ನಾಪೋಕ್ಲು, NEWS DESK ನ.6: ನಾಪೋಕ್ಲು ಕೆಪಿಎಸ್ ಶಾಲೆಯಲ್ಲಿ ನಡೆದ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್.ಡಿ.ಎಂ.ಸಿ) ಸಭೆಯಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭಾಗವಹಿಸಿದರು.
ಸ್ವತಃ ಎಸ್.ಡಿ.ಎಂ.ಸಿ ಅಧ್ಯಕ್ಷರೂ ಆಗಿರುವ ಶಾಸಕ ಪೊನ್ನಣ್ಣ ಅವರು ಶಾಲೆಯ ವರದಿಯನ್ನು ಪಡೆದು, ಶಾಲೆಯ ಪ್ರಗತಿ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಕೂಲಂಕುಶವಾಗಿ ಪರಿಶೀಲನೆ ನಡೆಸಿದರು.
ಶಾಲೆಯಲ್ಲಿ ಮಕ್ಕಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದರು. ಮುಂಬರುವ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಾಲೋಚನೆ ನಡೆಸಿ, ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಉದಯ್ ಶಂಕರ್, ಮುಖ್ಯೋಪಾಧ್ಯಾಯ ವಿಶಾಲ್ ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

















