Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.2: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಹಾಗೂ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಅವರು ಸೋಮವಾರ ಚಾಲನೆ ನೀಡಿದರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಪತ್ರಕರ್ತರು ರಾಜಕಾರಣಿಗಳಿಗೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡುವವರು. ಅದೇ ರೀತಿ ಕ್ರೀಡಾಕೂಟದಲ್ಲಿಯೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಪತ್ರಕರ್ತರು ಪ್ರತಿನಿತ್ಯ ಸುದ್ದಿಗಳ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅದರ ಜೊತೆಗೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದು ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ. ಪತ್ರಕರ್ತರು ವೃತ್ತಿಪರ ಕ್ರೀಡಾಪಟುಗಳಿಗಿಂತಲೂ ಉತ್ತಮವಾಗಿ ಕ್ರಿಕೆಟ್ ಆಡುತ್ತಿರುವುದನ್ನು ಗಮನಿಸಿದ್ದು, ಅವರ ಕ್ರೀಡಾಸಕ್ತಿ ವಿಶೇಷವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದ 23 ಜಿಲ್ಲೆಗಳಿಂದ 24 ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವುದು ಹಬ್ಬದ ವಾತಾವರಣವನ್ನು ಸೃಷ್ಟಿಸಿದ್ದು, ಭಾವನಾತ್ಮಕ ಸಂತಸವನ್ನು ತಂದಿದೆ. ವಿವಿಧ ಜಿಲ್ಲೆಗಳಿಂದ ಪತ್ರಕರ್ತರು ಕೊಡಗಿಗೆ ಆಗಮಿಸಿ ಒಗ್ಗಟ್ಟಿನಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಶ್ಲಾಘನೀಯ. ಇಂತಹ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸಿರುವ ಸಂಘಟಕರ ಕಾರ್ಯ ಮೆಚ್ಚುವಂತದ್ದು ಎಂದರು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಕ್ರೀಡಾಕೂಟದಲ್ಲಿ ಸೋಲು-ಗೆಲುವು ಸಹಜ. ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿದ್ದು, ಯಾರೂ ಲಕ್ಷ್ಮಣ ರೇಖೆ ದಾಟಬಾರದು ಎಂದು ಸಲಹೆ ನೀಡಿದರು. ಕ್ರೀಡಾಕೂಟದ ಆಯೋಜನೆಯಲ್ಲಿ ಹಲವರ ಪರಿಶ್ರಮವಿದ್ದು, ಇಂತಹ ಕ್ರೀಡಾ ಉತ್ಸವದ ಮೌಲ್ಯವನ್ನು ಅಳೆಯಲು ಸಾಧ್ಯವಿಲ್ಲ ಎಂದರು. ಕ್ರೀಡಾಕೂಟಕ್ಕೆ ಹಲವು ಪ್ರಾಯೋಜಕರು ಸಹಕಾರ ನೀಡಿದ್ದಾರೆ. ಮುಂದಿನ ಬಾರಿ ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ ಕಾರ್ಯನಿರತ ಪತ್ರಕರ್ತರ ಕ್ರೀಡಾಕೂಟ ನಡೆಯಲಿದೆ ಎಂದು ಪ್ರಕಟಿಸಿದರು.

ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಕ್ಷೇತ್ರ ನಾಲ್ಕನೇ ಅಂಗವಾಗಿದೆ. ಪತ್ರಕರ್ತರು ಕ್ರಿಕೆಟ್ ಮಾತ್ರವಲ್ಲದೆ ಇತರ ಕ್ರೀಡೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಪತ್ರಕರ್ತರು ಕೊಡಗಿನ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ವಿಶೇಷ ಲೇಖನಗಳನ್ನು ಬರೆಯಬೇಕು ಎಂದು ಸಲಹೆ ನೀಡಿದರು.

ಹೈಕೋರ್ಟ್ ಹಿರಿಯ ವಕೀಲ ಚಂದ್ರಮೌಳಿ ಮಾತನಾಡಿ, ಕೊಡಗು ಜಿಲ್ಲೆ ಕ್ರೀಡಾ ಕ್ಷೇತ್ರದಲ್ಲಿ ತನ್ನದೇ ಆದ ಹೆಸರನ್ನು ಹೊಂದಿದೆ. ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಪತ್ರಕರ್ತರು ಇಲ್ಲಿನ ಸವಿನೆನಪುಗಳನ್ನು ಹೊತ್ತುಕೊಂಡು ತೆರಳಬೇಕು ಎಂದರು.

