾರ್ ಸಂಜನಾ, ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್(ಮಡಿಕೇರಿ), ಅಭಿಮನ್ಯು ಕುಮಾರ್ (ಸೋಮವಾರಪೇಟೆ), ಆರ್.ಕೆ.ನಾಗೇಂದ್ರ ಬಾಬು (ಕುಶಾಲನಗರ), ಸಿ.ಕೆ.ಪೂವಣ್ಣ(ವಿರಾಜಪೇಟೆ) ಇತರರು ಇದ್ದರು. ವಕೀಲರಾದ ಎಂ.ಸುರೇಶ್ ಅಯ್ಯಪ್ಪ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಪೊನ್ನಂಪೇಟೆ ವಕೀಲರ ಸಂಘದ ಅಧ್ಯಕ್ಷರಾದ ಎಂ.ಜಿ.ರಾಕೇಶ್ ಸ್ವಾಗತಿಸಿದರು. ವಕೀಲರಾದ ಸಂಜೀವ ನಿರೂಪಿಸಿದರು. ವಕೀಲರಾದ ಕಂಜಿತಂಡ ಅನಿತಾ ಅವರು ಪೊನ್ನಂಪೇಟೆ ಹಿರಿಯ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್‍ಸಿ ನ್ಯಾಯಾಲಯ ಅಭಿವೃದ್ಧಿ ಬಗ್ಗೆ ಮಾತನಾಡಿದರು. ಸುಧಾ ಪ್ರಸಾದ್ ಮತ್ತು ತಂಡದವರು ವಂದೇ ಮಾತರಂ ಹಾಗೂ ನಾಡಗೀತೆ ಹಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾವೇರಿ ತೀರ್ಥೋದ್ಭವದ ಪ್ರಸಾದ ವಿತರಣೆ

ಅಕ್ಟೋಬರ್ 31, 2026

ಭರತನಾಟ್ಯ ಪರೀಕ್ಷೆ : ವಿರಾಜಪೇಟೆ ‘ನಾಟ್ಯಾಂಜಲಿ ನೃತ್ಯ ಸಂಸ್ಥೆ’ಗೆ ಶೇ.100 ಫಲಿತಾಂಶ

ಅಕ್ಟೋಬರ್ 31, 2026

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 31, 2026

ಭರತನಾಟ್ಯ ಪರೀಕ್ಷೆ : ವಿರಾಜಪೇಟೆ ‘ನಾಟ್ಯಾಂಜಲಿ ನೃತ್ಯ ಸಂಸ್ಥೆ’ಗೆ ಶೇ.100 ಫಲಿತಾಂಶ

ಅಕ್ಟೋಬರ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.31 NEWS DESK : ಇತ್ತೀಚೆಗೆ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ ನಡೆದ…

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 31, 2026

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ

ಅಕ್ಟೋಬರ್ 31, 2026

ಪೊನ್ನಂಪೇಟೆಯಲ್ಲಿ ನ್ಯಾಯಾಲಯದ ಉದ್ಘಾಟನೆ : ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 31, 2026

ಕೂಗ್೯ ಹೋಟೆಲ್, ರೆಸಾಟ್೯ ಅಸೋಸಿಯೇಷನ್ ವಾಷಿ೯ಕ ಮಹಾಸಭೆ : ಪ್ರವಾಸೋದ್ಯಮ ಪ್ರಗತಿಗೆ ಸಂಬಂಧಿಸಿದಂತೆ ಮಹತ್ವದ ಚಚೆ೯

ಅಕ್ಟೋಬರ್ 31, 2026

ರಾಜ್ಯಮಟ್ಟದ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸೋಮವಾರಪೇಟೆ ಪಿ.ಎಂ.ಶ್ರೀ ಜಿ.ಎಂ.ಪಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 31, 2026

ಹಾಕತ್ತೂರು-ಬಿಳಿಗೇರಿ ಮಖಾಮ್ ಉರೂಸ್ ಮೇ 2ರಿಂದ 4ರವರೆಗೆ

ಅಕ್ಟೋಬರ್ 31, 2026

ದೇಚೂರು ಶ್ರೀ ರಾಮ ಮಂದಿರದ ದಸರಾ ಕಲಾಕೃತಿಗಳಿಗೆ ಶಾಂತಿ ಪೂಜೆ

ಅಕ್ಟೋಬರ್ 31, 2026

ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ: ಮಡಿಕೇರಿಯಲ್ಲಿ ಅರ್ಥಪೂರ್ಣ ಆಚರಣೆ; ಸ್ವಾತಂತ್ರ್ಯ ಹೋರಾಟಗಾರನಿಗೆ ಗಣ್ಯರಿಂದ ಗೌರವ ನಮನ; ಅಪ್ಪಯ್ಯ ಗೌಡರ ತ್ಯಾಗ, ಬಲಿದಾನ ಸ್ಮರಣೆ

ಅಕ್ಟೋಬರ್ 31, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿ: ವಿವಿಧ ತಂಡಗಳಿಂದ ಭರ್ಜರಿ ಪ್ರದರ್ಶನ; ನ.1ರಂದು ಸಮಾರೋಪ

ಅಕ್ಟೋಬರ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.