Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.7: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ರಾಜಾಸೀಟು ರಸ್ತೆ ಅಭಿವೃದ್ಧಿ, ಸಂಪಾಜೆಯಿಂದ ಕುಶಾಲನಗರದವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಡೆಗೆ ಕೈಗೊಂಡ ಕ್ರಮಗಳು, ಕುಶಾಲನಗರ-ಕೂಡಿಗೆ ರಸ್ತೆ ಹಾಗೂ ವಿರಾಜಪೇಟೆ-ಗೋಣಿಕೊಪ್ಪ ರಸ್ತೆ ಸೇರಿದಂತೆ ವಿವಿಧ ರಸ್ತೆ ಅಭಿವೃದ್ಧಿ ಮತ್ತು ಸುರಕ್ಷತಾ ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ರಾಜಾಸೀಟು ರಸ್ತೆ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು. 7.50 ಮೀಟರ್ ಅಗಲ ಹಾಗೂ 720 ಮೀಟರ್ ಉದ್ದದ ರಸ್ತೆಯನ್ನು ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ನಗರಾಭಿವೃದ್ಧಿ ಯೋಜನಾ ಶಾಖೆಯ ಕಾರ್ಯಪಾಲಕ ಎಂಜಿನಿಯರ್ ಡಿ.ಶ್ರೀನಿವಾಸ್ ತಿಳಿಸಿದರು. ಒಂದು ವಾರದಲ್ಲಿ ಕಾಂಕ್ರೀಟ್ ಕಾಮಗಾರಿ ಆರಂಭಿಸಿ, 20 ದಿನಗಳ ಕ್ಯೂರಿಂಗ್ ಅವಧಿಯೊಂದಿಗೆ ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶವಿದೆ ಎಂದರು.

ಕಾಮಗಾರಿ ಗುಣಮಟ್ಟ ಕಾಪಾಡಲು ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಕುರಿತು ಚರ್ಚಿಸಲಾಯಿತು. ಈ ಸಂಬಂಧ ವಾಹನ ಸಂಚಾರ ಮಾರ್ಗ ಬದಲಾವಣೆಯ ಬಗ್ಗೆ ಅಗತ್ಯ ವರದಿ ನೀಡುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಂಪಾಜೆ-ಕುಶಾಲನಗರ ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮ

ಸಂಪಾಜೆ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚೆಗೆ ಸರಣಿ ಅಪಘಾತಗಳು ಸಂಭವಿಸಿ ಸಾವು-ನೋವು ಉಂಟಾಗಿರುವ ಹಿನ್ನೆಲೆಯಲ್ಲಿ ಜೀಬ್ರಾ ಕ್ರಾಸ್, ಕ್ಯಾಟ್ ಐಸ್, ರಸ್ತೆ ಸುರಕ್ಷತಾ ಫಲಕ ಸೇರಿದಂತೆ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಹೆದ್ದಾರಿ ವಿಭಾಗದ ಎಂಜಿನಿಯರ್ ಸಂಜೀವ್ ಕುಮಾರ್ ಮಾತನಾಡಿ, ಅಗತ್ಯ ಕಾಮಗಾರಿಗಳಿಗಾಗಿ ರಾಷ್ಟ್ರೀಯ ಹೆದ್ದಾರಿ ವಿಭಾಗದಿಂದ 24.54 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಕ್ಯಾಟ್ ಐಸ್, ಸೈನ್ ಬೋರ್ಡ್ ಹಾಗೂ ಜೀಬ್ರಾ ಕ್ರಾಸ್ ಅಳವಡಿಸಲಾಗುವುದು ಎಂದು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಕಾಟಿಕೇರಿವರೆಗಿನ ಡಾಂಬರು ರಸ್ತೆ ನವೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ರಸ್ತೆ ಸುರಕ್ಷತಾ ಫಲಕಗಳು ಹಾಗೂ ಥರ್ಮೋಪ್ಲಾಸ್ಟಿಕ್ ಪೇಂಟಿಂಗ್ ಮಾಡಲಾಗಿದೆ. ಕಾಟಿಕೇರಿಯಿಂದ ಕುಶಾಲನಗರದವರೆಗೆ ಥರ್ಮೋಪ್ಲಾಸ್ಟಿಕ್ ಪೇಂಟಿಂಗ್ ಮತ್ತು ಕ್ಯಾಟ್ ಐಸ್ ಅಳವಡಿಸಲಾಗುವುದು ಎಂದರು.

ಆನೆಕಾಡು ಪ್ರದೇಶದಲ್ಲಿ ವಾಹನಗಳ ವೇಗ ನಿಯಂತ್ರಿಸಲು ಆರು ಕಡೆ ವೈಜ್ಞಾನಿಕ ಹಂಪ್ಸ್ ಅಳವಡಿಸಲಾಗಿದ್ದು, ರಸ್ತೆ ಸುರಕ್ಷತಾ ಫಲಕಗಳನ್ನು ಕೂಡ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.

