Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಗಮನ ಸೆಳೆದ ಕಲಾ ಪ್ರತಿಭೋತ್ಸವ; ಸಾಂಸ್ಕೃತಿಕ ಶ್ರೀಮಂತಿಕೆ ಕೊಡಗಿನ ಹೆಗ್ಗಳಿಕೆ: ಟಿ.ಪಿ.ರಮೇಶ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಗಮನ ಸೆಳೆದ ಕಲಾ ಪ್ರತಿಭೋತ್ಸವ; ಸಾಂಸ್ಕೃತಿಕ ಶ್ರೀಮಂತಿಕೆ ಕೊಡಗಿನ ಹೆಗ್ಗಳಿಕೆ: ಟಿ.ಪಿ.ರಮೇಶ್

ನವೆಂಬರ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.5: ಕೊಡಗು ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿರುವ ಜಿಲ್ಲೆಯಾಗಿದ್ದು, ಇಲ್ಲಿನ ಜನರ ಸಂಸ್ಕೃತಿ, ಜೀವನಶೈಲಿ ಹಾಗೂ ಆಚಾರ-ವಿಚಾರಗಳು ವಿಶಿಷ್ಟವಾಗಿವೆ. ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆ ಇಂದಿಗೂ ಜೀವಂತವಾಗಿದ್ದು, ಜನರ ಸ್ನೇಹಪರ ಬದುಕು ಜಿಲ್ಲೆಯ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು.

ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿಗಳ ಸಹಯೋಗದಲ್ಲಿ ಆಯೋಜಿಸಿದ್ದ ಕಲಾ ಪ್ರತಿಭೋತ್ಸವ-2026 ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪರ್ಧೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ. ವಿದ್ಯಾರ್ಥಿಗಳು ಯಾವುದೇ ಸ್ಪರ್ಧೆಯಿಂದ ಹಿಂದೆ ಸರಿಯದೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಪ್ರತಿಭಾವಂತರನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಪ್ರೋತ್ಸಾಹಿಸುವ ಕಾರ್ಯವನ್ನು ಇಲಾಖೆಗಳು ಮಾಡುತ್ತಿವೆ ಎಂದರು.

ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತರಿದ್ದು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವುದರೊಂದಿಗೆ ರಾಜ್ಯಮಟ್ಟದಲ್ಲಿಯೂ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ ರಾಯಕೋಡ್ ಮಾತನಾಡಿ, ಕಲೆ ಮನಸ್ಸಿನ ಅಭಿವ್ಯಕ್ತಿಗೆ ರೂಪ ನೀಡುವುದರೊಂದಿಗೆ ನಮ್ಮ ಸಂಸ್ಕೃತಿಯನ್ನು ಅನಾವರಣಗೊಳಿಸುತ್ತದೆ. ಮನುಷ್ಯನ ಜೀವನದಲ್ಲಿ ಭೌತಿಕ ಮತ್ತು ಬೌದ್ಧಿಕ ಬೆಳವಣಿಗೆಯಷ್ಟೇ ಭಾವನಾತ್ಮಕ ಬೆಳವಣಿಗೆಯೂ ಪ್ರಮುಖವಾಗಿದೆ ಎಂದು ಹೇಳಿದರು.

ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಕ್ಕಳನ್ನು ಉತ್ತಮ ರೀತಿಯಲ್ಲಿ ಬೆಳೆಸುವುದು ಸವಾಲಿನ ಕೆಲಸವಾಗಿದೆ. ಮಕ್ಕಳು ತಮ್ಮ ಜೀವನವನ್ನು ಸಾರ್ಥಕವಾಗಿ ರೂಪಿಸಿಕೊಳ್ಳಲು ಸಂಸ್ಕಾರದ ಅಗತ್ಯವಿದೆ. ಸಂಸ್ಕೃತಿಯ ಮೂಲಾಧಾರ ಸಂಸ್ಕಾರವಾಗಿದ್ದು, ಅದರ ಬೆಳವಣಿಗೆಯಲ್ಲಿ ಕಲೆ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪೋಷಿಸುವುದರೊಂದಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು. ‘ಕಲೆಯಲ್ಲಿ ಅರಳೋಣ, ಕಲೆಯಲ್ಲಿ ಬೆಳೆಯೋಣ’ ಎಂಬ ಆಶಯದೊಂದಿಗೆ ಮುನ್ನಡೆಯಬೇಕು ಎಂದು ಕರೆ ನೀಡಿದರು.

ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಮಾಡುವ ಕೆಲಸದಲ್ಲಿ ತನ್ಮಯತೆ ಇದ್ದರೆ ತನ್ನಿಂದ ತಾನೇ ಹಾಡುಗಳು ಹುಟ್ಟಿಕೊಳ್ಳುತ್ತವೆ. ಜೀವನದಲ್ಲಿ ಗೆಲುವು ಮುಖ್ಯವಾದರೂ, ಸೋಲಿನಿಂದ ಪಾಠ ಕಲಿತು ಮುನ್ನಡೆಯುವುದೇ ನಿಜವಾದ ಯಶಸ್ಸು ಎಂದು ಹೇಳಿದರು.

