ಸುಂಟಿಕೊಪ್ಪ, NEWS DESK ನ.5: ಸುಂಟಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿವಂಗತ ಬಿ.ಜಿ. ರಘುನಾಥ್ ನಾಯ್ಕ ಸ್ಮಾರಕ ದತ್ತಿ ನಿಧಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೆಬಾಸ್ಟಿನ್ ಅವರು ಮಾತನಾಡಿ, ಸಾಹಿತಿ ರಘುನಾಥ್ ನಾಯ್ಕ ಅವರ ಸಾಹಿತ್ಯಾಭಿಮಾನ ಹಾಗೂ ಸಮಾಜಸೇವೆಯನ್ನು ಸ್ಮರಿಸಿದರು. ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅವರು ಸಲ್ಲಿಸಿದ ಸೇವೆಗಳನ್ನು ಮೆಲುಕು ಹಾಕಿದರು.
ಉದಯೋನ್ಮುಖ ಸಾಹಿತಿ ಹಾಗೂ ಶಾಲಾ ಶಿಕ್ಷಕ ಸತೀಶ್ ಕಾಜೂರು ಅವರು ಕನ್ನಡ ಭಾಷೆ ಮತ್ತು ಸಾಹಿತ್ಯದ ಮಹತ್ವದ ಕುರಿತು ಮಾತನಾಡಿದರು.
ಸಮಾರಂಭದ ವೇದಿಕೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ನಂದಕುಮಾರ್, ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಲೀಲಾ ಮೇದಪ್ಪ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶಾಂತಾ ಹೆಗ್ಡೆ, ಶಿಕ್ಷಕರಾದ ಪ್ರಕಾಶ್, ಚಿತ್ರಾ, ಉಷಾ, ಅನುಷಾ, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ದಿನೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

















