Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ ಬಸ್ ಪ್ರಯಾಣ ದರವನ್ನು ನವೆಂಬರ್ 11ರಿಂದ ಶೇ.15ರಿಂದ 20ರಷ್ಟು ಹೆಚ್ಚಿಸಲು ಕೊಡಗು ಬಸ್ ಮಾಲೀಕರ ಅಸೋಸಿಯೇಷನ್ ನಿರ್ಧರಿಸಿದೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಅಧ್ಯಕ್ಷ ಬಿ. ಜನಾರ್ಧನ ಪ್ರಭು ಮಾತನಾಡಿ, ಕಳೆದ ಎರಡು ವರ್ಷಗಳ ಬಳಿಕ ಅನಿವಾರ್ಯವಾಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗುತ್ತಿದೆ. ಖಾಸಗಿ ಬಸ್‌ಗಳಲ್ಲಿ ಪ್ರಸ್ತುತ ಇರುವ ಕನಿಷ್ಠ 15 ರೂ. ದರವನ್ನು ಹೊರತುಪಡಿಸಿ ಉಳಿದ ಪ್ರಯಾಣ ದರಗಳನ್ನು ಹೆಚ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಈಗಾಗಲೇ ಶೇ.23ರಷ್ಟು ಪ್ರಯಾಣ ದರ ಹೆಚ್ಚಿಸಿದ್ದು, ಕಳೆದ ಎಂಟು ವರ್ಷಗಳಲ್ಲಿ ಇದು ಮೂರನೇ ದರ ಏರಿಕೆಯಾಗಿದೆ. ಇದೇ ಹಿನ್ನೆಲೆಯಲ್ಲಿ ಖಾಸಗಿ ಬಸ್‌ಗಳ ಪ್ರಯಾಣ ದರವನ್ನೂ ಹೆಚ್ಚಿಸುವ ಅನಿವಾರ್ಯತೆ ಎದುರಾಗಿದೆ ಎಂದು ತಿಳಿಸಿದರು.

ನೂರಾರು ಕುಟುಂಬಗಳ ಜೀವನಾಧಾರ

ಕೊಡಗು ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಪ್ರಸ್ತುತ 110 ಖಾಸಗಿ ಬಸ್‌ಗಳು ಸಂಚರಿಸುತ್ತಿವೆ. ಪ್ರತಿ ಬಸ್‌ನಲ್ಲಿ ಕನಿಷ್ಠ 10ರಿಂದ 15 ಮಂದಿ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನೂರಾರು ಕುಟುಂಬಗಳು ಈ ಉದ್ಯಮವನ್ನು ಅವಲಂಬಿಸಿವೆ. ಸಿಬ್ಬಂದಿ, ಕಾರ್ಮಿಕರು ಹಾಗೂ ಅವರ ಕುಟುಂಬಗಳ ಹಿತದೃಷ್ಟಿಯಿಂದ ಮತ್ತು ಸಾರ್ವಜನಿಕರಿಗೆ ಸಾರಿಗೆ ಸೇವೆಯನ್ನು ನಿರಂತರವಾಗಿ ಒದಗಿಸುವ ಉದ್ದೇಶದಿಂದ ದರ ಹೆಚ್ಚಳ ಅನಿವಾರ್ಯವಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿದೆ ಎಂದರು.

ಸರ್ಕಾರದ ‘ಶಕ್ತಿ’ ಯೋಜನೆಯಿಂದ ಸಂಕಷ್ಟ

ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿರುವುದರಿಂದ ಜಿಲ್ಲೆಯ ಖಾಸಗಿ ಬಸ್‌ಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಯೋಜನೆಯ ಆರಂಭದಲ್ಲಿಯೇ ಖಾಸಗಿ ಬಸ್‌ಗಳಿಗೂ ಈ ಸೌಲಭ್ಯ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಸರ್ಕಾರ ಈ ಬಗ್ಗೆ ಆಸಕ್ತಿ ತೋರಲಿಲ್ಲ. ಖಾಸಗಿ ಬಸ್‌ಗಳಿಗೆ ವಿಧಿಸುವ ತೆರಿಗೆಯಲ್ಲಾದರೂ ವಿನಾಯಿತಿ ನೀಡುವಂತೆ ಕೋರಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೊರೋನಾ ಅವಧಿಯಲ್ಲಿ 50 ಬಸ್‌ಗಳ ಸಂಚಾರ ಸ್ಥಗಿತ

ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಉಂಟಾದ ಆರ್ಥಿಕ ಸಂಕಷ್ಟದಿಂದಾಗಿ ಕೊಡಗು ಜಿಲ್ಲೆಯಲ್ಲಿ ಸುಮಾರು 50 ಖಾಸಗಿ ಬಸ್‌ಗಳ ಸಂಚಾರವನ್ನು ಶಾಶ್ವತವಾಗಿ ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ಬಸ್‌ಗಳ ಬಿಡಿಭಾಗಗಳ ಬೆಲೆ ದುಬಾರಿಯಾಗಿದ್ದು, ಡೀಸೆಲ್ ದರ 100 ರೂ. ಗಡಿ ದಾಟುತ್ತಿದೆ. ಜೊತೆಗೆ ವಿಮಾ ಮೊತ್ತವೂ ಹೆಚ್ಚಾಗಿರುವುದರಿಂದ ಬಸ್‌ಗಳ ನಿರ್ವಹಣೆ ಕಷ್ಟಕರವಾಗಿದೆ ಎಂದು ಜನಾರ್ಧನ ಪ್ರಭು ವಿವರಿಸಿದರು.

ಇಷ್ಟೆಲ್ಲಾ ಸಂಕಷ್ಟಗಳ ನಡುವೆಯೂ ಖಾಸಗಿ ಬಸ್‌ಗಳಲ್ಲಿ ಶಿಕ್ಷಣಕ್ಕಾಗಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಹಾಗೂ ಪ್ರತಿನಿತ್ಯ ಖಾಸಗಿ ಬಸ್‌ಗಳನ್ನು ಅವಲಂಬಿಸುವ ಪ್ರಯಾಣಿಕರಿಗೆ ಶೇ.20ರಷ್ಟು ರಿಯಾಯಿತಿ ಮುಂದುವರಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಉಪಾಧ್ಯಕ್ಷ ಕೆ.ಯು. ಪೂಣಚ್ಚ, ಖಜಾಂಚಿ ಎಂ.ಕೆ.ಎ. ಜಯಂತ್, ನಿರ್ದೇಶಕರಾದ ಕಾದೀರ ಉಮೇಶ್ ಪಳಂಗಪ್ಪ ಹಾಗೂ ಪಿ.ಎಂ. ದಿನಲ್ ಚಂಗಪ್ಪ ಉಪಸ್ಥಿತರಿದ್ದರು.


ಕೊಡಗಿನ ಪ್ರಮುಖ ಮಾರ್ಗಗಳ ಪರಿಷ್ಕೃತ ಖಾಸಗಿ ಬಸ್ ದರ

ಮಾರ್ಗ ಹಳೆಯ ದರ ಹೊಸ ದರ
ಮಡಿಕೇರಿ – ವಿರಾಜಪೇಟೆ ₹45 ₹50
ಮಡಿಕೇರಿ – ಸೋಮವಾರಪೇಟೆ ₹60 ₹70
ವಿರಾಜಪೇಟೆ – ಗೋಣಿಕೊಪ್ಪ ₹32 ₹40
ಸೋಮವಾರಪೇಟೆ – ಶನಿವಾರಸಂತೆ ₹30 ₹40

ಪರಿಷ್ಕೃತ ದರಗಳು ನವೆಂಬರ್ 11ರಿಂದ ಜಾರಿಗೆ ಬರಲಿವೆ.

Follow us Follow us
Share. WhatsApp Facebook Twitter Email Telegram Copy Link

Related Posts

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆಯು ನ.8ರಂದು ಬೆಳಿಗ್ಗೆ 10.30ಕ್ಕೆ ನಾಪೋಕ್ಲು ಕೊಡವ…

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026

ಗೂಂಡಾ ಕಾಯ್ದೆಯಡಿ ಕಳ್ಳತನ ಪ್ರಕರಣಗಳ ಆರೋಪಿ ಬಂಧನ; 25 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ನವೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.