ವಿರಾಜಪೇಟೆ, NEWS DESK ನ.7: ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಭಾಗದ ನಾಂಗಾಲ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಹಿಳಾ ಸಮಾಜದ ನೂತನ ಕಟ್ಟಡದ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪೊನ್ನಣ್ಣ ಅವರು, ಮಹಿಳಾ ಸಮಾಜದ ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಆದಷ್ಟು ಶೀಘ್ರದಲ್ಲಿ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜೋಕಿಮ್, ಬಿಟ್ಟಂಗಾಲ ವಲಯ ಕಾಂಗ್ರೆಸ್ ಅಧ್ಯಕ್ಷ ಲೋಹಿತ್, ಪಕ್ಷದ ಮುಖಂಡರಾದ ಕಂಜಿತಂಡ ಪೂವಣ್ಣ, ಕುಪ್ಪಂಡ ಬೋಪಣ್ಣ, ಮಹಿಳಾ ಸಮಾಜದ ಅಧ್ಯಕ್ಷೆ ಬೋಪ್ಪಂಡ ಬೇಬಿ, ಬುಟ್ಟಿಯಂಡ ಸೀತಮ್ಮ, ಚೆಂದಂಡ ಪೊನ್ನಣ್ಣ ಸೇರಿದಂತೆ ಮಹಿಳಾ ಸಮಾಜದ ಸರ್ವ ಸದಸ್ಯರು ಉಪಸ್ಥಿತರಿದ್ದರು.

















