Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆ ಕ್ಷೇತ್ರದಲ್ಲಿ ಕಾನೂನುಬಾಹಿರವಾಗಿ ಮತದಾನದ ಹಕ್ಕು ರದ್ದಾಗಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್‌ಗೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಸವಾಲು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಕ್ಷೇತ್ರದಲ್ಲಿ ಕಾನೂನುಬಾಹಿರವಾಗಿ ಮತದಾನದ ಹಕ್ಕು ರದ್ದಾಗಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್‌ಗೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಸವಾಲು

ನವೆಂಬರ್ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ. 6: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟು ಮತದಾರರ ಮತದಾನದ ಹಕ್ಕನ್ನು ಕಾನೂನುಬಾಹಿರವಾಗಿ ರದ್ದುಪಡಿಸಲಾಗಿದೆ ಹಾಗೂ ಯಾರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬುದನ್ನು ಕಾಂಗ್ರೆಸ್ ಪಕ್ಷ ದಾಖಲೆ ಸಹಿತ ಬಹಿರಂಗಪಡಿಸಲಿ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಸವಾಲು ಹಾಕಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷವು ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಎಸ್‌ಐಆರ್ ಪ್ರಕ್ರಿಯೆ ಕುರಿತು ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದ್ದಾರೆ.

ಒಬ್ಬ ವ್ಯಕ್ತಿಯ ಹೆಸರು ಎರಡು ಕಡೆಗಳ ಮತದಾರರ ಪಟ್ಟಿಯಲ್ಲಿ ಇದ್ದಾಗ, ಒಂದು ಕಡೆಗಿನ ನೋಂದಣಿಯನ್ನು ರದ್ದುಪಡಿಸಿದರೆ, ಮೃತಪಟ್ಟವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದರೆ ಹಾಗೂ ವ್ಯಕ್ತಿ ಮತ್ತು ಅವರ ಕುಟುಂಬದವರು ಆ ಸ್ಥಳದಲ್ಲಿ ವಾಸವಿಲ್ಲದಿರುವ ಸಂದರ್ಭದಲ್ಲಿ ಪರಿಶೀಲನೆ ನಡೆಸಿ ಅವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಿದರೆ ಅದು ತಪ್ಪೇ? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಅಧಿಕಾರ ಪಡೆಯುವ ಏಕೈಕ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಾ ಸತ್ಯವನ್ನು ಮರೆಮಾಚಲು ಪ್ರಯತ್ನಿಸುತ್ತಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ವಾಸ್ತವಾಂಶಗಳನ್ನು ಜನರ ಮುಂದಿಡುವ ಕೆಲಸ ಮಾಡಿದೆ. ಇದನ್ನು ಸಹಿಸದ ಕಾಂಗ್ರೆಸ್ಸಿಗರು ಬಿಜೆಪಿ ಚುನಾವಣಾ ಆಯೋಗದ ವಕ್ತಾರರಂತೆ ವರ್ತಿಸುತ್ತಿದೆ ಎಂದು ಆರೋಪಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರು ಸುಖಾಸುಮ್ಮನೆ ನಮೂನೆ ಸಂಖ್ಯೆ 7ರ ಅರ್ಜಿಗಳನ್ನು ಭರ್ತಿ ಮಾಡಿ ಮತದಾರರನ್ನು ಪಟ್ಟಿಯಿಂದ ಹೊರಗಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಬಿಜೆಪಿ ವಿರುದ್ಧ ಈ ರೀತಿಯ ಆಧಾರರಹಿತ ಆರೋಪಗಳನ್ನು ಮಾಡುತ್ತಿರುವಾಗ ಬಿಜೆಪಿ ಅದಕ್ಕೆ ಉತ್ತರಿಸಬಾರದೇ? ಕಾಂಗ್ರೆಸ್ ನಾಯಕರೂ ಚುನಾವಣಾ ಆಯೋಗದ ವಕ್ತಾರರಂತೆ ಮಾತನಾಡುತ್ತಿದ್ದಾರೆಯೇ ಎಂದು ರಾಕೇಶ್ ದೇವಯ್ಯ ತಿರುಗೇಟು ನೀಡಿದ್ದಾರೆ.