ರೋಟರಿ ಮಿಸ್ಟಿ ಹಿಲ್ಸ್ ನಿರ್ದೇಶಕ ಅನಿಲ್ ಎಚ್.ಟಿ. ಮಾತನಾಡಿ, ಜೆನ್‌ಜಿ ಪೀಳಿಗೆಗೆ ಆಧುನಿಕ ಮಾಧ್ಯಮಗಳು ಕೈಬೆರಳಿನಲ್ಲಿಯೇ ಲಭ್ಯವಿವೆ. ಹೀಗಾಗಿ ಯುವ ಪೀಳಿಗೆಯ ಪ್ರತಿಭೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಆದರೆ ಕಲಾವಿದರಲ್ಲಿರುವ ನೈಜ ಪ್ರತಿಭೆಯನ್ನು ಕೃತಕ ಬುದ್ಧಿಮತ್ತೆ ಅಥವಾ ಆಧುನಿಕ ಮಾಧ್ಯಮಗಳ ಮೂಲಕ ಸೃಷ್ಟಿಸಲು ಸಾಧ್ಯವಿಲ್ಲ. ನೈಜ ಕಲಾ ಪ್ರತಿಭೆಯನ್ನು ಅನಾವರಣಗೊಳಿಸಲು ಸರ್ಕಾರ ಇಂತಹ ವೇದಿಕೆಗಳನ್ನು ಕಲ್ಪಿಸಿರುವುದು ಶ್ಲಾಘನೀಯ ಎಂದರು.

ಮಡಿಕೇರಿ ಮತ್ತು ಕುಶಾಲನಗರದಲ್ಲಿ ನಿರ್ಮಾಣದ ಅಂತಿಮ ಹಂತದಲ್ಲಿರುವ ಕಲಾಭವನಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಕಲಾಪ್ರೇಮಿಗಳ ಪರವಾಗಿ ಮನವಿ ಮಾಡಿದರು.

ಕನ್ನಡ ಜಾಗೃತಿ ಸಮಿತಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಬಿ.ಎಸ್.ಲೋಕೇಶ್ ಸಾಗರ್ ಮಾತನಾಡಿ, ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವ ಅಪರೂಪದ ಸಂಸ್ಕೃತಿಯನ್ನು ಹೊಂದಿದೆ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಭಾಗೀರಥಿ, ಪದ್ಮಶ್ರೀ ಪುರಸ್ಕೃತೆ ರಾಣಿ ಮಾಚಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಹಾಗೂ ಜಿಲ್ಲಾ ಬರಹಗಾರರ ಸಂಘದ ಗೌರವ ಕೋಶಾಧಿಕಾರಿ ಸಂಪತ್ ಕುಮಾರ್ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸ್ವಾಗತಿಸಿದರು. ಜಯಲಕ್ಷ್ಮಿ ಮತ್ತು ತಂಡದವರು ವಂದೇ ಮಾತರಂ ಹಾಗೂ ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ನಿವೃತ್ತಿಗೊಳ್ಳಲಿರುವ ಸಹಾಯಕ ನಿರ್ದೇಶಕ ಕುಮಾರ್ ಅವರನ್ನು ಕಾರ್ಯಕ್ರಮದಲ್ಲಿ ಗಣ್ಯರು ಸನ್ಮಾನಿಸಿ ಗೌರವಿಸಿದರು.

ಬಾಲಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವಪ್ರತಿಭೆ ಎಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯುತ್ತಿವೆ. ಬಾಲಪ್ರತಿಭೆ ಮತ್ತು ಕಿಶೋರ ಪ್ರತಿಭೆ ವಿಭಾಗಗಳಲ್ಲಿ ಸುಗಮ ಸಂಗೀತ, ಜಾನಪದ ಗೀತೆ, ಶಾಸ್ತ್ರೀಯ ನೃತ್ಯ, ಕರ್ನಾಟಕ ಮತ್ತು ಹಿಂದೂಸ್ಥಾನಿ ವಾದ್ಯ ಸಂಗೀತ, ಶಾಸ್ತ್ರೀಯ ಸಂಗೀತ ಹಾಗೂ ಚಿತ್ರಕಲೆ ಸ್ಪರ್ಧೆಗಳು ಗಮನ ಸೆಳೆದವು.

ಜಿಲ್ಲೆಯ ಐದು ತಾಲ್ಲೂಕುಗಳ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನವೆಂಬರ್ 6ರಂದು ಯುವಪ್ರತಿಭೆ ಹಾಗೂ ಸಮೂಹ ಸ್ಪರ್ಧೆಗಳು ನಡೆಯಲಿವೆ.

