Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ, NEWS DESK ನ. 7: ಸೋಮವಾರಪೇಟೆ ಸ್ಥಳೀಯ ಯೋಜನಾ ಪ್ರದೇಶದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮಾಸ್ಟರ್ ಪ್ಲಾನ್ (ಮಹಾಯೋಜನೆ) ರೂಪಿಸಲು ಸರ್ಕಾರ ಮುಂದಾಗಿದ್ದು, ಸಾರ್ವಜನಿಕರು ತಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಸಲ್ಲಿಸುವ ಮೂಲಕ ಸಹಕರಿಸಬೇಕೆಂದು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎ. ಆದಂ ಮನವಿ ಮಾಡಿದ್ದಾರೆ.

ಇಂದು ಸೋಮವಾರಪೇಟೆ ಯೋಜನಾ ಪ್ರಾಧಿಕಾರದ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಸೋಮವಾರಪೇಟೆ ಯೋಜನಾ ಪ್ರಾಧಿಕಾರ ಈವರೆಗೆ ಸುಮಾರು 150 ಕಡತಗಳನ್ನು ವಿಲೇವಾರಿ ಮಾಡಿದೆ ಎಂದು ತಿಳಿಸಿದರು.

ಈ ಹಿಂದೆ ಸೋಮವಾರಪೇಟೆ ಯೋಜನಾ ಪ್ರದೇಶದ ವ್ಯಾಪ್ತಿಯನ್ನು ಹೊರತುಪಡಿಸಿ ತಾಲೂಕಿನ ಇತರೆ ಭಾಗಗಳ ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಮಡಿಕೇರಿಗೆ ತೆರಳಬೇಕಾಗಿತ್ತು. ಸಾರ್ವಜನಿಕರ ಸಮಸ್ಯೆಯನ್ನು ಮನಗಂಡ ಶಾಸಕ ಮಂತರ್ ಗೌಡ ಅವರು ಸರ್ಕಾರದ ಗಮನ ಸೆಳೆದ ಪರಿಣಾಮ, ಇದೀಗ ತಾಲೂಕಿನ ಎಲ್ಲಾ ಪ್ರದೇಶಗಳ ಜನರು ಸೋಮವಾರಪೇಟೆ ಪ್ರಾಧಿಕಾರದ ಕಚೇರಿಯಲ್ಲಿಯೇ ಸಂಬಂಧಿಸಿದ ಕೆಲಸಗಳನ್ನು ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಪ್ರಸ್ತುತ ಸಾರ್ವಜನಿಕರ ಲೇಔಟ್, ಭೂ ಪರಿವರ್ತನೆ ಹಾಗೂ ನಕ್ಷೆ ಅನುಮೋದನೆ ಸೇರಿದಂತೆ ವಿವಿಧ ಕಾರ್ಯಗಳನ್ನು ತ್ವರಿತವಾಗಿ ಮಾಡಿಕೊಡಲಾಗುತ್ತಿದೆ. ಆದರೆ, ಸೋಮವಾರಪೇಟೆ ಯೋಜನಾ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾಸ್ಟರ್ ಪ್ಲಾನ್ ಇಲ್ಲದಿರುವುದು ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಮಾಸ್ಟರ್ ಪ್ಲಾನ್ ಜಾರಿಯಾದಲ್ಲಿ ಗೃಹ, ವಾಣಿಜ್ಯ ಹಾಗೂ ಇತರೆ ಆಸ್ತಿಗಳ ಸಮಗ್ರ ಮಾಹಿತಿ ದಾಖಲಾಗಲಿದ್ದು, ಭವಿಷ್ಯದ ಯೋಜಿತ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 10(1)ರ ಅನ್ವಯ ಮಾಸ್ಟರ್ ಪ್ಲಾನ್ ರಚಿಸಲು ಸರ್ಕಾರ ಸಾರ್ವಜನಿಕರಿಂದ ಸಲಹೆ ಮತ್ತು ಸೂಚನೆಗಳನ್ನು ಆಹ್ವಾನಿಸಿದೆ. ಈ ಕುರಿತು ಈಗಾಗಲೇ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಆಸಕ್ತರು ನವೆಂಬರ್ 19ರೊಳಗೆ ತಮ್ಮ ಲಿಖಿತ ಸಲಹೆಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

ಸೋಮವಾರಪೇಟೆ ಯೋಜನಾ ಪ್ರಾಧಿಕಾರದ ವ್ಯಾಪ್ತಿ ಚಿಕ್ಕದಾಗಿರುವುದರಿಂದ ಆರ್ಥಿಕ ಸಂಪನ್ಮೂಲ ಕ್ರೋಡೀಕರಣ ಕಷ್ಟಕರವಾಗಿದೆ. ಅಲ್ಲದೆ, ಪ್ರಾಧಿಕಾರದಲ್ಲಿ ಸಂಗ್ರಹವಾಗುವ ಆದಾಯದಿಂದಲೇ ಸಿಬ್ಬಂದಿಗಳಿಗೆ ವೇತನ ಪಾವತಿಸಬೇಕಾಗಿರುವುದರಿಂದ ಆದಾಯದ ಮೂಲಗಳನ್ನು ಹೆಚ್ಚಿಸುವ ಅನಿವಾರ್ಯತೆ ಇದೆ ಎಂದು ಅವರು ವಿವರಿಸಿದರು.

ಸಭೆಯಲ್ಲಿ ಪ್ರಾಧಿಕಾರದ ಸದಸ್ಯರಾದ ಬಸವರಾಜ್, ಲೋಹಿತಾಶ್ವ, ದರ್ಶನ್, ಖಾಯಂ ಸದಸ್ಯ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್ ಕುಮಾರ್ ಮತ್ತು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.7: ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಭಾಗದ ನಾಂಗಾಲ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಹಿಳಾ ಸಮಾಜದ ನೂತನ…

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026

ಗೂಂಡಾ ಕಾಯ್ದೆಯಡಿ ಕಳ್ಳತನ ಪ್ರಕರಣಗಳ ಆರೋಪಿ ಬಂಧನ; 25 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ನವೆಂಬರ್ 6, 2026

ವಿರಾಜಪೇಟೆ ಕ್ಷೇತ್ರದಲ್ಲಿ ಕಾನೂನುಬಾಹಿರವಾಗಿ ಮತದಾನದ ಹಕ್ಕು ರದ್ದಾಗಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್‌ಗೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಸವಾಲು

ನವೆಂಬರ್ 6, 2026

ಕ್ರೀಡಾಕೂಟದಲ್ಲಿ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೊಡಗಿನ ವಿದ್ಯಾರ್ಥಿಗಳು

ನವೆಂಬರ್ 6, 2026

ದೀಪಾವಳಿ ಹಬ್ಬಕ್ಕೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ಆಕರ್ಷಕ ಕೊಡುಗೆ

ನವೆಂಬರ್ 6, 2026

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಲು ವಿಮೆನ್ ಇಂಡಿಯಾ ಮೂವ್‌ಮೆಂಟ್ ಒತ್ತಾಯ

ನವೆಂಬರ್ 6, 2026

ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಕೊಡಗು ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸಿಎಂ, ಡಿಸಿಎಂ ಹಾಗೂ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರಿಗೆ ಅಭಿನಂದನೆ; ಸಲ್ಲಿಸಿದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಎಂ.ಸಿ.

ನವೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.