Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುಂಟಿಕೊಪ್ಪದಲ್ಲಿ ಸಮಸ್ಯೆಗಳ ಸರಮಾಲೆ: ವೇವ್ ಸಂಸ್ಥೆ ಅಸಮಾಧಾನ; ತ್ಯಾಜ್ಯ ವಿಲೇವಾರಿ, ಹದಗೆಟ್ಟ ರಸ್ತೆಗಳು, ವೈದ್ಯರ ಕೊರತೆಗೆ ಆಕ್ರೋಶ – ಸಮಸ್ಯೆ ಪರಿಹಾರವಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪದಲ್ಲಿ ಸಮಸ್ಯೆಗಳ ಸರಮಾಲೆ: ವೇವ್ ಸಂಸ್ಥೆ ಅಸಮಾಧಾನ; ತ್ಯಾಜ್ಯ ವಿಲೇವಾರಿ, ಹದಗೆಟ್ಟ ರಸ್ತೆಗಳು, ವೈದ್ಯರ ಕೊರತೆಗೆ ಆಕ್ರೋಶ – ಸಮಸ್ಯೆ ಪರಿಹಾರವಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ

ನವೆಂಬರ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.5: ಸುಂಟಿಕೊಪ್ಪ ಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ವೇವ್ ಸಂಸ್ಥೆಯ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆಗಳ ದುಸ್ಥಿತಿ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಖಾಯಂ ವೈದ್ಯರ ಕೊರತೆ ಸೇರಿದಂತೆ ಹಲವು ಸಮಸ್ಯೆಗಳು ಜನರನ್ನು ಕಾಡುತ್ತಿವೆ ಎಂದು ವೇವ್ ಸಂಸ್ಥೆಯ ಅಧ್ಯಕ್ಷ ಇಬ್ರಾಹಿಂ ಆರೋಪಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಳೆಕಾಡು ಪ್ರದೇಶದಲ್ಲಿ ಕಸ ತುಂಬಿ ತುಳುಕುತ್ತಿದ್ದರೂ ಗ್ರಾಮ ಪಂಚಾಯಿತಿ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಕಸ ಸಂಗ್ರಹಕ್ಕೆ ಕೇವಲ ಒಂದು ಟ್ರ್ಯಾಕ್ಟರ್ ಬಳಸಲಾಗುತ್ತಿದ್ದು, ವಾರದಲ್ಲಿ ಎರಡು-ಮೂರು ದಿನ ಮಾತ್ರ ಕೆಲವೆಡೆ ಕಸ ಸಂಗ್ರಹಿಸಲಾಗುತ್ತಿದೆ. ಉಳಿದ ಬಡಾವಣೆಗಳಲ್ಲಿ ಸಮರ್ಪಕ ಕಸ ಸಂಗ್ರಹ ವ್ಯವಸ್ಥೆಯೇ ಇಲ್ಲವಾಗಿದೆ ಎಂದು ದೂರಿದರು.

ಹಿಂದೆ ಮನೆಮನೆಗಳಿಗೆ ಹಸಿ ಮತ್ತು ಒಣ ಕಸ ಸಂಗ್ರಹಿಸಲು ಪ್ರತ್ಯೇಕ ಬಕೆಟ್‌ಗಳನ್ನು ವಿತರಿಸಲಾಗಿತ್ತು. ಆದರೆ ಈ ಯೋಜನೆ ಸ್ಥಗಿತಗೊಂಡಿದೆ. ಸಂಗ್ರಹಿಸಿದ ಕಸವನ್ನು ಪನ್ಯ ಗ್ರಾಮದ ಬಳಿಯ ಎರಡು ಎಕರೆ ಜಾಗದಲ್ಲಿ ಅವೈಜ್ಞಾನಿಕವಾಗಿ ಸುರಿಯಲಾಗುತ್ತಿದ್ದು, ಇದರಿಂದ ಬೀದಿನಾಯಿಗಳ ಹಾವಳಿಯೂ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಂಟೈನರ್ ಫ್ರೀ ಯೋಜನೆಯಡಿ ಪಟ್ಟಣದಲ್ಲಿದ್ದ ಕಸದ ತೊಟ್ಟಿಗಳನ್ನು ತೆರವುಗೊಳಿಸಲಾಗಿದೆ. ಆದರೆ ಮನೆಮನೆಗಳಿಂದ ಕಸ ಸಂಗ್ರಹಿಸುವ ವ್ಯವಸ್ಥೆಯನ್ನು ಪಂಚಾಯಿತಿ ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ. ಪಂಚಾಯಿತಿಯಲ್ಲಿ ಚುನಾಯಿತ ಆಡಳಿತ ಮಂಡಳಿ ಇಲ್ಲದಿರುವುದರಿಂದ ಅಧಿಕಾರಿಗಳ ಗಮನಕ್ಕೆ ಸಮಸ್ಯೆ ತಂದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುಂಟಿಕೊಪ್ಪ ಪಟ್ಟಣದ ಬಹುತೇಕ ರಸ್ತೆಗಳು ಹದಗೆಟ್ಟಿದ್ದು, ಉಲುಗುಲಿ ರಸ್ತೆಯಲ್ಲಿ ದೊಡ್ಡ ಹೊಂಡಗಳು ನಿರ್ಮಾಣವಾಗಿವೆ. ಕನಿಷ್ಠ ಹೊಂಡಗಳನ್ನು ಮುಚ್ಚಿ ರಸ್ತೆ ದುರಸ್ತಿ ಮಾಡುವ ಕಾರ್ಯಕ್ಕೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸುತ್ತಿಲ್ಲ ಎಂದು ಆರೋಪಿಸಿದರು.

ಸುಂಟಿಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಖಾಯಂ ವೈದ್ಯರ ಕೊರತೆ ಕಾಡುತ್ತಿದ್ದು, ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಕೆದಕಲ್ ಆರೋಗ್ಯ ಕೇಂದ್ರದಲ್ಲಿಯೂ ಅಗತ್ಯ ಸೌಲಭ್ಯಗಳ ಕೊರತೆ ಇದೆ ಎಂದು ತಿಳಿಸಿದರು.

ಇದಲ್ಲದೆ, ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸುವ ಅಗತ್ಯವಿದೆ. ಹಳೆಯ ಮಾರುಕಟ್ಟೆ ಪ್ರದೇಶದಲ್ಲಿ ಬಸ್ ನಿಲ್ದಾಣ ನಿರ್ಮಿಸಿ ಮಾರುಕಟ್ಟೆಯನ್ನು ಸ್ಥಳಾಂತರಿಸುವ ಯೋಜನೆ ರೂಪಿಸಲಾಗಿದ್ದರೂ, ಅದರ ಅನುಷ್ಠಾನಕ್ಕೆ ಅಧಿಕಾರಿಗಳು ಆಸಕ್ತಿ ತೋರುತ್ತಿಲ್ಲ ಎಂದು ಇಬ್ರಾಹಿಂ ಅಸಮಾಧಾನ ವ್ಯಕ್ತಪಡಿಸಿದರು.

ಸುಂಟಿಕೊಪ್ಪ ವ್ಯಾಪ್ತಿಯ ಎಲ್ಲಾ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ವೇವ್ ಸಂಸ್ಥೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವೇವ್ ಸಂಘಟನೆಯ ಕೆದಕಲ್ ವಿಭಾಗದ ಅಧ್ಯಕ್ಷ ಬಿ.ಆರ್. ಸಂತೋಷ್, ಸಂಚಾಲಕ ಕೆ.ಎ. ಲತೀಫ್ ಹಾಗೂ ಫರಾಜ್ ಉಸ್ಮಾನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಿಲ್ಲಾಡಳಿತ ಮನವಿ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ; ಹಸಿರು ಪಟಾಕಿಗಳ ಬಳಕೆ ಕಡ್ಡಾಯ

ನವೆಂಬರ್ 5, 2026

ಮಡಿಕೇರಿಯಲ್ಲಿ ಗಮನ ಸೆಳೆದ ಕಲಾ ಪ್ರತಿಭೋತ್ಸವ; ಸಾಂಸ್ಕೃತಿಕ ಶ್ರೀಮಂತಿಕೆ ಕೊಡಗಿನ ಹೆಗ್ಗಳಿಕೆ: ಟಿ.ಪಿ.ರಮೇಶ್

ನವೆಂಬರ್ 5, 2026

ವನ್ಯಜೀವಿ ಹೆಜ್ಜೆ ಗುರುತು ಪತ್ತೆ

ನವೆಂಬರ್ 5, 2026

ಮಡಿಕೇರಿಯಲ್ಲಿ ಗಮನ ಸೆಳೆದ ಕಲಾ ಪ್ರತಿಭೋತ್ಸವ; ಸಾಂಸ್ಕೃತಿಕ ಶ್ರೀಮಂತಿಕೆ ಕೊಡಗಿನ ಹೆಗ್ಗಳಿಕೆ: ಟಿ.ಪಿ.ರಮೇಶ್

ನವೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.5: ಕೊಡಗು ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿರುವ ಜಿಲ್ಲೆಯಾಗಿದ್ದು, ಇಲ್ಲಿನ ಜನರ ಸಂಸ್ಕೃತಿ, ಜೀವನಶೈಲಿ ಹಾಗೂ ಆಚಾರ-ವಿಚಾರಗಳು…

ವನ್ಯಜೀವಿ ಹೆಜ್ಜೆ ಗುರುತು ಪತ್ತೆ

ನವೆಂಬರ್ 5, 2026

ರಾಜ್ಯ ಸರ್ಕಾರದಿಂದ ಬೆಲೆ ಏರಿಕೆಯ ಬರೆ: ಜನಸಾಮಾನ್ಯರು ಸಂಕಷ್ಟದಲ್ಲಿ – ರಾಷ್ಟ್ರಪತಿ ಆಳ್ವಿಕೆಗೆ ಕೊಡಗು ಬಿಜೆಪಿ ಎಸ್‌ಟಿ ಮೋರ್ಚಾ ಆಗ್ರಹ

ನವೆಂಬರ್ 5, 2026

ಸುಂಟಿಕೊಪ್ಪದಲ್ಲಿ ದಿವಂಗತ ಬಿ.ಜಿ. ರಘುನಾಥ್ ನಾಯ್ಕ ಸ್ಮಾರಕ ದತ್ತಿ ನಿಧಿ ಕಾರ್ಯಕ್ರಮ

ನವೆಂಬರ್ 5, 2026

ಸುಂಟಿಕೊಪ್ಪದಲ್ಲಿ ಸಮಸ್ಯೆಗಳ ಸರಮಾಲೆ: ವೇವ್ ಸಂಸ್ಥೆ ಅಸಮಾಧಾನ; ತ್ಯಾಜ್ಯ ವಿಲೇವಾರಿ, ಹದಗೆಟ್ಟ ರಸ್ತೆಗಳು, ವೈದ್ಯರ ಕೊರತೆಗೆ ಆಕ್ರೋಶ – ಸಮಸ್ಯೆ ಪರಿಹಾರವಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ

ನವೆಂಬರ್ 5, 2026

ಐದು ದಶಕಗಳ ಭತ್ತದ ಕೃಷಿ ಅನುಭವಕ್ಕೂ ಈ ಬಾರಿ ಕೈಕೊಟ್ಟ ಫಸಲು; ಆರ್‌ಎನ್‌ಆರ್ ಭತ್ತದ ತಳಿಯ ಇಳುವರಿ ಕುಸಿತ: ರೈತ ಪಟ್ಟೆಮನೆ ಉದಯಕುಮಾರ್ ಅಳಲು

ನವೆಂಬರ್ 5, 2026

ಪನ್ಯ ತೋಟದಲ್ಲಿ ಹುಲಿ ಅಥವಾ ಚಿರತೆ ಹೆಜ್ಜೆ ಗುರುತು ಪತ್ತೆ : ಸಾರ್ವಜನಿಕರಲ್ಲಿ ಆತಂಕ

ನವೆಂಬರ್ 5, 2026

ಮಡಿಕೇರಿ ಲಯನ್ಸ್ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವದ ಅಮೃತ ಮಹೋತ್ಸವ ಆಚರಣೆ; ಕೃತಕ ಬುದ್ಧಿಮತ್ತೆಯ ವ್ಯವಸ್ಥೆ ನಮಗೇ ಬುದ್ಧಿ ಕಲಿಸುವಂತಾಗಿದೆ: ಅನಿಲ್ ಹೆಚ್.ಟಿ. ಆತಂಕ

ನವೆಂಬರ್ 5, 2026

ಕುಶಾಲನಗರ ‘ಕೂಡಾ’ ನೂತನ ಸದಸ್ಯ ಕಾರ್ಯದರ್ಶಿಯಾಗಿ ಪಿ.ವಿ.ದೀಪಕ್ ಅಧಿಕಾರ ಸ್ವೀಕಾರ

ನವೆಂಬರ್ 5, 2026

ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.