ಮಡಿಕೇರಿ, NEWS DESK ನ.6: ಸರ್ಕಾರಿ ನೌಕರರ ಹಿತದೃಷ್ಟಿಯಿಂದ ತುಟ್ಟಿಭತ್ಯೆಯನ್ನು ಶೇ.15.75ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಡಗು ಜಿಲ್ಲಾ ಘಟಕ ಹರ್ಷ ವ್ಯಕ್ತಪಡಿಸಿದೆ.
ನೌಕರರ ತುಟ್ಟಿಭತ್ಯೆಯನ್ನು ಶೇ.15.75ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿರುವ ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಕ್ಷರಿ ಅವರಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.
ಈ ಕುರಿತು ಸಂಘದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಎಂ.ಸಿ., ಕಾರ್ಯದರ್ಶಿ, ಖಜಾಂಚಿ, ಎಲ್ಲಾ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರು ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ನೌಕರರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದು ನೌಕರರಲ್ಲಿ ಸಂತಸ ಮೂಡಿಸಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

















