Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುಂಟಿಕೊಪ್ಪದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ; ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸಿ: ಎ.ಲೋಕೇಶ್ ಕುಮಾರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ; ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸಿ: ಎ.ಲೋಕೇಶ್ ಕುಮಾರ್

ನವೆಂಬರ್ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸುಂಟಿಕೊಪ್ಪ, NEWS DESK ನ.1: ದೇಶದ ಐಕ್ಯತೆ ಮತ್ತು ಸಾರ್ವಭೌಮತ್ವವನ್ನು ಗೌರವಿಸುವುದರೊಂದಿಗೆ ರಾಜ್ಯದ ಸಂಸ್ಕೃತಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎ.ಲೋಕೇಶ್ ಕುಮಾರ್ ಹೇಳಿದರು.

ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ವೃತ್ತದಲ್ಲಿ ಆಯೋಜಿಸಲಾಗಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕನ್ನಡ ರಾಜ್ಯೋತ್ಸವವು ಇತರ ಹಬ್ಬಗಳಿಗಿಂತಲೂ ಮಹತ್ವದ ಹಬ್ಬವಾಗಿದ್ದು, ರಾಜ್ಯದ ಪ್ರತಿಯೊಬ್ಬರೂ ಸಡಗರ ಸಂಭ್ರಮದಿಂದ ಆಚರಿಸಬೇಕು. ಕನ್ನಡ ಭಾಷೆ, ಸಂಸ್ಕೃತಿ ಮತ್ತು ಸಮಗ್ರತೆಯನ್ನು ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಬೇಕು. ಕಳೆದ 40 ವರ್ಷಗಳಿಂದ ವಿವಿಧ ಸಂಘ-ಸಂಸ್ಥೆಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ವೃತ್ತದಲ್ಲಿ ರಾಜ್ಯೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಈ ಆಚರಣೆಯಲ್ಲಿ ಗ್ರಾಮ ಪಂಚಾಯಿತಿಯೂ ಕೈಜೋಡಿಸಿದರೆ ಮತ್ತಷ್ಟು ಮೆರಗು ದೊರೆಯಲಿದೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಕನ್ನಡ ಸಾಹಿತ್ಯ ಪರಿಷತ್‌ನೊಂದಿಗೆ ಒಗ್ಗೂಡಿ ರಾಜ್ಯೋತ್ಸವ ಆಚರಿಸುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ವಿದ್ಯಾರ್ಥಿನಿ ಶ್ರೀಶಾ ಮಾತನಾಡಿ, ಹಿಂದೆ ಹರಿದು ಹಂಚಿಹೋಗಿದ್ದ ಕನ್ನಡ ನಾಡನ್ನು ಹಿರಿಯರು ವಿವಿಧ ಪ್ರಾಂತ್ಯಗಳನ್ನು ಒಗ್ಗೂಡಿಸುವ ಮೂಲಕ ಏಕೀಕೃತ ಕರ್ನಾಟಕವನ್ನಾಗಿ ರೂಪಿಸಿದ್ದಾರೆ. ಆದರೆ ಇಂದು ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಎಷ್ಟರಮಟ್ಟಿಗೆ ಉಳಿಸಿ ಬೆಳೆಸಿದ್ದೇವೆ ಎಂಬ ಪ್ರಶ್ನೆ ಎದುರಾಗಿದೆ. ನ್ಯಾಯಾಲಯ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಆದೇಶಗಳು ಹಾಗೂ ಮಾಹಿತಿ ಪತ್ರಗಳಲ್ಲಿ ಆಂಗ್ಲ ಭಾಷೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದ ಕನ್ನಡದ ಮಹತ್ವ ಕಡಿಮೆಯಾಗುತ್ತಿದೆ. ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಮಹಾರಾಷ್ಟ್ರಕ್ಕೆ ಸೇರಿರುವ ಕೊಲ್ಲಾಪುರ, ಸಾಂಗ್ಲಿ, ಸೋಲಾಪುರ ಹಾಗೂ ಕೇರಳಕ್ಕೆ ಸೇರಿರುವ ಕಾಸರಗೋಡು ಪ್ರದೇಶಗಳ ಕನ್ನಡದ ನಂಟನ್ನು ಮರೆಯಬಾರದು ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಉದ್ಯಮಿ ಎಸ್.ಜಿ.ಶ್ರೀನಿವಾಸ್ ಅವರು, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸಾಹಿತಿಗಳು ರಚಿಸಿರುವ ಗ್ರಂಥಗಳು ಮತ್ತು ಶಿಲ್ಪಕಲೆಗಳು ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಶ್ರೀಮಂತಿಕೆಯನ್ನು ಸಾರುತ್ತವೆ. ಇವುಗಳನ್ನು ಇಂದಿನ ಯುವಪೀಳಿಗೆ ವೀಕ್ಷಿಸಿ, ಅವುಗಳ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉದ್ಯೋಗ ಹಾಗೂ ಜೀವನ ರೂಪಿಸಿಕೊಳ್ಳಲು ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಜನರಿಗೆ ಕನ್ನಡ ಕಲಿಸುವ ಮೂಲಕ ಭಾಷೆಯ ಬೆಳವಣಿಗೆಗೆ ಎಲ್ಲರೂ ಪ್ರಾಮುಖ್ಯತೆ ನೀಡಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆಯ ವತಿಯಿಂದ ಕನ್ನಡ ವಿಷಯದಲ್ಲಿ 125 ಅಂಕ ಗಳಿಸಿದ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ರೋಜಾ ಹಾಗೂ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಹ್ಯಾರನ್ ಅವರನ್ನು ನಗದು ಬಹುಮಾನ ನೀಡಿ ಗೌರವಿಸಲಾಯಿತು. ಅಲ್ಲದೆ, ಐದು ಬಡ ಕುಟುಂಬಗಳಿಗೆ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಎಫ್. ಸಬಾಸ್ಸಿನ್ ವಹಿಸಿದ್ದರು.

ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಪಾಧ್ಯಕ್ಷೆ ಲೀಲಾ ಮೇದಪ್ಪ, ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಡಾ. ಯಶೋಧರ ಪೂಜಾರಿ, ಚುಟುಕು ಸಾಹಿತಿ ಹಾಗೂ ಮಾಜಿ ಅಧ್ಯಕ್ಷ ವಹೀದ್ ಜಾನ್, ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಗ್ಲೇನ್ ಮೆನೆಜಸ್, ಪದಾಧಿಕಾರಿಗಳಾದ ವಿಜಯಕುಮಾರ್, ನಿಕೇಶ್, ಶಶಾಂಕ್, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಕುಮಾರ್, ಕಸಾಪ ಹಿರಿಯ ಸದಸ್ಯರಾದ ಕೆ.ಪಿ. ಜಗನ್ನಾಥ್, ಡಿ. ನರಸಿಂಹ, ಬಿ.ಎಸ್. ಸದಾಶಿವ ರೈ, ಸುಂಟಿಕೊಪ್ಪ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಮಧು, ಕಸಾಪ ಕಾರ್ಯದರ್ಶಿ ಕೆ.ಎಸ್. ಅನಿಲ್ ಕುಮಾರ್, ಖಜಾಂಚಿ ಸತೀಶ್ ಶೇಟ್ ಮತ್ತಿತರರು ಉಪಸ್ಥಿತರಿದ್ದರು.

ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಹಕೀಂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿಗೆ ರೋಚಕ ತೆರೆ: ಮೂರ್ನಾಡು ಎಂಆರ್‌ಎಫ್, ಪೊನ್ನಂಪೇಟೆ ಕ್ರೀಡಾ ಶಾಲೆ, ಕೂರ್ಗ್ ವಂಡರ್ ಹಾಗೂ ಕೊಡವ ಹಾಕಿ ಅಕಾಡೆಮಿಗೆ ಪ್ರಶಸ್ತಿ

ನವೆಂಬರ್ 1, 2026

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡಗಿಗೆ ಯುಟಿ ಸ್ಥಾನಮಾನಕ್ಕೆ ಆಗ್ರಹಿಸಿ ಸಿಎನ್‌ಸಿ ಸತ್ಯಾಗ್ರಹ

ನವೆಂಬರ್ 1, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿಗೆ ರೋಚಕ ತೆರೆ: ಮೂರ್ನಾಡು ಎಂಆರ್‌ಎಫ್, ಪೊನ್ನಂಪೇಟೆ ಕ್ರೀಡಾ ಶಾಲೆ, ಕೂರ್ಗ್ ವಂಡರ್ ಹಾಗೂ ಕೊಡವ ಹಾಕಿ ಅಕಾಡೆಮಿಗೆ ಪ್ರಶಸ್ತಿ

ನವೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.1: ಕೂರ್ಗ್ ಹಾಕ್ಸ್ ಕ್ಲಬ್ ಹಾಗೂ ಕೇರಳದ ಯುನೈಟೆಡ್ ತಲಚೇರಿ ಸ್ಪೋರ್ಟ್ಸ್ ಕ್ಲಬ್ ಸಹಭಾಗಿತ್ವದಲ್ಲಿ ಹಾಕಿ…

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡಗಿಗೆ ಯುಟಿ ಸ್ಥಾನಮಾನಕ್ಕೆ ಆಗ್ರಹಿಸಿ ಸಿಎನ್‌ಸಿ ಸತ್ಯಾಗ್ರಹ

ನವೆಂಬರ್ 1, 2026

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಮೌನ ವಿ.ಜೆ.ಗೆ ಅತ್ಯುನ್ನತ ಶ್ರೇಣಿ

ನವೆಂಬರ್ 1, 2026

ಕೊಡಗು ಪತ್ರಿಕಾ ಭವನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಸುಂಟಿಕೊಪ್ಪ ಇಮ್ಯಾನುವೆಲ್ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ವಾರ್ಷಿಕ ಬೆಳೆ ಹಬ್ಬ ಆಚರಣೆ

ನವೆಂಬರ್ 1, 2026

ನ.3 ರಂದು ಮಂಗಳವಾರ ಶಾಸಕ ಡಾ.ಮಂತರ್ ಗೌಡ ಅವರಿಗೆ ಮಡಿಕೇರಿಯಲ್ಲಿ ಪೌರಸನ್ಮಾನ

ನವೆಂಬರ್ 1, 2026

ಸುಂಟಿಕೊಪ್ಪದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ; ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸಿ: ಎ.ಲೋಕೇಶ್ ಕುಮಾರ್

ನವೆಂಬರ್ 1, 2026

ವಿರಾಜಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ; ಪಥಸಂಚಲನದಲ್ಲಿ ಪಾಲ್ಗೊಂಡ ನೂರಾರು ಗಣವೇಷಧಾರಿ ಹಿಂದೂ ಬಾಂಧವರು

ನವೆಂಬರ್ 1, 2026

ಪಾಲಿಬೆಟ್ಟದಲ್ಲಿ ಬೀದಿ ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಅಭಿಯಾನ: 56 ನಾಯಿಗಳಿಗೆ ಲಸಿಕೆ

ನವೆಂಬರ್ 1, 2026

ಕೊಡಗು ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ

ನವೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.