ಮಡಿಕೇರಿ, NEWS DESK ನ.1: ಕೊಡಗು ಪತ್ರಿಕಾ ಭವನದಲ್ಲಿ ಭಾನುವಾರ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪತ್ರಿಕಾ ಭವನ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ. ಕೇಶವ ಕಾಮತ್ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್, ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ. ರಮೇಶ್, ಟ್ರಸ್ಟಿ ಶ್ರೀಧರ್ ಹೂವಲ್ಲಿ, ಪತ್ರಕರ್ತರಾದ ಶಿವಪ್ಪ, ಸಿಬ್ಬಂದಿಗಳಾದ ಯಮುನಾ ಮತ್ತು ರಾಜೇಶ್, ಉದ್ಯಮಿಗಳಾದ ಅಶ್ರಫ್, ಜ್ಞಾನೇಶ್, ಪುಟಾಣಿ ಹಾಗೂ ದೇಶಿಕ ರೈ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

















