Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುಂಟಿಕೊಪ್ಪ ಇಮ್ಯಾನುವೆಲ್ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ವಾರ್ಷಿಕ ಬೆಳೆ ಹಬ್ಬ ಆಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಇಮ್ಯಾನುವೆಲ್ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ವಾರ್ಷಿಕ ಬೆಳೆ ಹಬ್ಬ ಆಚರಣೆ

ನವೆಂಬರ್ 1, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸುಂಟಿಕೊಪ್ಪ, NEWS DESK ನ.1: ಚರ್ಚ್ ಆಫ್ ಸೌತ್ ಇಂಡಿಯಾದ ದಕ್ಷಿಣ ಪ್ರಾಂತ್ಯದ ಸುಂಟಿಕೊಪ್ಪದಲ್ಲಿರುವ ಇಮ್ಯಾನುವೆಲ್ ದೇವಾಲಯದಲ್ಲಿ ವಾರ್ಷಿಕ ಬೆಳೆ ಹಬ್ಬವನ್ನು ಭಾನುವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಈ ಪ್ರಯುಕ್ತ ದೇವಾಲಯ ಹಾಗೂ ಆವರಣವನ್ನು ಕಬ್ಬು, ಭತ್ತದ ಪೈರು, ಹೂವುಗಳು ಸೇರಿದಂತೆ ವಿವಿಧ ಹಣ್ಣು ಮತ್ತು ಫಲವಸ್ತುಗಳಿಂದ ಸುಂದರವಾಗಿ ಅಲಂಕರಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಸಭಾಪಾಲಕರಾದ ಘನ. ಜೈಸನ್ ಗೌಡರ್ ಪಾಲ್ಗೊಂಡು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಪ್ರಾರ್ಥನೆ ಹಾಗೂ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಕೃಷ್ಣಾಪುರದ ಸಿಎಸ್‌ಐ ಕಾರುಣ್ಯ ದೇವಾಲಯದ ಘನ. ಸ್ಟೀವನ್ ಸರ್ವೋತ್ತಮ್ ಮಾತನಾಡಿ, ದೇವಾಲಯಗಳ ವಾರ್ಷಿಕ ಧಾರ್ಮಿಕ ವಿಧಿವಿಧಾನಗಳಲ್ಲಿ ಬೆಳೆ ಹಬ್ಬವು ಪ್ರಮುಖ ಸ್ಥಾನ ಪಡೆದಿದೆ. ಸತ್ಯವೇದ ಅಥವಾ ಬೈಬಲ್ ಪ್ರಕಾರ ಭಕ್ತರು ತಾವು ಬೆಳೆದ ಕೃಷಿ ಉತ್ಪನ್ನಗಳು ಹಾಗೂ ಫಲವಸ್ತುಗಳನ್ನು ಮೊದಲ ಕಾಣಿಕೆಯಾಗಿ ದೇವರಿಗೆ ಸಮರ್ಪಿಸುವುದು ಒಂದು ಪದ್ಧತಿ ಮತ್ತು ನಂಬಿಕೆಯಾಗಿದೆ. ಇದರ ಮೂಲಕ ನಮ್ಮನ್ನು ನಾವು ದೇವರಿಗೆ ಪುನಃ ಸಮರ್ಪಿಸಿಕೊಂಡು, ಯೇಸುಸ್ವಾಮಿಯ ಕೃಪೆ ಹಾಗೂ ಆಶೀರ್ವಾದಗಳಿಗೆ ಪಾತ್ರರಾಗಿ ಜೀವನವನ್ನು ಮುನ್ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಬೆಳಗಿನ ಪ್ರಾರ್ಥನೆ ಹಾಗೂ ಪೂಜಾ ವಿಧಿವಿಧಾನಗಳನ್ನು ಘನ. ಸ್ಟೀವನ್ ಸರ್ವೋತ್ತಮ್ ಮತ್ತು ಸುಂಟಿಕೊಪ್ಪ ಇಮ್ಯಾನುವೆಲ್ ದೇವಾಲಯದ ಸಭಾಪಾಲಕರಾದ ಘನ. ಜೈಸನ್ ಗೌಡರ್ ನೆರವೇರಿಸಿದರು.

ನಂತರ ಭಕ್ತಾದಿಗಳು ದೇವಾಲಯಕ್ಕೆ ಕಾಣಿಕೆಯಾಗಿ ನೀಡಿದ ವಿವಿಧ ಫಲವಸ್ತುಗಳ ಹರಾಜು ಪ್ರಕ್ರಿಯೆ ನಡೆಯಿತು. ಬಳಿಕ ಸಾಮೂಹಿಕ ಭೋಜನದೊಂದಿಗೆ ಸಂಜೆಯವರೆಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು.