Follow us Follow us
Share. WhatsApp Facebook Twitter Email Telegram Copy Link

Related Posts

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಿಲ್ಲಾಡಳಿತ ಮನವಿ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ; ಹಸಿರು ಪಟಾಕಿಗಳ ಬಳಕೆ ಕಡ್ಡಾಯ

ನವೆಂಬರ್ 5, 2026

ವನ್ಯಜೀವಿ ಹೆಜ್ಜೆ ಗುರುತು ಪತ್ತೆ

ನವೆಂಬರ್ 5, 2026

ರಾಜ್ಯ ಸರ್ಕಾರದಿಂದ ಬೆಲೆ ಏರಿಕೆಯ ಬರೆ: ಜನಸಾಮಾನ್ಯರು ಸಂಕಷ್ಟದಲ್ಲಿ – ರಾಷ್ಟ್ರಪತಿ ಆಳ್ವಿಕೆಗೆ ಕೊಡಗು ಬಿಜೆಪಿ ಎಸ್‌ಟಿ ಮೋರ್ಚಾ ಆಗ್ರಹ

ನವೆಂಬರ್ 5, 2026

ಮಡಿಕೇರಿಯಲ್ಲಿ ಗಮನ ಸೆಳೆದ ಕಲಾ ಪ್ರತಿಭೋತ್ಸವ; ಸಾಂಸ್ಕೃತಿಕ ಶ್ರೀಮಂತಿಕೆ ಕೊಡಗಿನ ಹೆಗ್ಗಳಿಕೆ: ಟಿ.ಪಿ.ರಮೇಶ್

ನವೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.5: ಕೊಡಗು ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿರುವ ಜಿಲ್ಲೆಯಾಗಿದ್ದು, ಇಲ್ಲಿನ ಜನರ ಸಂಸ್ಕೃತಿ, ಜೀವನಶೈಲಿ ಹಾಗೂ ಆಚಾರ-ವಿಚಾರಗಳು…

ವನ್ಯಜೀವಿ ಹೆಜ್ಜೆ ಗುರುತು ಪತ್ತೆ

ನವೆಂಬರ್ 5, 2026

ರಾಜ್ಯ ಸರ್ಕಾರದಿಂದ ಬೆಲೆ ಏರಿಕೆಯ ಬರೆ: ಜನಸಾಮಾನ್ಯರು ಸಂಕಷ್ಟದಲ್ಲಿ – ರಾಷ್ಟ್ರಪತಿ ಆಳ್ವಿಕೆಗೆ ಕೊಡಗು ಬಿಜೆಪಿ ಎಸ್‌ಟಿ ಮೋರ್ಚಾ ಆಗ್ರಹ

ನವೆಂಬರ್ 5, 2026

ಸುಂಟಿಕೊಪ್ಪದಲ್ಲಿ ದಿವಂಗತ ಬಿ.ಜಿ. ರಘುನಾಥ್ ನಾಯ್ಕ ಸ್ಮಾರಕ ದತ್ತಿ ನಿಧಿ ಕಾರ್ಯಕ್ರಮ

ನವೆಂಬರ್ 5, 2026

ಸುಂಟಿಕೊಪ್ಪದಲ್ಲಿ ಸಮಸ್ಯೆಗಳ ಸರಮಾಲೆ: ವೇವ್ ಸಂಸ್ಥೆ ಅಸಮಾಧಾನ; ತ್ಯಾಜ್ಯ ವಿಲೇವಾರಿ, ಹದಗೆಟ್ಟ ರಸ್ತೆಗಳು, ವೈದ್ಯರ ಕೊರತೆಗೆ ಆಕ್ರೋಶ – ಸಮಸ್ಯೆ ಪರಿಹಾರವಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ

ನವೆಂಬರ್ 5, 2026

ಐದು ದಶಕಗಳ ಭತ್ತದ ಕೃಷಿ ಅನುಭವಕ್ಕೂ ಈ ಬಾರಿ ಕೈಕೊಟ್ಟ ಫಸಲು; ಆರ್‌ಎನ್‌ಆರ್ ಭತ್ತದ ತಳಿಯ ಇಳುವರಿ ಕುಸಿತ: ರೈತ ಪಟ್ಟೆಮನೆ ಉದಯಕುಮಾರ್ ಅಳಲು

ನವೆಂಬರ್ 5, 2026

ಪನ್ಯ ತೋಟದಲ್ಲಿ ಹುಲಿ ಅಥವಾ ಚಿರತೆ ಹೆಜ್ಜೆ ಗುರುತು ಪತ್ತೆ : ಸಾರ್ವಜನಿಕರಲ್ಲಿ ಆತಂಕ

ನವೆಂಬರ್ 5, 2026

ಮಡಿಕೇರಿ ಲಯನ್ಸ್ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವದ ಅಮೃತ ಮಹೋತ್ಸವ ಆಚರಣೆ; ಕೃತಕ ಬುದ್ಧಿಮತ್ತೆಯ ವ್ಯವಸ್ಥೆ ನಮಗೇ ಬುದ್ಧಿ ಕಲಿಸುವಂತಾಗಿದೆ: ಅನಿಲ್ ಹೆಚ್.ಟಿ. ಆತಂಕ

ನವೆಂಬರ್ 5, 2026

ಕುಶಾಲನಗರ ‘ಕೂಡಾ’ ನೂತನ ಸದಸ್ಯ ಕಾರ್ಯದರ್ಶಿಯಾಗಿ ಪಿ.ವಿ.ದೀಪಕ್ ಅಧಿಕಾರ ಸ್ವೀಕಾರ

ನವೆಂಬರ್ 5, 2026

ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.