ಚುನಾವಣಾ ಆಯೋಗದ ಪ್ರಕ್ರಿಯೆಯಲ್ಲಿ ಯಾವುದಾದರೂ ತಪ್ಪು ನಡೆದಿದ್ದರೆ ಅಥವಾ ಅನ್ಯಾಯವಾಗಿದ್ದರೆ, ಅದಕ್ಕೆ ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಸಂಗ್ರಹಿಸಿ ನ್ಯಾಯಾಲಯದ ಮೊರೆ ಹೋಗುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಆದರೆ ಕಾಂಗ್ರೆಸ್ ನಾಯಕರು ಆ ಮಾರ್ಗವನ್ನು ಅನುಸರಿಸದೆ ಕೇವಲ ಆರೋಪಗಳನ್ನು ಮಾಡುವುದೇಕೆ? ಅವರಿಗೆ ನ್ಯಾಯಾಲಯದ ಮೇಲೆ ನಂಬಿಕೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆಯಿಂದ ಎಷ್ಟು ಜನರಿಗೆ ಅನ್ಯಾಯವಾಗಿದೆ ಎಂಬುದನ್ನು ದಾಖಲೆಗಳ ಸಹಿತ ಜನರ ಮುಂದಿಡಲಿ. ರಾಷ್ಟ್ರೀಯ ನಾಯಕರನ್ನು ಮೆಚ್ಚಿಸುವ ಉದ್ದೇಶದಿಂದ ಕಾಂಗ್ರೆಸ್ಸಿಗರು ಕ್ಷೇತ್ರದ ಜನರನ್ನು ತಪ್ಪುದಾರಿಗೆಳೆಯುವ ಪ್ರಯತ್ನ ಮಾಡಬಾರದು. ವಿರಾಜಪೇಟೆ ಕ್ಷೇತ್ರದ ಮತದಾರರು ಪ್ರಜ್ಞಾವಂತರಾಗಿದ್ದು, ಪ್ರಜಾಪ್ರಭುತ್ವ, ಸಂವಿಧಾನ, ಮತದಾನ, ಚುನಾವಣಾ ಆಯೋಗ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸೇರಿದಂತೆ ಎಲ್ಲ ವಿಚಾರಗಳ ಬಗ್ಗೆ ಅರಿವು ಹೊಂದಿದ್ದಾರೆ ಎಂದು ರಾಕೇಶ್ ದೇವಯ್ಯ ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

ಗೂಂಡಾ ಕಾಯ್ದೆಯಡಿ ಕಳ್ಳತನ ಪ್ರಕರಣಗಳ ಆರೋಪಿ ಬಂಧನ; 25 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ನವೆಂಬರ್ 6, 2026

ಕ್ರೀಡಾಕೂಟದಲ್ಲಿ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೊಡಗಿನ ವಿದ್ಯಾರ್ಥಿಗಳು

ನವೆಂಬರ್ 6, 2026

ದೀಪಾವಳಿ ಹಬ್ಬಕ್ಕೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ಆಕರ್ಷಕ ಕೊಡುಗೆ

ನವೆಂಬರ್ 6, 2026

ವಿರಾಜಪೇಟೆ ಕ್ಷೇತ್ರದಲ್ಲಿ ಕಾನೂನುಬಾಹಿರವಾಗಿ ಮತದಾನದ ಹಕ್ಕು ರದ್ದಾಗಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್‌ಗೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಸವಾಲು

ನವೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ. 6: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ ವಿರಾಜಪೇಟೆ ವಿಧಾನಸಭಾ…

ಕ್ರೀಡಾಕೂಟದಲ್ಲಿ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೊಡಗಿನ ವಿದ್ಯಾರ್ಥಿಗಳು

ನವೆಂಬರ್ 6, 2026

ದೀಪಾವಳಿ ಹಬ್ಬಕ್ಕೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ಆಕರ್ಷಕ ಕೊಡುಗೆ

ನವೆಂಬರ್ 6, 2026

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಲು ವಿಮೆನ್ ಇಂಡಿಯಾ ಮೂವ್‌ಮೆಂಟ್ ಒತ್ತಾಯ

ನವೆಂಬರ್ 6, 2026

ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಕೊಡಗು ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸಿಎಂ, ಡಿಸಿಎಂ ಹಾಗೂ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರಿಗೆ ಅಭಿನಂದನೆ; ಸಲ್ಲಿಸಿದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಎಂ.ಸಿ.

ನವೆಂಬರ್ 6, 2026

ಭಾಗಮಂಡಲ ವಸತಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ; ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 6, 2026

ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ವಿಷ್ಣುಮೂರ್ತಿ ಕೋಲ; ಚಾಮುಂಡಿ ಉತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿ; ಪೇಟೆ ಸಂಚಾರದ ಮೂಲಕ ಪ್ರಸಾದ ವಿತರಣೆ

ನವೆಂಬರ್ 6, 2026

ನಿವೃತ್ತ ಅಂಗನವಾಡಿ ಶಿಕ್ಷಕಿ ನಳಿನಿ ರಮೇಶ್ ಅವರಿಗೆ ಸನ್ಮಾನ

ನವೆಂಬರ್ 6, 2026

ಹೆಬ್ಬಾಲೆ ಶಾಲೆಯಲ್ಲಿ ಹಸಿರು ದೀಪಾವಳಿ ಆಚರಣೆ; ಸ್ವಸ್ಥ, ಸ್ವಚ್ಛ ಹಾಗೂ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ

ನವೆಂಬರ್ 6, 2026

ನಾಪೋಕ್ಲು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರಿಂದ ಭೂಮಿಪೂಜೆ

ನವೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.