Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ ನ.2 NEWS DESK : ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಯನ್ನು ಸಕಾಲದಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಸುರಕ್ಷಿತ ಹೆರಿಗೆಗೆ ನೆರವಾದ ‘ರಾಣಿ’ ಖಾಸಗಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರ ಮಾನವೀಯ ಕಾರ್ಯವನ್ನು ಶ್ಲಾಘಿಸಿ, ಕೊಡಗು ಜಿಲ್ಲಾ ಖಾಸಗಿ ಬಸ್ ಕಾರ್ಮಿಕರ ಮತ್ತು ಮಾಲೀಕರ ಸಂಘದ ವಿರಾಜಪೇಟೆ ಘಟಕದ ವತಿಯಿಂದ ಸನ್ಮಾನಿಸಲಾಯಿತು. ಮೂರು ದಿನಗಳ ಹಿಂದೆ ಮಡಿಕೇರಿಯಿಂದ ಗೋಣಿಕೊಪ್ಪಕ್ಕೆ ತೆರಳುತ್ತಿದ್ದ ‘ರಾಣಿ’ ಖಾಸಗಿ ಬಸ್ಸಿಗೆ ಅಸ್ಸಾಂ ಮೂಲದ ಗರ್ಭಿಣಿ ಕಾರ್ಮಿಕ ಮಹಿಳೆಯೊಬ್ಬರು ಮಡಿಕೇರಿ ಟೋಲ್‌ಗೇಟ್‌ನಲ್ಲಿ ಹತ್ತಿದ್ದರು. ಬಸ್ಸು ವಿರಾಜಪೇಟೆ ಮಾರ್ಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಮಹಿಳೆಗೆ ದಿಢೀರನೆ ತೀವ್ರ ಪ್ರಸವ ವೇದನೆ ಕಾಣಿಸಿಕೊಂಡಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ರಾಕೇಶ್ ಹಾಗೂ ನಿರ್ವಾಹಕ ಕಿಶನ್ ತಕ್ಷಣ ಮಹಿಳೆಗೆ ಅಗತ್ಯ ನೆರವು ನೀಡಿ, ಸಮಯಪ್ರಜ್ಞೆ ಮೆರೆದಿದ್ದಾರೆ. ಬಳಿಕ ಬಸ್ಸನ್ನು ನೇರವಾಗಿ ವಿರಾಜಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆಯಾಗಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. :: ಸೇವಾ ಮನೋಭಾವಕ್ಕೆ ಗೌರವ ::  ಬಸ್ ಸಿಬ್ಬಂದಿಯ ಸಾಮಾಜಿಕ ಬದ್ಧತೆ, ಸೇವಾ ಮನೋಭಾವ ಹಾಗೂ ಮಾನವೀಯ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ ಕೊಡಗು ಜಿಲ್ಲಾ ಖಾಸಗಿ ಬಸ್ ಕಾರ್ಮಿಕರ ಮತ್ತು ಮಾಲೀಕರ ಸಂಘವು ಚಾಲಕ ರಾಕೇಶ್ ಹಾಗೂ ನಿರ್ವಾಹಕ ಕಿಶನ್ ಅವರನ್ನು ಸಂಘದ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿತು. ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಜೂಡಿ ವಾಜ್, “ಚಾಲಕ ರಾಕೇಶ್ ಮತ್ತು ನಿರ್ವಾಹಕ ಕಿಶನ್ ಅವರ ಸಮಯಪ್ರಜ್ಞೆ ಹಾಗೂ ಮಾನವೀಯ ಕಾಳಜಿ ನಿಜಕ್ಕೂ ಶ್ಲಾಘನೀಯ. ಪ್ರಯಾಣಿಕರ ಸುರಕ್ಷತೆಯ ಜೊತೆಗೆ ತುರ್ತು ಸಂದರ್ಭದಲ್ಲಿ ತೋರಿದ ಸ್ಪಂದನೆ ಇಡೀ ಸಂಘಕ್ಕೆ ಹೆಮ್ಮೆ ತಂದಿದೆ,” ಎಂದರು. ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ನಾಯರ್ ಮಾತನಾಡಿ, “ಬಸ್ ಸಿಬ್ಬಂದಿ ತಮ್ಮ ಕರ್ತವ್ಯಕ್ಕೆ ಮಾತ್ರ ಸೀಮಿತವಾಗದೆ, ಸಮಾಜಕ್ಕೆ ಮಾದರಿಯಾಗುವ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಅವರ ಸೇವಾ ಮನೋಭಾವವನ್ನು ಗುರುತಿಸಿ ಗೌರವಿಸುವುದು ಸಂಘದ ಕರ್ತವ್ಯವಾಗಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಮಹೇಶ್ ಮತ್ತು ಅಜಯ್ ಹಾಗೂ ಕೋಶಾಧಿಕಾರಿ ವಿನಂತು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ನ.2 NEWS DESK : ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಯನ್ನು ಸಕಾಲದಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಸುರಕ್ಷಿತ…

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026

ಭರತನಾಟ್ಯ ಜೂನಿಯರ್ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಕು. ಖುಷಿಗೆ ಉನ್ನತ ಶ್ರೇಣಿ

ನವೆಂಬರ್ 2, 2026

ಹೆಬ್ಬಾಲೆ ವ್ಯಾಪ್ತಿಯ ವೀರಶೈವ ಲಿಂಗಾಯತ ಸಮಾಜದ ಸಭೆ: ನೂತನ ಬಸವ ಸಮಿತಿ ರಚನೆ, ಮೋಹನ್ ಹಕ್ಕೆ ನಂಜಪ್ಪ ಅಧ್ಯಕ್ಷರಾಗಿ ಆಯ್ಕೆ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.