ಮಡಿಕೇರಿ, NEWS DESK ನ.7: ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆಯು ನ.8ರಂದು ಬೆಳಿಗ್ಗೆ 10.30ಕ್ಕೆ ನಾಪೋಕ್ಲು ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ನಡೆಯಲಿದೆ.
ಸಮಾಜದ ಅಧ್ಯಕ್ಷ ಮುಂಡಂಡ ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಸಮಾಜದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಾರ್ಯದರ್ಶಿ ಅಜಿತ್ ನಾಣಯ್ಯ ಮನವಿ ಮಾಡಿದ್ದಾರೆ.
ಪ್ರಸ್ತುತ ಆಡಳಿತ ಮಂಡಳಿಯ ಮೂರು ವರ್ಷಗಳ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನೂತನ ಆಡಳಿತ ಮಂಡಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಮಾಜದ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ಸದಸ್ಯರು ತಮ್ಮ ಎರಡು ಸ್ಟ್ಯಾಂಪ್ ಸೈಜ್ ಫೋಟೋಗಳೊಂದಿಗೆ ಕೊಡವ ಸಮಾಜದ ಕಚೇರಿಗೆ ಭೇಟಿ ನೀಡಿ ಗುರುತಿನ ಚೀಟಿ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಒಂದು ವೇಳೆ ಚುನಾವಣೆ ನಡೆದರೆ ಗುರುತಿನ ಚೀಟಿ ಹೊಂದಿರುವ ಸದಸ್ಯರಿಗೆ ಮಾತ್ರ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುವುದು.
ಆದ್ದರಿಂದ ಸಮಾಜದ ಎಲ್ಲಾ ಸದಸ್ಯರು ಚುನಾವಣೆಗೆ ಮುಂಚಿತವಾಗಿ ಗುರುತಿನ ಚೀಟಿ ಪಡೆದುಕೊಳ್ಳುವುದರ ಜೊತೆಗೆ ನ.8ರಂದು ನಡೆಯಲಿರುವ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸುವಂತೆ ಕಾರ್ಯದರ್ಶಿ ಅಜಿತ್ ನಾಣಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