ರಾಜ್ಯ ನಿರ್ದೇಶಕ ಎನ್. ರವಿಕುಮಾರ್ ಟೆಲಕ್ಸ್ ಮಾತನಾಡಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ 12 ಸಾವಿರಕ್ಕೂ ಅಧಿಕ ಪತ್ರಕರ್ತರು ಸದಸ್ಯತ್ವ ಹೊಂದಿದ್ದು, ಕ್ರೀಡೆ, ಸಾಂಸ್ಕೃತಿಕ ಹಾಗೂ ಮಾಧ್ಯಮ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನುಕಾರ್ಯಪ್ಪ ಮಾತನಾಡಿ, ರಾಜ್ಯದ 23 ಜಿಲ್ಲೆಗಳಿಂದ 24 ತಂಡಗಳು ಭಾಗವಹಿಸಿರುವುದು ವಿಶೇಷವಾಗಿದೆ. ಸಂಘವು ಸಭೆ, ಸಮಾರಂಭ ಹಾಗೂ ಸಮಾವೇಶಗಳನ್ನು ಆಯೋಜಿಸುತ್ತಿದ್ದು, ಕ್ರೀಡಾಕೂಟದ ಆಯೋಜನೆ ವಿಭಿನ್ನ ಅನುಭವವಾಗಿದೆ. ಪತ್ರಕರ್ತರು ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಭೇಟಿ ನೀಡಿ ಪರಸ್ಪರ ಬಾಂಧವ್ಯ ಬೆಳೆಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರಿಪಬ್ಲಿಕ್ ನೆಟ್‌ವರ್ಕ್ ಅಧ್ಯಕ್ಷ ಚೇರಂಡ ಕಿಶನ್ ಮಾದಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಬಿ. ಭಾರತೀಶ್, ರಾಜ್ಯ ನಿರ್ದೇಶಕಿ ಬಿ.ಆರ್. ಸವಿತಾ ರೈ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಿ. ಲೋಕೇಶ್, ಉಪಾಧ್ಯಕ್ಷ ಮತ್ತಿಕರೆ ಜಯರಾಮ್, ಕಾರ್ಯದರ್ಶಿಗಳಾದ ಸೋಮಶೇಖರ ಕೆರೆಗೋಡು, ಪುಂಡಲೀಕ ಬಿ. ಬಾಳೋಜಿ, ನಿಂಗಪ್ಪ ಚಾವಡಿ, ಖಜಾಂಚಿ ವಾಸುದೇವ ಹೊಳ್ಳ, ಭವಾನಿಸಿಂಗ್, ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ, ಕ್ರೀಡಾ ಸಮಿತಿ ಸಂಚಾಲಕ ಸಂತೋಷ್ ರೈ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ತಹಶೀಲ್ದಾರ್ ಶ್ರೀಧರ ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರು, ನಿರ್ದೇಶಕರು, ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿರಾಜಪೇಟೆಯ ಇಂಟೋಪೀಸ್ ಸಂಸ್ಥೆಯ ವಿದ್ಯಾರ್ಥಿಗಳು ಕೊಡವ ಸಾಂಪ್ರದಾಯಿಕ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಜೆ. ರಾಕೇಶ್ ಸ್ವಾಗತಿಸಿದರು. ವಿರಾಜಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ರಜಿತ್ ಕುಮಾರ್ ಗುಹ್ಯ ನಿರೂಪಿಸಿದರು. ವಿಷ್ಮ ಪೆಮ್ಮಯ್ಯ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.2: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನೂತನ ತಹಶೀಲ್ದಾರರಾಗಿ ಅಧಿಕಾರ ಸ್ವೀಕರಿಸಿದ ರಮೇಶ್ ಬಾಬು ಅವರನ್ನು…

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026

ಭರತನಾಟ್ಯ ಜೂನಿಯರ್ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಕು. ಖುಷಿಗೆ ಉನ್ನತ ಶ್ರೇಣಿ

ನವೆಂಬರ್ 2, 2026

ಹೆಬ್ಬಾಲೆ ವ್ಯಾಪ್ತಿಯ ವೀರಶೈವ ಲಿಂಗಾಯತ ಸಮಾಜದ ಸಭೆ: ನೂತನ ಬಸವ ಸಮಿತಿ ರಚನೆ, ಮೋಹನ್ ಹಕ್ಕೆ ನಂಜಪ್ಪ ಅಧ್ಯಕ್ಷರಾಗಿ ಆಯ್ಕೆ

ನವೆಂಬರ್ 2, 2026

ವಿಶ್ವದಾದ್ಯಂತ ಕನ್ನಡ ಭಾಷೆ ಪ್ರಸಾರದಲ್ಲಿ ಯುವಜನತೆಯ ಪಾತ್ರ ಅಪಾರ: ಸಿದ್ದಪ್ಪ ಹೆಳವರಹುಂಡಿ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.