10 ತಿಂಗಳಲ್ಲಿ 65 ಮಂದಿ ರಸ್ತೆ ಅಪಘಾತಕ್ಕೆ ಬಲಿ

ಜಿಲ್ಲಾ ರೋಲ್ ಔಟ್ ಮ್ಯಾನೇಜರ್ ಸುಯೋಗ್ ಮಾಹಿತಿ ನೀಡಿ, ಜನವರಿಯಿಂದ ನವೆಂಬರ್ 5ರವರೆಗೆ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳಿಂದ 65 ಮಂದಿ ಮೃತಪಟ್ಟಿದ್ದು, 57 ಜನರಿಗೆ ಗಂಭೀರ ಗಾಯಗಳಾಗಿವೆ ಹಾಗೂ 250 ಮಂದಿ ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದಾರೆ ಎಂದು ತಿಳಿಸಿದರು.

ಕುಶಾಲನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 12, ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 11, ಮಡಿಕೇರಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ 8, ಸುಂಟಿಕೊಪ್ಪ ಮತ್ತು ವಿರಾಜಪೇಟೆ ಗ್ರಾಮೀಣ ಠಾಣಾ ವ್ಯಾಪ್ತಿಗಳಲ್ಲಿ ತಲಾ 6 ಹಾಗೂ ಶನಿವಾರಸಂತೆ ಮತ್ತು ಸೋಮವಾರಪೇಟೆ ಠಾಣಾ ವ್ಯಾಪ್ತಿಗಳಲ್ಲಿ ತಲಾ 5 ಅಪಘಾತಗಳು ಸಂಭವಿಸಿರುವುದಾಗಿ ಮಾಹಿತಿ ನೀಡಿದರು.

ಈ ಬಗ್ಗೆ ಕಳವಳ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಅಪಘಾತ ತಡೆಗೆ ಅಧಿಕಾರಿಗಳು ಇನ್ನಷ್ಟು ಎಚ್ಚರಿಕೆ ವಹಿಸಬೇಕು. ಅಗತ್ಯವಿರುವ ಸ್ಥಳಗಳಲ್ಲಿ ವಾಹನ ವೇಗ ನಿಯಂತ್ರಣ ವ್ಯವಸ್ಥೆ ಅಳವಡಿಸುವುದು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಗೋಣಿಕೊಪ್ಪ-ಹಾತೂರು-ವಿರಾಜಪೇಟೆ ಹಾಗೂ ಗೋಣಿಕೊಪ್ಪ-ದೇವರಪುರ-ತಿತಿಮತಿ ಮಾರ್ಗಗಳ ಜಂಕ್ಷನ್‌ಗಳು, ತಿರುವುಗಳು ಮತ್ತು ಅಪಘಾತ ವಲಯಗಳಲ್ಲಿ ಥರ್ಮೋಪ್ಲಾಸ್ಟಿಕ್ ಲೇನ್ ಮಾರ್ಕಿಂಗ್, ಕ್ಯಾಟ್ ಐಸ್ ಹಾಗೂ ರಸ್ತೆ ಸೂಚನಾ ಫಲಕಗಳನ್ನು ಅಳವಡಿಸಿರುವ ಕುರಿತು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಪ್ರಭು ಮಾಹಿತಿ ನೀಡಿದರು.

ಸಾರಿಗೆ ಕ್ಷೇಮಾಭಿವೃದ್ಧಿ ಮತ್ತು ರಸ್ತೆ ಸುರಕ್ಷತಾ ಯೋಜನೆಯಡಿ ಲಭ್ಯವಿರುವ 3 ಲಕ್ಷ ರೂ. ಅನುದಾನದಲ್ಲಿ ಅಗತ್ಯ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಸಲಹೆ ನೀಡಿದರು.

ಸಭೆಯಲ್ಲಿ ಪಂಚಾಯತ್ ರಾಜ್ ಎಂಜಿನಿಯರ್ ಜಿ.ಎಚ್.ನಾಯಕ್, ಆರ್‌ಟಿಒ ಇನ್ಸ್‌ಪೆಕ್ಟರ್ ಪ್ರದೀಪ್, ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕ ರಾಮಚಂದ್ರ ದರ್ಶನ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳಾದ ಗಿರೀಶ್, ಸತೀಶ್, ಕುಮಾರ್, ನಗರಸಭೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹೇಮಂತ್ ಕುಮಾರ್, ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚನ್ನರಾಯಪಟ್ಟಣ, NEWS DESK ನ.7: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಹೋಬಳಿಯ ಶ್ರೀ ಕ್ಷೇತ್ರ ಕಬ್ಬಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ…

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026

ಗೂಂಡಾ ಕಾಯ್ದೆಯಡಿ ಕಳ್ಳತನ ಪ್ರಕರಣಗಳ ಆರೋಪಿ ಬಂಧನ; 25 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ನವೆಂಬರ್ 6, 2026

ವಿರಾಜಪೇಟೆ ಕ್ಷೇತ್ರದಲ್ಲಿ ಕಾನೂನುಬಾಹಿರವಾಗಿ ಮತದಾನದ ಹಕ್ಕು ರದ್ದಾಗಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್‌ಗೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಸವಾಲು

ನವೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.