ನಾಪೋಕ್ಲು, NEWS DESK ನ.4: ಹಾಸನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ವಿಭಾಗ ಮಟ್ಟದ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಜಿಲ್ಲೆಯ ವಿವಿಧ ಶಾಲೆಗಳಿಂದ ಆಯ್ಕೆಯಾದ ಕ್ರೀಡಾಪಟುಗಳ ಪೈಕಿ ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಜೆನಿತ್ ಬಿ.ಪಿ., ಮೊಹಮ್ಮದ್ ಆಸಿರ್ ಹಾಗೂ ಮೊಹಮ್ಮದ್ ನಸೀಲ್ ಅವರು ತಮ್ಮ ಕ್ರೀಡಾ ಪ್ರತಿಭೆಯನ್ನು ಮೆರೆದಿದ್ದಾರೆ. ಈ ಮೂವರು ಉದಯೋನ್ಮುಖ ಆಟಗಾರರು ಮುಂಬರುವ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

















