Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮೂರ್ನಾಡು ಕಸಾಪದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ: ಕನ್ನಡದ ಉಳಿವು ಮತ್ತು ಬೆಳವಣಿಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಈರಮಂಡ ಹರಿಣಿ ವಿಜಯ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು ಕಸಾಪದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ: ಕನ್ನಡದ ಉಳಿವು ಮತ್ತು ಬೆಳವಣಿಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಈರಮಂಡ ಹರಿಣಿ ವಿಜಯ್

ನವೆಂಬರ್ 1, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ನ.1 : ಕನ್ನಡವೆಂಬುದು ಕೇವಲ ಸಂವಹನದ ಭಾಷೆಯಲ್ಲ. ಅದು ನಮ್ಮ ಅಸ್ಮಿತೆ, ಆತ್ಮಗೌರವ, ಸಂಸ್ಕೃತಿ, ಸಂಸ್ಕಾರ ಹಾಗೂ ಬದುಕಿನ ಜೀವನಾಡಿಯಾಗಿದೆ. ಕನ್ನಡವನ್ನು ಉಳಿಸುವುದು ಎಂದರೆ ನಮ್ಮ ನಾಡಿನ ಇತಿಹಾಸ, ಸಾಹಿತ್ಯ, ಜನಪದ, ಕಲೆ ಹಾಗೂ ಶ್ರೀಮಂತ ಪರಂಪರೆಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕನ್ನಡಪರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡ ಭಾಷೆ ಮತ್ತು ಸಾಹಿತ್ಯದ ಉಳಿವು ಹಾಗೂ ಬೆಳವಣಿಗೆಯ ಉದ್ದೇಶದಿಂದ ಘಟಕದ ವತಿಯಿಂದ ಪ್ರತಿವರ್ಷ ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಪರಿಷತ್ತಿನ ಪ್ರತಿಯೊಂದು ಕಾರ್ಯಕ್ರಮವೂ ಕೇವಲ ಪದಾಧಿಕಾರಿಗಳಿಗೆ ಸೀಮಿತವಾಗಿರದೆ ಇಡೀ ಹೋಬಳಿಯ ಕನ್ನಡಾಭಿಮಾನಿಗಳ ಕಾರ್ಯಕ್ರಮವಾಗಿದೆ. ಪ್ರತಿಯೊಬ್ಬರೂ ಕನ್ನಡದ ಮೇಲಿನ ಪ್ರೀತಿ ಮತ್ತು ಅಭಿಮಾನದಿಂದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕನ್ನಡದ ಕೈಂಕರ್ಯಕ್ಕೆ ಕೈಜೋಡಿಸಬೇಕು ಎಂದರು. ಕನ್ನಡದ ಕಂಪು ಒಂದು ಊರಿಗೆ ಅಥವಾ ಪ್ರದೇಶಕ್ಕೆ ಸೀಮಿತವಾಗದೆ ಹಳ್ಳಿ ಹಳ್ಳಿಗೂ, ಮನೆ ಮನೆಗೂ ತಲುಪಬೇಕು. ಈ ಉದ್ದೇಶದಿಂದ ಕಳೆದ ಎರಡು ವರ್ಷಗಳಿಂದ ಮೂರ್ನಾಡಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿದ್ದು, ಈ ಬಾರಿ ನವೆಂಬರ್ 21ರಂದು ಮರಗೋಡಿನಲ್ಲಿ ಕನ್ನಡ ಹಬ್ಬ ಆಯೋಜಿಸಲಾಗಿದೆ. ಕನ್ನಡದ ಸಂಭ್ರಮವನ್ನು ಹೋಬಳಿಯ ಎಲ್ಲ ಗ್ರಾಮಗಳಿಗೂ ತಲುಪಿಸುವುದು ನಮ್ಮ ಆಶಯವಾಗಿದೆ. ಸ್ಥಳ ಬದಲಾಗಿರಬಹುದು, ಆದರೆ ಕನ್ನಡದ ಮೇಲಿನ ಪ್ರೀತಿ ಬದಲಾಗಿಲ್ಲ. ಮೂರ್ನಾಡಿನಲ್ಲಿ ನೀಡಿದ ಪ್ರೀತಿ, ಸಹಕಾರ ಮತ್ತು ಒಗ್ಗಟ್ಟನ್ನು ಮರಗೋಡಿನ ಕನ್ನಡ ಹಬ್ಬಕ್ಕೂ ನೀಡಬೇಕು. ಕನ್ನಡ ಹಬ್ಬ ಕೇವಲ ಒಂದು ದಿನದ ಆಚರಣೆಯಾಗದೆ ವರ್ಷವಿಡೀ ಕನ್ನಡ ಮಾತನಾಡುವ, ಓದುವ, ಬರೆಯುವ ಹಾಗೂ ಕನ್ನಡ ಸಂಸ್ಕೃತಿಯನ್ನು ಗೌರವಿಸುವ ಸಂಕಲ್ಪವಾಗಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ತೇಲಪಂಡ ಸುಬ್ಬಯ್ಯ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿದರು. ಬಳಿಕ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಬೆಟ್ಟಗುಡ್ಡಗಳ ಸೌಂದರ್ಯ, ವೈವಿಧ್ಯಮಯ ಸಂಸ್ಕೃತಿ, ಸಾಹಿತ್ಯ ಮತ್ತು ಪರಂಪರೆಯನ್ನು ಹೊಂದಿರುವ ಕರ್ನಾಟಕದಲ್ಲಿ ಕನ್ನಡಕ್ಕೆ ವಿಶಿಷ್ಟ ಸ್ಥಾನವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆಯ ಬಳಕೆ ಹಾಗೂ ಒಲವು ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ನಾವು ಹುಟ್ಟಿ ಬೆಳೆದ ನೆಲದ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ದೈನಂದಿನ ಬದುಕಿನಲ್ಲಿ ಕನ್ನಡ ಮಾತನಾಡಬೇಕು. ಕನ್ನಡಪರ ಕಾರ್ಯಕ್ರಮಗಳ ಮೂಲಕ ಮುಂದಿನ ಪೀಳಿಗೆಯಲ್ಲಿ ಭಾಷಾಭಿಮಾನ ಮೂಡಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು. ಸಾಹಿತಿ ಕಿಗ್ಗಾಲು ಗಿರೀಶ್ ಮಾತನಾಡಿ, ಕನ್ನಡದ ಬಗ್ಗೆ ಮಾತನಾಡುವಾಗ ಪ್ರತಿಯೊಬ್ಬ ಕನ್ನಡಿಗನ ಎದೆಯಲ್ಲಿ ಅಭಿಮಾನದ ಬಡಿತ ಹೆಚ್ಚಾಗಬೇಕು. ಶ್ರೀಮಂತ ಇತಿಹಾಸ ಮತ್ತು ಸಾಹಿತ್ಯ ಪರಂಪರೆಯನ್ನು ಹೊಂದಿರುವ ಕನ್ನಡ ಭಾಷೆಯನ್ನು ಮಾತನಾಡಲು ಯಾರೂ ಹಿಂಜರಿಯಬಾರದು. ನಾವು ಯಾವುದೇ ಊರು, ನಗರ ಅಥವಾ ವಿದೇಶದಲ್ಲಿದ್ದರೂ ನಮ್ಮವರು ಒಂದೆಡೆ ಸೇರಿದಾಗ ಕನ್ನಡದಲ್ಲಿಯೇ ಸಂಭಾಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಭಾಷೆಯನ್ನು ಕೇವಲ ಅಭಿಮಾನದಿಂದ ಹೊಗಳುವುದಷ್ಟೇ ಅಲ್ಲ, ನಿರಂತರವಾಗಿ ಬಳಸುವ ಮೂಲಕ ಉಳಿಸಿ ಬೆಳೆಸಬೇಕು ಎಂದರು. ನಿವೃತ್ತ ಡಿವೈಎಸ್ಪಿ ಲಿಂಗಪ್ಪ ಮಾತನಾಡಿ, ಕನ್ನಡ ನಮ್ಮ ಕಲಿಕೆಯ ಮೂಲಭಾಷೆಯಾಗಿದೆ. ಮನೆಯಲ್ಲಿ ಬೇರೆ ಭಾಷೆಗಳನ್ನು ಮಾತನಾಡಬಹುದು, ಅನೇಕ ಭಾಷೆಗಳನ್ನು ಕಲಿಯಬಹುದು. ಆದರೆ ನಮ್ಮ ಅಕ್ಷರಜ್ಞಾನಕ್ಕೆ ಬುನಾದಿಯಾದ ಕನ್ನಡವನ್ನು ಎಂದಿಗೂ ಮರೆಯಬಾರದು. ತಾಯ್ನುಡಿಯ ಮಹತ್ವವನ್ನು ಅರಿತು ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ನಿವೃತ್ತ ಪ್ರಾಂಶುಪಾಲೆ ದಂಬೆಕೋಡಿ ಸುಶೀಲ ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಆಂಗ್ಲಭಾಷೆಯ ಜ್ಞಾನ ಅತ್ಯಗತ್ಯ. ವಿವಿಧ ಭಾಷೆಗಳನ್ನು ಕಲಿಯುವುದರಿಂದ ಜ್ಞಾನ ಮತ್ತು ವಿಚಾರವ್ಯಾಪ್ತಿ ಹೆಚ್ಚುತ್ತದೆ. ಆದರೆ ಇತರ ಭಾಷೆಗಳನ್ನು ಕಲಿಯುವ ಭರದಲ್ಲಿ ನಮ್ಮ ತಾಯ್ನುಡಿಯನ್ನು ಕಡೆಗಣಿಸಬಾರದು. ಕನ್ನಡ ನಮ್ಮ ಬದುಕಿನ ಭಾವನೆ, ಸಂಸ್ಕೃತಿ ಮತ್ತು ಅಸ್ಮಿತೆಯ ಭಾಗವಾಗಬೇಕು ಎಂದು ಅಭಿಪ್ರಾಯಪಟ್ಟರು. ವಿಶ್ವ ಹಿಂದೂ ಪರಿಷತ್ ನ ಪದಾಧಿಕಾರಿ ಮಹಾಬಲೇಶ್ವರ ಭಟ್ ಮಾತನಾಡಿ, ಕನ್ನಡವು ಪ್ರಾಚೀನ ಸಾಹಿತ್ಯ ಪರಂಪರೆ, ಶ್ರೀಮಂತ ಸಂಸ್ಕೃತಿ ಹಾಗೂ ವೈವಿಧ್ಯಮಯ ಅಭಿವ್ಯಕ್ತಿಯನ್ನು ಹೊಂದಿರುವ ಭಾಷೆಯಾಗಿದೆ. ಇಂತಹ ಭಾಷೆಯ ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಕನ್ನಡ ಭಾಷೆಯೊಂದಿಗೆ ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನೂ ಉಳಿಸಿ ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದರು. ತ್ರಿನೇತ್ರ ವಾಹನ ಮಾಲೀಕರು ಹಾಗೂ ಚಾಲಕರ ಸಂಘದ ಅಧ್ಯಕ್ಷ ಅಶ್ವಥ್ ರೈ ಮಾತನಾಡಿ, ಕನ್ನಡದ ಬೆಳವಣಿಗೆಗಾಗಿ ನಡೆಸುವ ಕಾರ್ಯಕ್ರಮಗಳಿಗೆ ಸದಾ ಬೆಂಬಲ ನೀಡುವುದಾಗಿ ತಿಳಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಕನ್ನಡಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕನ್ನಡ ಸೇವೆ ಸಲ್ಲಿಸುತ್ತಿರುವ ಕನ್ನಡಾಭಿಮಾನಿಗಳಾದ ದಿನೇಶ್ ಪಗ್ಗೋಲಿ ಹಾಗೂ ಧ್ವಜಸ್ತಂಭ ದಾನಿ ಉದಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಖಜಾಂಚಿ ಸೂರಜ್ ತಿಮ್ಮಯ್ಯ, ಸಂಘಟನಾ ಕಾರ್ಯದರ್ಶಿ ಕೊಂಪುಳಿರ ಮಮತಾ, ಅಬ್ದುಲ್ ಖಾದರ್, ಸಹ ಕಾರ್ಯದರ್ಶಿ ಸುಚಿತ ಕಾವೇರಪ್ಪ, ಮಠದಮನೆ ಧನಂಜಯ, ಈರಮಂಡ ವಿಜಯ್, ಪದಾಧಿಕಾರಿಗಳಾದ ಭಾರತಿ, ಸಂಧ್ಯಾ, ಡೈಸಿ, ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷ ಚಾರಿಮಂಡ ಚಂಗಪ್ಪ, ಹಿಂದೂ ಮಲಯಾಳಿ ಸಂಘದ ಕಾರ್ಯದರ್ಶಿ ಸಜೀವ್, ಸದಸ್ಯರಾದ ಮಣಿ ಚಂಗಪ್ಪ, ಟೈಲರ್ ಅಸೋಸಿಯೇಷನ್‌ನ ಶೇಕ್ ಅಹ್ಮದ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಈರ ಸುಬ್ಬಯ್ಯ, ಸದಸ್ಯರಾದ ಜಯಂತಿ, ಜಸ್ಮಿ ಚಿಂತು ಸೇರಿದಂತೆ ಪರಿಷತ್ತಿನ ಸದಸ್ಯರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು. ಪರಿಷತ್ತಿನ ಪದಾಧಿಕಾರಿಗಳಿಂದ ನಾಡಗೀತೆ ಹಾಡಲಾಯಿತು. ದಿನೇಶ್ ಪೆಗ್ಗುಲಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಕಟ್ಟೆಮನೆ ಮಹಾಲಕ್ಷ್ಮಿ ವಂದನಾರ್ಪಣೆ ಸಲ್ಲಿಸಿದರು. ಪುದಿಯೊಕ್ಕಡ ರಮ್ಯಾ ವಿಪನ್ ಕಾರ್ಯಕ್ರಮ ನಿರೂಪಿಸಿದರು.  ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.21: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ ಅವಹೇಳನಕಾರಿ ಹಾಗೂ ಅವಾಚ್ಯ…