ಸುಂಟಿಕೊಪ್ಪ ಸಭಾಪಾಲಕರಾದ ಮಧುಕಿರಣ್ ಅವರ ಉಸ್ತುವಾರಿಯಲ್ಲಿ ದೇವಾಲಯದ ಭಕ್ತಾದಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಭಾಪಾಲನಾ ಸಮಿತಿಯ ಸದಸ್ಯರು ಹಾಗೂ ಸಭೆಯ ಭಾಂದವರು ಹಬ್ಬದಲ್ಲಿ ಭಕ್ತಿ, ಸಡಗರ ಹಾಗೂ ಸಂಭ್ರಮದಿಂದ ಪಾಲ್ಗೊಂಡು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ದೇವಾಲಯದ ವತಿಯಿಂದ ಆತ್ಮೀಯವಾಗಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Related Posts

ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿಗೆ ರೋಚಕ ತೆರೆ: ಮೂರ್ನಾಡು ಎಂಆರ್‌ಎಫ್, ಪೊನ್ನಂಪೇಟೆ ಕ್ರೀಡಾ ಶಾಲೆ, ಕೂರ್ಗ್ ವಂಡರ್ ಹಾಗೂ ಕೊಡವ ಹಾಕಿ ಅಕಾಡೆಮಿಗೆ ಪ್ರಶಸ್ತಿ

ನವೆಂಬರ್ 1, 2026

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡಗಿಗೆ ಯುಟಿ ಸ್ಥಾನಮಾನಕ್ಕೆ ಆಗ್ರಹಿಸಿ ಸಿಎನ್‌ಸಿ ಸತ್ಯಾಗ್ರಹ

ನವೆಂಬರ್ 1, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿಗೆ ರೋಚಕ ತೆರೆ: ಮೂರ್ನಾಡು ಎಂಆರ್‌ಎಫ್, ಪೊನ್ನಂಪೇಟೆ ಕ್ರೀಡಾ ಶಾಲೆ, ಕೂರ್ಗ್ ವಂಡರ್ ಹಾಗೂ ಕೊಡವ ಹಾಕಿ ಅಕಾಡೆಮಿಗೆ ಪ್ರಶಸ್ತಿ

ನವೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.1: ಕೂರ್ಗ್ ಹಾಕ್ಸ್ ಕ್ಲಬ್ ಹಾಗೂ ಕೇರಳದ ಯುನೈಟೆಡ್ ತಲಚೇರಿ ಸ್ಪೋರ್ಟ್ಸ್ ಕ್ಲಬ್ ಸಹಭಾಗಿತ್ವದಲ್ಲಿ ಹಾಕಿ…

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡಗಿಗೆ ಯುಟಿ ಸ್ಥಾನಮಾನಕ್ಕೆ ಆಗ್ರಹಿಸಿ ಸಿಎನ್‌ಸಿ ಸತ್ಯಾಗ್ರಹ

ನವೆಂಬರ್ 1, 2026

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಮೌನ ವಿ.ಜೆ.ಗೆ ಅತ್ಯುನ್ನತ ಶ್ರೇಣಿ

ನವೆಂಬರ್ 1, 2026

ಕೊಡಗು ಪತ್ರಿಕಾ ಭವನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಸುಂಟಿಕೊಪ್ಪ ಇಮ್ಯಾನುವೆಲ್ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ವಾರ್ಷಿಕ ಬೆಳೆ ಹಬ್ಬ ಆಚರಣೆ

ನವೆಂಬರ್ 1, 2026

ನ.3 ರಂದು ಮಂಗಳವಾರ ಶಾಸಕ ಡಾ.ಮಂತರ್ ಗೌಡ ಅವರಿಗೆ ಮಡಿಕೇರಿಯಲ್ಲಿ ಪೌರಸನ್ಮಾನ

ನವೆಂಬರ್ 1, 2026

ಸುಂಟಿಕೊಪ್ಪದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ; ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸಿ: ಎ.ಲೋಕೇಶ್ ಕುಮಾರ್

ನವೆಂಬರ್ 1, 2026

ವಿರಾಜಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ; ಪಥಸಂಚಲನದಲ್ಲಿ ಪಾಲ್ಗೊಂಡ ನೂರಾರು ಗಣವೇಷಧಾರಿ ಹಿಂದೂ ಬಾಂಧವರು

ನವೆಂಬರ್ 1, 2026

ಪಾಲಿಬೆಟ್ಟದಲ್ಲಿ ಬೀದಿ ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಅಭಿಯಾನ: 56 ನಾಯಿಗಳಿಗೆ ಲಸಿಕೆ

ನವೆಂಬರ್ 1, 2026

ಕೊಡಗು ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ

ನವೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.