ಸೋಮವಾರಪೇಟೆ, NEWS DESK ನ.3: ಕೊಡಗು ಜಿಲ್ಲಾ ಅಹಿಂದ ಬಳಗದ ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರನ್ನು ಅವರ ಸ್ವಗೃಹದಲ್ಲಿ ಭೇಟಿಯಾಗಿ ಸನ್ಮಾನಿಸಲಾಯಿತು.
ಕೊಡಗು ಜಿಲ್ಲಾ ಅಹಿಂದ ಬಳಗದ ಜಿಲ್ಲಾಧ್ಯಕ್ಷರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ನಾಪಂಡ ಮುತ್ತಪ್ಪ ಅವರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳು ಶಾಸಕರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಂಘಟನೆಯ ಬೆಳವಣಿಗೆ ಹಾಗೂ ಬಲವರ್ಧನೆ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.
ಸಂಘಟನೆಯ ಕಾರ್ಯಚಟುವಟಿಕೆಗಳಿಗೆ ಅಗತ್ಯ ಸಹಕಾರ ನೀಡುವ ಭರವಸೆಯನ್ನು ಶಾಸಕ ಡಾ. ಮಂತರ್ ಗೌಡ ಅವರು ನೀಡಿದರು. ಅಲ್ಲದೆ, ಸಂಘಟನೆಯ ಮುಂದಿನ ಕಾರ್ಯಗಳಿಗೆ ಶುಭ ಹಾರೈಸಿದರು.

