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಅರಪಟ್ಟು ಗ್ರಾಮದ ದೇವರ ಕಾಡಿನಲ್ಲಿ ಶ್ರೀ ಅಯ್ಯಪ್ಪ ದೇವರ ವಾರ್ಷಿಕ ಮಹಾಪೂಜೆ

ನವೆಂಬರ್ 21, 2026

ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರಾಮನಗರ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ

ನವೆಂಬರ್ 21, 2026

ಸಂಸ್ಕೃತಿಯ ಜೊತೆಗೆ ವಚನಕಾರರ ಮೌಲ್ಯಗಳನ್ನು ಅರಿಯಿರಿ: ಪ್ರೊ. ಭಾರತಿ ಹಿರೇಮಠ್; ವಚನಗಳಲ್ಲಿ ಕಾಯಕ ಪ್ರಜ್ಞೆ ವಿಚಾರ ಸಂಕಿರಣ ಉದ್ಘಾಟನೆ

ನವೆಂಬರ್ 21, 2026

ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ

ನವೆಂಬರ್ 21, 2026

ನ.24ರಂದು ಗೋಣಿಕೊಪ್ಪಲಿನಲ್ಲಿ ವಿಕಲಚೇತನರ ಜಾಥಾ, ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆ

ನವೆಂಬರ್ 21, 2026

ನ.24ರಂದು ಭಾಗಮಂಡಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನವೆಂಬರ್ 21, 2026

ನ.21ರಂದು 71ನೇ ಕನ್ನಡ ರಾಜ್ಯೋತ್ಸವ–ಕನ್ನಡ ಹಬ್ಬ ಕಾರ್ಯಕ್ರಮ

ನವೆಂಬರ್ 21, 2026

ನ.23ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

ನವೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.