ಮಡಿಕೇರಿ, NEWS DESK ನ.1: ಕೊಡಗು ಜಿಲ್ಲಾಡಳಿತದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ. ನರೇಂದ್ರಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಿ, ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮಹತ್ವದ ಕುರಿತು ಮಾತನಾಡಿದರು.
ಶಾಸಕರಾದ ಡಾ. ಮಂತರ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ, ತಹಶೀಲ್ದಾರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

















